ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಕಂಪ್ಯೂಟರ್ ಆಮದಿಗೆ ಕೇಂದ್ರ ನಿರ್ಬಂಧ

Date:

ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ.

“ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್‌ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳ ಆಮದನ್ನು ನಿರ್ಬಂಧಿಸಲಾಗಿದೆ. ನಿರ್ಬಂಧಿತ ಆಮದುಗಳಿಗೆ ಮಾನ್ಯ ಪರವಾನಗಿ ಇದ್ದರೆ ಮಾತ್ರ ಆಮದನ್ನು ಅನುಮತಿಸಲಾಗುವುದು,” ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ.

ಆಮದು ನಿರ್ಬಂಧಿತ ವಸ್ತುಗಳನ್ನು ನೀವು ಆಮದು ಮಾಡಲು ಬಯಸಿದರೆ ಮಾನ್ಯ ಪರವಾನಗಿ ಇರಬೇಕಾಗುತ್ತದೆ. ಪರವಾನಗಿ ಇದ್ದರೆ ಮಾತ್ರ ಆಮದಿಗೆ ಅವಕಾಶ ನೀಡಲಾಗುತ್ತದೆ. ಬ್ಯಾಗೇಜ್ ನಿಯಮಗಳ ಅಡಿಯಲ್ಲಿ ಮಾಡಲಾಗುವ ಆಮದುಗಳ ಮೇಲೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಸರ್ಕಾರದ ಅಧಿಸೂಚನೆಯು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಒಂದು ಸೇರಿ ದೇಶದ 20 ವಿವಿ ನಕಲಿ : ಯುಜಿಸಿ ಘೋಷಣೆ

ಬ್ಯಾಗೇಜ್ ನಿಯಮಗಳು ಭಾರತೀಯ ಗಡಿಯನ್ನು ಪ್ರವೇಶಿಸುವ ಅಥವಾ ಗಡಿಯಿಂದ ಹೊರಹೋಗುವ ಪ್ರತಿಯೊಬ್ಬ ಪ್ರಯಾಣಿಕರಿಗೆ ಕಸ್ಟಮ್ಸ್ ತಪಾಸಣೆಯ ನಿಯಮ ಜಾರಿಗೊಳಿಸಲಾಗುತ್ತದೆ. ಪ್ರಮುಖವಾಗಿ ಸ್ಥಳೀಯವಾಗಿ ಈ ವಸ್ತುಗಳ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಮದಿನ ಮೇಲೆ ನಿರ್ಬಂಧ ಹೇರಲಾಗಿದೆ. ಆಮದುಗಳು ಅನ್ವಯವಾಗುವ ಸುಂಕದ ಪಾವತಿಗೆ ಒಳಪಟ್ಟಿರುತ್ತವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆರ್‌ ಅಂಡ್ ಡಿ, ಟೆಸ್ಟಿಂಗ್, ರಿಪೇರಿ ಮತ್ತು ಪ್ರಾಡಕ್ಟ್‌ ಡೆವಲಪ್‌ಮೆಂಟ್‌ನಿಂದಾಗಿ ಆಮದು ಮಾಡಿಕೊಳ್ಳುವುದಾದರೆ 20 ವಸ್ತುಗಳನ್ನು ಆಮದು ಮಾಡಲು ಪರವಾನಗಿ ಇದ್ದಲ್ಲಿ ವಿನಾಯಿತಿ ಇರುತ್ತದೆ. ಈ ಆಮದು ವಸ್ತುಗಳನ್ನು ತಿಳಿಸಲಾದ ಉದ್ದೇಶಗಳಿಗೆ ಮಾತ್ರ ಬಳಕೆ ಮಾಡಬೇಕು ಮತ್ತು ಮಾರಾಟ ಮಾಡಲಾಗದು ಎಂಬ ಷರತ್ತಿನ ಮೇಲೆ ಮಾತ್ರ ಅನುಮತಿ ನೀಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...