ಅಪರಾಧಿ ಪ್ರಜ್ಞೆ | ಕೊಲೆಗೈದು 39 ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ವ್ಯಕ್ತಿ

Date:

1986ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಪರಾಧಿ ಪ್ರಜ್ಞೆ ಕಾಡಿದ್ದು, ಆರೋಪಿಯು ಇದೀಗ ಪೊಲೀಸರ ಎದುರು ತಪ್ಪೊಪ್ಪಿಕೊಂಡು ಶರಣಾಗಿರುವ ಘಟನೆ ಕೇರಳದ ಕೋಝಿಕೋಡ್‌ನಲ್ಲಿ ನಡೆದಿದೆ.

ಶರಣಾಗಿರುವ ಆರೋಪಿಯನ್ನು ಮುಹಮ್ಮದ್ ಆಲಿ ಎಂದು ಹೇಳಲಾಗಿದೆ. 39 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಕೃತ್ಯದಲ್ಲಿ ಅವರು ಭಾಗಿಯಾಗಿದ್ದರು. ತಾವು ಕೃತ್ಯ ಎಸಗಿದ್ದ ಬಗ್ಗೆ ಆಲಿ ರಹಸ್ಯವನ್ನು ಕಾಪಾಡಿಕೊಂಡು ಬಂದಿದ್ದರು. ಆದರೆ, ಅವರ ಕೃತ್ಯವು ನಿರಂತರವಾಗಿ ಅವರನ್ನು ಕಾಡುತ್ತಿತ್ತು. ಅಪರಾಧಿ ಭಾವ ಹೆಚ್ಚಾಗಿದ್ದರಿಂದ, ಇದೀಗ ಅವರು ಮಲಪ್ಪುರಮ್ ಜಿಲ್ಲೆಯ ವೆಂಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ತಾನು 14 ವರ್ಷ ವಯಸ್ಸನವನಿದ್ದಾಗ ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

1986ರಲ್ಲಿ ಆಲಿ ಅವರು ಕೋಝಿಕೋಡ್ ಜಿಲ್ಲೆಯ ತಿರುವಂಬಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡರಂಜಿ ಗ್ರಾಮದ ದೇವಸ್ಯ ಎಂಬವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆಗ, “ವ್ಯಕ್ತಿಯೊಬ್ಬರು ತನಗೆ ಕಿರುಕುಳ ನೀಡಿದ್ದರಿಂದ, ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಆತನ ಮೇಲೆ ಪ್ರತಿದಾಳಿ ಮಾಡಿದಾಗ, ಆತ ನೀರು ತುಂಬಿದ್ದ ಹಳಕ್ಕೆ ಬಿದ್ದು ಸಾವನ್ನಪ್ಪಿದ್ದರು” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆಯಿಂದ ಗಾಬರಿಗೊಂಡು ನಾನು ಅಲ್ಲಿಂದ ಓಡಿ ಹೋದೆ. ಎರಡು ದಿನಗಳ ಬಳಿಕ ವಾಪಸ್‌ ಬಂದಾಗ, ಆತನ ಮೃತದೇಹ ಹಳ್ಳದಲ್ಲೇ ಇತ್ತು. ಪೊಲೀಸರು ಆತನನ್ನು ಸಹಜ ಸಾವೆಂದು ಪ್ರಕರಣ ದಾಖಲಿಸಿದ್ದರು. ಯಾವುದೇ ಸುಳಿವು ಸಿಗದೆ ಪ್ರಕರಣ ಮೂಲೆಗೆ ಸರಿಯಿತು. ಆದರೆ, ಭಯದಿಂದ ನಾನು ಸತ್ಯವನ್ನು ಮುಚ್ಚಿಟ್ಟಿದ್ದೆ” ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ಮೇಲೆ ಗಂಭೀರ ಆರೋಪ: ಕ್ಲಿನಿಕಲ್ ಪ್ರಯೋಗಕ್ಕೆ ಬಡರೋಗಿಗಳ ಬಳಕೆ

ಆದಾಗ್ಯೂ, “ನನಗೆ ದಿನನಿತ್ಯ ಅಪರಾಧಿ ಪ್ರಜ್ಞೆ ಕಾಡುತ್ತಿತ್ತು. ಇತ್ತೀಚೆಗೆ, ನನ್ನ ಮಕ್ಕಳು ಮೃತಪಟ್ಟಾಗ, ನನ್ನ ಅಪರಾಧಿ ಭಾವದ ಕಟ್ಟೆಹೊಡೆಯಿತು. ನಾನು ನೆಮ್ಮದಿಯಿಂದ ಬದುಕಬೇಕೆಂದರೆ ನನ್ನ ತಪ್ಪನ್ನು ಒಪ್ಪಿಕೊಳ್ಳಬೇಕು. ಪರಿಶುದ್ಧನಾಗಿ ಮನೆಗೆ ಮರಳಬೇಕು ಎನಿಸಿದೆ. ಅದಕ್ಕಾಗಿ, ಶರಣಾಗುತ್ತಿದ್ದೇನೆ” ಎಂದು ಆಲಿ ಹೇಳಿದ್ದಾರೆ.

ಅವರ ಹೇಳಿಕೆಯನ್ನು ಪರಿಗಣಿಸಿರುವ ಪೊಲೀಸರು, ಆಲಿ ಅವರನ್ನು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮೃತರ ಗುರುತು ಪತ್ತೆಗಾಗಿ ಪರಿಶೀಲನೆ-ತನಿಖೆ ನಡೆಸುತ್ತಿದ್ದಾರೆ. ಆಲಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...