2,000 ರೂ.ಗೆ ಮೇಲ್ಪಟ್ಟ ಯುಪಿಐ ವಹಿವಾಟು ಮೇಲೆ ಜಿಎಸ್‌ಟಿ? ಕೇಂದ್ರ ಸರ್ಕಾರ ಸ್ಪಷ್ಟನೆ

Date:

2,000 ರೂಪಾಯಿಗಿಂತ ಮೇಲ್ಪಟ್ಟು ಯುಪಿಐ ಮೂಲಕ ಪಾವತಿ ಮಾಡುವ ವಹಿವಾಟಿನ ಮೇಲೆ ಜಿಎಸ್‌ಟಿ ವಿಧಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂಬ ವದಂತಿ ದೇಶಾದ್ಯಂತ ವ್ಯಾಪಕವಾಗಿ ಹರಡಿದೆ. ಈ ಬೆನ್ನಲ್ಲೇ, ವದಂತಿಯನ್ನು ಅಲ್ಲಗಳೆದಿರುವ ಕೇಂದ್ರ ಸರ್ಕಾರ, ಅಂತಹ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ. ವದಂತಿಯು ಸುಳ್ಳು ಎಂದು ಹೇಳಿದೆ.

ಕೇಂದ್ರ ಸರ್ಕಾರ ನೀಡಿರುವ ಸ್ಪಷ್ಟನೆ ಕುರಿತು ಪ್ರೆಸ್ ಇನ್ಫರ್ಮೇಶನ್ ಬ್ಯೂರೊ ಅಧಿಕೃತ ಪ್ರಕಟಣೆ ಹೊರಡಿಸಿದೆ. “2,000 ರೂ. ಮೇಲ್ಪಟ್ಟ ಯಾವುದೇ ಯುಪಿಐ ವಹಿವಾಟಿನ ಮೇಲೆ ಜಿಎಸ್‌ಟಿ ವಿಧಿಸಲು ಸರ್ಕಾರವು ಯೋಜಿಸಿಲ್ಲ. ವೈರಲ್‌ ಆಗಿರುವ ವದಂತಿಯು ಸುಳ್ಳು, ದಾರಿ ತಪ್ಪಿಸುವ ಹಾಗೂ ನಿರಾಧಾರವಾದದ್ದು” ಎಂದು ಹೇಳಿದೆ.

“ಸರ್ಕಾರದ ಎದುರು ಅಂತಹ ಯಾವುದೇ ಪ್ರಸ್ತಾವನೆಯಿಲ್ಲ. ಸರ್ಕಾರವು ಯುಪಿಐ ಮೂಲಕ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಬದ್ಧವಾಗಿದೆ” ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...