ಸಂವಿಧಾನ ದಿನದಂದು ನೇಪಾಳಿ ಸೇರಿದಂತೆ ಒಂಬತ್ತು ಪ್ರಾದೇಶಿಕ ಭಾಷೆಗಳಲ್ಲಿ ಸಂವಿಧಾನ ಬಿಡುಗಡೆ

Date:

ಈ ವರ್ಷದ ಸಂವಿಧಾನ ದಿನಾಚರಣೆಯ ಅಂಗವಾಗಿ, ನೇಪಾಳಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ನೇಪಾಳಿಯಲ್ಲಿಯೂ ಸಂವಿಧಾನ ಬಿಡುಗಡೆ ಮಾಡುವುದರಿಂದ ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ, ಧಾರ್ಮಿಕ ಸಂಬಂಧಗಳನ್ನು ಹೊಂದಿರುವ ನೆರೆಯ ನೇಪಾಳದ ಜನರು ತಮ್ಮದೇ ಆದ ಭಾಷೆಯಲ್ಲಿ ಸಂವಿಧಾನದ ಬಗ್ಗೆ ತಿಳಿಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಯಾಳಂ, ಮರಾಠಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮೀಸ್ ಸೇರಿದಂತೆ ಒಟ್ಟು ಒಂಬತ್ತು ಭಾಷೆಗಳಲ್ಲಿ ಸಂವಿಧಾನ ಬಿಡುಗಡೆಯಾಗಲಿದೆ. ಈ ಅನುವಾದಗಳನ್ನು ಕೇಂದ್ರ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆ ಸಿದ್ಧಪಡಿಸಿದೆ. ಈ ಕಾರ್ಯಕ್ರಮವು ಬುಧವಾರ ಹಳೆಯ ಸಂಸತ್ತಿನ ಕಟ್ಟಡದ ಐತಿಹಾಸಿಕ ಕೇಂದ್ರ ಸಭಾಂಗಣದಲ್ಲಿ(ಸಂವಿಧಾನ ಸದನ) ನಡೆಯಲಿದೆ.

ಇದನ್ನು ಓದಿದ್ದೀರಾ? ಸಂವಿಧಾನ ದಿನ | ಅಂಬೇಡ್ಕರ್ ಸಂವಿಧಾನವನ್ನು ಉಳಿಸಿಕೊಳ್ಳುವುದು ಹೇಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಅಧ್ಯಕ್ಷತೆ ವಹಿಸಿ ಭಾಷಣ ಮಾಡಲಿದ್ದಾರೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಉಭಯ ಸದನಗಳ ಸದಸ್ಯರು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ರಾಜತಾಂತ್ರಿಕ ಕಾರ್ಯಾಚರಣೆಗಳ ಮುಖ್ಯಸ್ಥರು ಇತರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ನಂತರ ಉಪರಾಷ್ಟ್ರಪತಿಗಳ ಭಾಷಣ, ರಾಷ್ಟ್ರಪತಿಗಳ ಭಾಷಣ ಇರಲಿದೆ. ಆಚರಣೆಯ ಭಾಗವಾಗಿ, ಸಂವಿಧಾನದ ಮುನ್ನುಡಿಯನ್ನು ರಾಷ್ಟ್ರಪತಿಗಳು ಓದಲಿದ್ದಾರೆ. ‘ಭಾರತ್ ಕೆ ಸಂವಿಧಾನ್ ಮೇ ಕಲಾ ಔರ್ ಕ್ಯಾಲಿಗ್ರಫಿ’ ಎಂಬ(ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ) ಎಂಬ ಶೀರ್ಷಿಕೆಯ ಸ್ಮರಣಾರ್ಥ ಕಿರುಪುಸ್ತಕವನ್ನು ಸಹ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಇನ್ನು ದೇಶಾದ್ಯಂತದ ಜನರು MyGov.in ಮತ್ತು Constitution75.com ಮೂಲಕ ಪೀಠಿಕೆಯ ಆನ್‌ಲೈನ್ ಸಾಮೂಹಿಕ ವಾಚನದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಷ್ಟ್ರೀಯ, ರಾಜ್ಯ ಮತ್ತು ಸ್ಥಳೀಯ ಮಟ್ಟದಲ್ಲಿ, ಕೇಂದ್ರ ಸಚಿವಾಲಯಗಳು, ಇಲಾಖೆಗಳು ಮತ್ತು ರಾಜ್ಯ-ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಸಂವಿಧಾನ ಸಂಬಂಧಿಸಿ ಸಮ್ಮೇಳನಗಳು, ವಿಚಾರ ಸಂಕಿರಣಗಳು, ಚರ್ಚೆಗಳು, ಪ್ರದರ್ಶನಗಳು, ಕಿರುಚಿತ್ರಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆಗಳನ್ನು ನಡೆಯಸಲಿವೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

1949ರ ನವೆಂಬರ್ 26ರಂದು ಸಂವಿಧಾನ ಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಲಾಗಿದ್ದು, 2015ರಿಂದ ನವೆಂಬರ್ 26ರಂದು ಸಂವಿಧಾನ ದಿನ ಆಚರಿಸಲಾಗುತ್ತಿದೆ. ಸಂವಿಧಾನವನ್ನು 1950 ಜನವರಿ 26ರಂದು ಜಾರಿಗೆ ತರಲಾಗಿತ್ತು. ಆದರೆ ಈ ಆಚರಣೆಯು ಕೇವಲ ಒಂದು ‘ಪ್ರಚಾರ ಕಾರ್ಯಕ್ರಮ’ವಾಗಿದೆ ಎಂದು ದೂರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...