ಗುಜರಾತ್ | ಎರಡು ವರ್ಷದಲ್ಲಿ 286 ಸಿಂಹಗಳು, 456 ಚಿರತೆಗಳು ಸಾವು

Date:

ಪ್ರಧಾನಿ ಮೋದಿ ಅವರ ತವರು ರಾಜ್ಯ, ಮಾದರಿ ರಾಜ್ಯದ ಮಾಡೆಲ್ ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ 286 ಸಿಂಹಗಳು ಮತ್ತು 456 ಚಿರತೆಗಳು ಸಾವನ್ನಪ್ಪಿವೆ ಎಂದು ಗುಜರಾತ್‌ ಸರ್ಕಾರ ಹೇಳಿದೆ.

ಗುಜರಾತ್‌ನಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ವನ್ಯಜೀವಿಗಳ ಸಾವಿನ ಬಗ್ಗೆ ಅರಣ್ಯ ಸಚಿವ ಮುಲುಭಾಯಿ ಬೇರಾ ಮಾಹಿತಿ ನೀಡಿದ್ದಾರೆ. “ಗುಜರಾತ್‌ನಲ್ಲಿ ಎರಡು ವರ್ಷಗಳಲ್ಲಿ 143 ಮರಿಗಳು ಸೇರಿದಂತೆ 286 ಸಿಂಹಗಳು ಸಾವನ್ನಪ್ಪಿವೆ. 140 ಮರಿಗಳು ಸೇರಿದಂತೆ 456 ಚಿರತೆಗಳು ಮೃತಪಟ್ಟಿವೆ” ಎಂದು ಹೇಳಿದ್ದಾರೆ.

“2023ರಲ್ಲಿ 121 ಸಿಂಹಗಳು ಮತ್ತು 225 ಚಿರತೆಗಳು ಸಾವನ್ನಪ್ಪಿವೆ. 2024ರಲ್ಲಿ 165 ಸಿಂಹಗಳು ಮತ್ತು 231 ಚಿರತೆಗಳು ಸಾವನ್ನಪ್ಪಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ 286 ಸಿಂಹಗಳಲ್ಲಿ 228 ಸಿಂಹಗಳು ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದು, 58 ಸಿಂಹಗಳು ವಾಹನಗಳಿಗೆ ಢಿಕ್ಕಿ ಹೊಡೆದು ಅಥವಾ ತೆರೆದ ಬಾವಿಗೆ ಬಿದ್ದು ಮೃತಪಟ್ಟಿವೆ. ಅಂತೆಯೇ, 303 ಚಿರತೆಗಳು ನೈಸರ್ಗಿಕ ಕಾರಣಗಳಿಂದ ಮತ್ತು 153 ಸಾವುಗಳು ಅಸ್ವಾಭಾವಿಕ ಕಾರಣಗಳಿಂದ ಸಾವನ್ನಪ್ಪಿವೆ” ಎಂದು ಸಚಿವರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಹಗರಣಗಳ ಕುಣಿಕೆ, ‘ಮೋಶಾ’ಗಳ ಪಾಶ: ಕುಮಾರಸ್ವಾಮಿಯವರ ಕತೆ ಏನು?

ಸಿಂಹ ಮತ್ತು ಚಿರತೆಗಳ ಅಸ್ವಾಭಾವಿಕ ಸಾವುಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಪಶುವೈದ್ಯರ ನೇಮಕಾತಿ ಮತ್ತು ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ ಸೇವೆಗಳನ್ನು ಆರಂಭಿಸಲಿದೆ. ಅಭಯಾರಣ್ಯ ಪ್ರದೇಶಗಳಲ್ಲಿ ಹಾದುಹೋಗುವ ರಸ್ತೆಗಳಲ್ಲಿ ವೇಗಮಿತಿ, ಸೂಚನಾ ಫಲಕ ಹಾಗೂ ಗಸ್ತು ತಿರುಗುವಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಏಷ್ಯಾ ಪ್ರಬೇಧದ ಸಿಂಹಗಳು ಇಡೀ ಜಗತ್ತಿನಲ್ಲಿ ಗುಜರಾತ್‌ನಲ್ಲಿ ಮಾತ್ರವೇ ಕಂಡುಬರುತ್ತವೆ. ಅದರಲ್ಲೂ, ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಮಾತ್ರವೇ ಇವೆ. ಈ ಪ್ರಬೇಧದ 674 ಸಿಂಹಗಳು ಗುಜರಾತ್‌ನಲ್ಲಿವೆ ಎಂದು 2020ರ ಜೂನ್‌ನಲ್ಲಿ ನಡೆದ ಪ್ರಾಣಿಗಣತಿ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...