ಮುಂಬೈ ಸರ್ಕಾರಿ ಕೆಲಸದ ಸಮಯ ಬದಲಾವಣೆ? ರೈಲುಗಳ ಜನದಟ್ಟಣೆ ನಿಭಾಯಿಸಲು ಹೊಸ ತಂತ್ರ

Date:

ಮುಂಬೈನ ಜೀವನಾಡಿಯಾಗಿದ್ದ ರೈಲ್ವೆ ಜಾಲವು ಈಗ ಜೀವ ತೆಗೆಯುವ ಜಾಲವಾಗಿ ಮಾರ್ಪಟ್ಟಿದೆ. ಅಧಿಕ ಜನದಟ್ಟಣೆಯಿಂದ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಕರು ಸಾವಿಗೀಡಾಗುವ ಘಟನೆಗಳು ಪದೇ ಪದೆ ನಡೆಯುತ್ತಲೇ ಇವೆ. ಆದ್ದರಿಂದ, ಜನದಟ್ಟಣೆಯನ್ನು ನಿಭಾಯಿಸಲು ಮಹಾರಾಷ್ಟ್ರ ಸರ್ಕಾರವು ಹೊಸ ಕ್ರಮವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಖಾಸಗಿ ಕಂಪನಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ‘ಪೀಕ್-ಅವರ್’ನಲ್ಲಿ (ಪ್ರಮುಖ ಸಮಯ) ಜನದಟ್ಟಣೆಯನ್ನು ಕಡಿಮೆ ಮಾಡಿ, ಕೆಲಸದಲ್ಲಿ ವಿಶೇಷ ಸಮಯಗಳನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ.

ಹೊಸ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ದೃಢಪಡಿಸಿದ್ದಾರೆ. ಸಾರಿಗೆ ಇಲಾಖೆ, ಭಾರತೀಯ ರೈಲ್ವೆ ಮತ್ತು ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಟಾಸ್ಕ್ ಫೋರ್ಸ್ ರಚಿಸಲಾಗುತ್ತದೆ. ಇದು ಸಾಂಪ್ರದಾಯಿಕ ಅನುಸರಿಸುತ್ತಿರುವ ಕೆಲಸದ ಅವಧಿ ‘9 ರಿಂದ 5 ಗಂಟೆ’ ಪಾಳಿಯ ಬದಲಾಗಿ ಬೆಳಿಗ್ಗೆ 8 ರಿಂದ ಸಂಜೆ 4 ಅಥವಾ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹೊಂದಿಕೊಳ್ಳುವ ಕೆಲಸದ ಸಮಯವನ್ನು ಜಾರಿಗೆ ತರಲು ಟಾಸ್ಕ್‌ ಫೋರ್ಸ್‌ ನಿರ್ಧರಿಸಲಿದೆ.

ಮುಂಬೈ ಉಪನಗರ ರೈಲು ಜಾಲದಲ್ಲಿ ಪ್ರತಿದಿನ ಸುಮಾರು 80 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಬೆಳಿಗ್ಗೆ 8 ರಿಂದ 11 ಮತ್ತು ಸಂಜೆ 5 ರಿಂದ 8ರ ನಡುವೆ ಅತ್ಯಂತ ತೀವ್ರ ಜನದಟ್ಟಣೆ ಕಂಡುಬರುತ್ತದೆ. ಪಶ್ಚಿಮ, ಮಧ್ಯ ಹಾಗೂ ಬಂದರು ರೈಲು ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ಪೀಕ್ ಅವರ್‌ನಲ್ಲಿ ಪ್ಲಾಟ್‌ಫಾರ್ಮ್‌ಗಳು ಮತ್ತು ರೈಲುಗಳಲ್ಲಿ ತೀವ್ರ ಒತ್ತಡವನ್ನು ಉಂಟುಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಯೋಜನೆಯ ಪೈಲಟ್ ಹಂತವು ಆಯ್ದ ಕಂಪನಿಗಳು ಅಥವಾ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ. ಯಶಸ್ವಿಯಾದರೆ, ನಗರದಾದ್ಯಂತ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಕಚೇರಿ ಸಮಯವನ್ನು ಹೆಚ್ಚಿಸುವುದರಿಂದ ಸಾರ್ವಜನಿಕ ಸಾರಿಗೆಯ ಮೇಲಿನ ಒತ್ತಡ ಕಡಿಮೆಯಾಗುವುದಲ್ಲದೆ, ಜನದಟ್ಟಣೆಯ ಸಮಯದಲ್ಲಿ ರಸ್ತೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...