ಮಹಿಳಾ ದಿನ | ‘ಮಹಿಳೆಯರು ಯಜಮಾನರಾಗಿದ್ದ ಕುಟುಂಬದಲ್ಲಿ ಬೆಳೆದಿದ್ದೇನೆ’: ರಾಹುಲ್ ಗಾಂಧಿ

Date:

ಮಹಿಳೆಯರೇ ಯಜಮಾನರಾಗಿದ್ದ ಕುಟುಂಬದಲ್ಲಿ ನಾನು ಬೆಳೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಕೇರಳದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ವಿಡಿಯೋವನ್ನು ಮಹಿಳಾ ದಿನದಂದು (ಮಾರ್ಚ್‌8) ರಾಹುಲ್‌ ಗಾಂಧಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಮಾತನಾಡಿರುವ ಅವರು, ಮಹಿಳೆಯರು ಸಾಮಾನ್ಯವಾಗಿ ಪುರುಷರಿಗಿಂತ ಹೆಚ್ಚು ಬುದ್ಧಿವಂತರು ಎಂದು ಪ್ರತಿಪಾದಿಸಿದ್ದಾರೆ.

“ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದವು ಹೆಚ್ಚು ಖುಷಿ ಕೊಟ್ಟಿತು. ಪ್ರತಿಯೊಬ್ಬ ವಿದ್ಯಾರ್ಥಿಯ ಕನಸುಗಳು, ಕುತೂಹಲ ಹಾಗೂ ಆತ್ಮವಿಶ್ವಾಸದಿಂದ ನಾನು ಹೆಚ್ಚು ಪ್ರಭಾವಿತನಾಗಿದ್ದೆ. ಇಂತಹ ಸಂಭಾಷಣೆಗಳು ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಗುರುತಿಸಿ ಮುಕ್ತ ಮನಸ್ಸಿನಿಂದ ಮುನ್ನಡೆದಾಗ, ಅವರು ಅಸಾಧಾರಣ ಬದಲಾವಣೆಯನ್ನು ತರಬಹುದು ಎಂಬುದನ್ನು ನೆನಪಿಸುತ್ತವೆ” ಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಯೊಬ್ಬ ಮಹಿಳೆಯೂ ಅನನ್ಯಳು. ಅವರ ಸೂಕ್ಷ್ಮತೆ, ತಿಳುವಳಿಕೆ ಹಾಗೂ ಭಾವನಾತ್ಮಕ ಬುದ್ಧಿವಂತಿಕೆಯು ಸಮಾಜಕ್ಕೆ ಸಮತೋಲನ ಮತ್ತು ನಿರ್ದೇಶನವನ್ನು ಒದಗಿಸುತ್ತದೆ. ಮಹಿಳೆಯರು ತಾಳ್ಮೆ, ದೀರ್ಘಕಾಲೀನ ದೃಷ್ಟಿಕೋನ ಹಾಗೂ ಸಹಾನುಭೂತಿಯೊಂದಿಗೆ ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಅಧಿಕಾರವನ್ನು ಚಲಾಯಿಸುತ್ತಾರೆ” ಎಂದಿದ್ದಾರೆ.

“ಸಮಾಜದ ನಿರ್ಬಂಧಿತ ಮಾನದಂಡಗಳಿಗೆ ಬದ್ಧರಾಗುವ ಬದಲು, ಅವರ ಗುರುತು, ವ್ಯಕ್ತಿತ್ವ ಹಾಗೂ ಆಕಾಂಕ್ಷೆಗಳಿಗೆ ಅನುಗುಣವಾಗಿ ಮುಂದುವರಿಯಲು ಅವರಿಗೆ ಎಲ್ಲ ಹಕ್ಕಿರಬೇಕು. ಅಂತರರಾಷ್ಟ್ರೀಯ ಮಹಿಳಾ ದಿನದಂದು ಎಲ್ಲ ಮಹಿಳೆಯರಿಗೆ ಹೃತ್ಪೂರ್ವಕ ಶುಭಾಶಯಗಳು. ನಿಮ್ಮ ಶಕ್ತಿ, ಧೈರ್ಯ ಹಾಗೂ ಕನಸುಗಳು ಸಮಾಜವನ್ನು ಸಕಾರಾತ್ಮಕ ಭವಿಷ್ಯದತ್ತ ಕೊಂಡೊಯ್ಯುವುದನ್ನು ಮುಂದುವರಿಸಲಿ” ಎಂದು ಅವರು ಹೇಳಿದ್ದಾರೆ.

“ನಾನು ಮಹಿಳೆಯರು ಯಜಮಾನರಾಗಿದ್ದ ಕುಟುಂಬದಲ್ಲಿ ಬೆಳೆದಿದ್ದೇನೆ. ಆದ್ದರಿಂದ ನನ್ನ ಕುಟುಂಬದ ಯಜಮಾನರು ನನ್ನ ಅಜ್ಜಿ. ನನ್ನ ಕುಟುಂಬದಲ್ಲಿ ಮಹಿಳೆಯರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ” ಎಂದು ರಾಹುಲ್‌ ಗಾಂಧಿ ವಿದ್ಯಾರ್ಥಿಗಳಿಗೆ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ.

“ಮಹಿಳೆಯರು ಸಾಮಾನ್ಯವಾಗಿ ಪುರುಷರಿಗಿಂತ ಹೆಚ್ಚು ಬುದ್ಧಿವಂತರು. ಪುರುಷರು ಆತುರದಲ್ಲಿರುತ್ತಾರೆ.ಪುರುಷರು ಮೂರ್ಖತನದ ವಿಷಯಗಳಿಂದ ಕುರುಡರಾಗುತ್ತಾರೆ. ಮಹಿಳೆಯರು ದೀರ್ಘಕಾಲ ಯೋಚಿಸುತ್ತಾರೆ. ಅವರು ನೇರ ಅಧಿಕಾರವನ್ನು ಚಲಾಯಿಸುವುದಿಲ್ಲ, ಪರೋಕ್ಷ ಅಧಿಕಾರ ಚಲಾಯಿಸುತ್ತಾರೆ. ಅದು ಹೆಚ್ಚು ಪರಿಣಾಮಕಾರಿಯಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...