ಉತ್ತರ ಪ್ರದೇಶ | ದೂರು ನೀಡಲು ಹೋದ ದಲಿತ ಮಹಿಳೆಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿದ ಪೊಲೀಸ್‌ ಅಧಿಕಾರಿ

Date:

ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್‌ ಅಧಿಕಾರಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್​ ಇನ್ಸ್​ಪೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆ ಕೆಲವು ಪುರುಷರು ಕಿರುಕುಳ ನೀಡುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಲು ಸ್ಥಳೀಯ ಝಂಘೈ ಪೊಲೀಸ್ ಠಾಣೆಗೆ ಹೋಗಿದ್ದರು.

ದಲಿತ ಸಮುದಾಯದ ಮಹಿಳೆಯನ್ನು ಸೆಪ್ಟೆಂಬರ್ 21 ರಂದು ಸಂಜೆ ಸಬ್ ಇನ್ಸ್‌ಪೆಕ್ಟರ್ ಪಾಂಡೆ ಪೊಲೀಸ್ ಔಟ್‌ಪೋಸ್ಟ್‌ಗೆ ಕರೆದಿದ್ದಾರೆ. ಆರೋಪಿಗಳನ್ನು ಬಂಧಿಸಲು ಹೋಗುವ ನೆಪದಲ್ಲಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಮಾದಕ ದ್ರವ್ಯ ಬೆರೆಸಿದ ತಂಪು ಪಾನೀಯವನ್ನು ನೀಡಿ ಆಕೆ ಪ್ರಜ್ಞೆ ತಪ್ಪಿದ್ದಾಗ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅತ್ಯಾಚಾರಕ್ಕೊಳಗಾಗಿ ಸಹಾಯಕ್ಕೆ ಅಂಗಲಾಚುವ 12ರ ಬಾಲಕಿ: ಮಧ್ಯಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ಅಮಾನುಷ ದೃಶ್ಯ

ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ಸಂತ್ರಸ್ತೆ ತನ್ನ ಸಾಕ್ಷ್ಯದಲ್ಲಿ ಝಂಘೈ ಪೊಲೀಸ್ ಹೊರಠಾಣೆ ಉಸ್ತುವಾರಿ ಸುಧೀರ್ ಕುಮಾರ್ ಪಾಂಡೆ ಸೆಪ್ಟೆಂಬರ್ 21 ರಂದು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಸರಾಯಿ ಮಾಮ್ರೇಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿರುವ ಪಾಂಡೆ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಮಾರ್ ಹೇಳಿದರು. ಸದ್ಯ ಪಾಂಡೆ ತಲೆಮರೆಸಿಕೊಂಡಿದ್ದಾನೆ.

ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಅವರು ಹಂಡಿಯಾ ಎಸಿಪಿ ಸುಧೀರ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...