ವಿಕೃತ ಕಾಮುಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್‌ನಿಂದ ಚುಚ್ಚಿ ವಿಕೃತಿ ಮರೆದಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 4ರಂದು ಘಟನೆ ನಡೆದಿದೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕಿಯ ಕುಟುಂಬವು ಮೂಲತಃ ದಾಹೋದ್ ಜಿಲ್ಲೆಯವರಾಗಿದ್ದು, ರಾಜ್‌ಕೋಟ್‌ನ ಅಟ್ಕೋಟ್ ಪ್ರದೇಶದಲ್ಲಿ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಬಾಲಕಿ ಹೊಲದಲ್ಲಿ ಆಟವಾಗುತ್ತಿದ್ದಾಗ, ಆಕೆಯನ್ನು ವಿಕೃತ ಆರೋಪಿ ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.
ಬಾಲಕಿ ಕಿರುಚಿಕೊಂಡಿದ್ದರಿಂದ ಅತ್ಯಾಚಾರ ಯತ್ನ ವಿಫಲವಾಗಿದ್ದು, ದುರುಳ ಆರೋಪಿ ಆಕೆಯ ಖಾಸಗಿ ಅಂಗಕ್ಕೆ ರಾಡ್‌ನಿಂದ ಚುಚ್ಚಿದ್ದಾನೆ. ತೀವ್ರ ರಕ್ತಸ್ರಾವವಾಗುತ್ತಿದ್ದುದ್ದನ್ನು ಕಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿ ಕಾಣದಿದ್ದಾಗ, ಆಕೆಯ ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ತೀವ್ರ ರಕ್ತಸ್ರಾವದಿಂದ ಬಾಲಕಿ ಬಿದ್ದಿದ್ದನ್ನು ಕಂಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ ಎಂದು ರಾಜ್‌ಕೋಟ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವಿಜಯಸಿಂಹ ಗುರ್ಜರ್ ತಿಳಿಸಿದ್ದಾರೆ.
ಆರೋಪಿಯನ್ನು ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ರಾಮಸಿಂಗ್ ತೆರಾಸಿಂಗ್ ದದ್ವೇಜರ್ ಎಂದು ಹೆಸರಿಸಲಾಗಿದೆ. ಆರೋಪಿಯನ್ನು ಸಂತ್ರಸ್ತ ಬಾಲಕಿ ಗುರುತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.




