ಗುಜರಾತ್ | ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್‌ ಡಿಕ್ಕಿ; 6 ಮಂದಿ ದುರ್ಮರಣ

Date:

ಬಸ್‌ಗೆ ಟ್ರಕ್‌ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್‌ನ ಆನಂದ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್‌ಪಿ ಗೌರವ್ ಜಸಾನಿ ಮಾಹಿತಿ ನೀಡಿದ್ದಾರೆ.

ಆನಂದ್ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ನೀಡಿರುವ ಮಾಹಿತಿ ಪ್ರಕಾರ ಆನಂದ್ ಜಿಲ್ಲೆಯ ಚಿಖೋದ್ರಾ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ.

ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಟೈರ್ ಒಡೆದ ಕಾರಣ ರಸ್ತೆ ಬದಿ ನಿಂತಿತ್ತು. ಟೈರ್ ಬದಲಾಯಿಸುತ್ತಿದ್ದಂತೆಯೇ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದು, ಕೆಲವರು ವಾಹನದ ಮುಂದೆ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ಹಿಂದಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಪಘಾತದಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಸ್ ಚಾಲಕ ಕೂಡ ಸೇರಿದ್ದಾರೆ.

ಇದನ್ನು ಓದಿದ್ದೀರಾ? ‘ಕಣ್ಣು ರಸ್ತೆಯ ಮೇಲಿರಲಿ’: ರೀಲ್ಸ್‌ ಮಾಡುತ್ತಾ ಅಪಘಾತಕ್ಕೀಡಾದ ಯುವಕರ ವಿಡಿಯೋ ಹಂಚಿಕೊಂಡ ಪೊಲೀಸರು

ಮೃತರ ಪೈಕಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರಾಗಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...