ಈರುಳ್ಳಿ ರಫ್ತು ನಿಷೇಧ ಹಿಂಪಡೆದ ಸರ್ಕಾರ; ಟನ್‌ಗೆ ಕನಿಷ್ಠ 550 ಡಾಲರ್‌ ಬೆಲೆ ನಿಗದಿ

Date:

ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸರ್ಕಾರ ಶನಿವಾರ ಹಿಂಪಡೆದಿದೆ. ಪ್ರತಿ ಟನ್‌ಗೆ ಕನಿಷ್ಠ ರಫ್ತು ಬೆಲೆ 550 ಅಮೆರಿಕನ್‌ ಡಾಲರ್‌ ನಿಗದಿ ಮಾಡಿದೆ. ಇದು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಮಹಾರಾಷ್ಟ್ರ ಸೇರಿದಂತೆ ಹೆಚ್ಚಾಗಿ ಈರುಳ್ಳಿ ಬೆಳೆಯುವ ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ನಿಷೇಧವನ್ನು ತೆಗೆದು ಹಾಕಲಾಗಿರುವುದು ಗಮನಾರ್ಹ.

ಸರ್ಕಾರವು ಪ್ರತಿ ಟನ್‌ಗೆ 550 ಡಾಲರ್‌ (ಕೆಜಿಗೆ 46 ರೂ.) ಮತ್ತು 40% ರಫ್ತು ಸುಂಕವನ್ನು ಸರ್ಕಾರ ವಿಧಿಸಿದೆ. ಸುಂಕವನ್ನೂ ಪರಿಗಣಿಸಿ, ಪ್ರತಿ ಟನ್‌ಗೆ 770 ಡಾಲರ್‌ಗೆ (ಪ್ರತಿ ಕೆಜಿಗೆ ಸುಮಾರು 64 ರೂ.) ಕ್ಕಿಂತ ಕಡಿಮೆ ವೆಚ್ಚಕ್ಕೆ ಈರುಳ್ಳಿ ರಫ್ತನ್ನುಅನುಮತಿಸುವುದಿಲ್ಲ ಎಂದು ಸರ್ಕಾರ ಹೇಳಿದೆ.

ಕಳೆದ ವರ್ಷ ಈರುಳ್ಳಿ ಉತ್ಪಾದನೆಯಲ್ಲಿ ಕುಸಿತ ಕಂಡಿತ್ತು. ದೇಶದಲ್ಲಿ ಈರುಳ್ಳಿ ಬೆಲೆ ಭಾರೀ ಏರಿಕೆ ಕಂಡಿತ್ತು. ಪರಿಣಾಮ, ಬೆಲೆ ನಿಯಂತ್ರಣ ಮಾಡಲು 2023 ಡಿಸೆಂಬರ್ 8ರಂದು ವಿದೇಶಗಳಿಗೆ ಈರುಳ್ಳಿ ರಫ್ತನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 4-5 ವರ್ಷಗಳಲ್ಲಿ, ಭಾರತವು ವಾರ್ಷಿಕವಾಗಿ 17ರಿಂದ 25 ಲಕ್ಷ ಟನ್‌ಗಳಷ್ಟು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಿದೆ.

ಶುಕ್ರವಾರ ರಾತ್ರಿ ಹಣಕಾಸು ಸಚಿವಾಲಯವು ಈರುಳ್ಳಿ ರಫ್ತಿಗೆ ಶೇ.40 ರಫ್ತು ಸುಂಕವನ್ನು ವಿಧಿಸಿದೆ. ಮಹಾರಾಷ್ಟ್ರದ ನಾಸಿಕ್, ಅಹಮದ್‌ನಗರ ಮತ್ತು ಸೊಲ್ಲಾಪುರದಂತಹ ಪ್ರಮುಖ ಈರುಳ್ಳಿ ಬೆಳೆವ ಪ್ರದೇಶಗಳ ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯಲು ರಫ್ತು ನಿಷೇಧವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಇದೀಗ, ಈ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಮೇ 13ರಂದು ಮತದಾನ ನಡೆಯಲಿದೆ. ಅದಕ್ಕೂ ಮುನ್ನ ನಿಷೇಧ ತೆರವು ಮತ್ತು ಸಂಕ ನಿಗದಿಯು ಮಹತ್ವದ್ದಾಗಿದ್ದು, ಮತದಾರರನ್ನು ಸೆಳೆಯುವ ತಂತ್ರವೆಂದೂ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...