ಬಾಲಕಿ ಮೇಲೆ ಅತ್ಯಾಚಾರ: 40 ದಿನಗಳಲ್ಲಿ ವಿಚಾರಣೆ ಪೂರ್ಣ, ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌

Date:

ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅತಿ ವೇಗವಾಗಿ ಪೂರ್ಣಗೊಳಿಸಿರುವ ಗುಜರಾತ್‌ನ ರಾಜ್‌ಕೋಟ್‌ನ ವಿಶೇಷ ನ್ಯಾಯಾಲಯವು ಅಪರಾಧಿ 30 ವರ್ಷದ ರೆಮ್ಸಿನ್ಹ್ ದುಡ್ವಾಗೆ ಗಲ್ಲು ಶಿಕ್ಷೆ ವಿಧಿಸಿದೆ. ಎಫ್‌ಐಆರ್ ದಾಖಲಾಗಿ ಶಿಕ್ಷೆ ಘೋಷಿಸುವವರೆಗೆ ಸಂಪೂರ್ಣ ನ್ಯಾಯ ಪ್ರಕ್ರಿಯೆಯು ಕೇವಲ 40 ದಿನಗಳಲ್ಲಿ ಪೂರ್ಣಗೊಂಡಿದೆ.

2025ರ ಡಿಸೆಂಬರ್ 4ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ವಿಕೃತಕಾಮಿ ಮಗುವನ್ನು ಪೊದೆಗೆ ಎಳೆದೊಯ್ದು ಆಕೆಯ ಗುಪ್ತಾಂಗಕ್ಕೆ ಐದು ಇಂಚಿನ ಕಬ್ಬಿಣದ ರಾಡ್ ತುರುಕಿಸಿದ್ದ. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿತ್ತು. ಈ ಅತ್ಯಂತ ಕ್ರೂರ, ಘೋರ ಕೃತವು ನಿರ್ಭಯ ಪ್ರಕರಣವನ್ನು ನೆನಪಿಸಿತ್ತು.

ಇದನ್ನು ಓದಿದ್ದೀರಾ? ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕನಿಗೆ ಸಾಯೋವರೆಗೂ ಜೈಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿ ನೋವಿನಿಂದ ನರಳುತ್ತಿದ್ದಾಗ ಅಪರಾಧಿ ಸ್ಥಳದಿಂದ ಪರಾರಿಯಾಗಿದ್ದ. ಬಾಲಕಿಯ ಕಿರುಚಾಟ ಕೇಳಿ, ಪಕ್ಕದಲ್ಲೇ ಮನೆಯೊಳಗಿದ್ದ ಆಕೆಯ ಚಿಕ್ಕಮ್ಮ ಸ್ಥಳಕ್ಕೆ ಧಾವಿಸಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಆಕೆಯ ಪತಿಗೆ ಕರೆ ಮಾಡಿದ್ದರು. ಮಗುವನ್ನು ಆಂಬ್ಯುಲೆನ್ಸ್ ಮೂಲಕ ಕಾನ್ಪರ್ ಗ್ರಾಮದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಬಾಲಕಿ ಸ್ಥಿತಿ ತುಂಬಾ ಗಂಭೀರವಾಗಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಜಸ್ದಾನ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ರಾತ್ರಿ 9 ಗಂಟೆ ಸುಮಾರಿಗೆ, ಆಕೆಯನ್ನು ರಾಜ್‌ಕೋಟ್ ಜನಾನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರೇಡಿಯಾಲಜಿಸ್ಟ್ ಮತ್ತು ಸ್ತ್ರೀರೋಗ ತಜ್ಞರು ಸೇರಿ ವೈದ್ಯಕೀಯ ಚಿಕಿತ್ಸೆ ನೀಡಿದ್ದರು.

ಈ ಘಟನೆ ಬಗ್ಗೆ ಬಾಲಕಿಯ ತಂದೆ ದೂರು ನೀಡಿದ್ದು, ಪೊಲೀಸರು ಶಂಕೆಯ ಮೇರೆಗೆ ರೆಮ್ಸಿನ್ಹ್ ದುಡ್ವಾ ಬಂಧನ ಮಾಡಿದ್ದರು. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಹೇಳಲಾಗಿದೆ. ಪೊಲೀಸರು ರಕ್ತದ ಕಲೆಗಳಿಂದ ಕೂಡಿದ ಕಬ್ಬಿಣದ ರಾಡ್ ವಶಕ್ಕೆ ಪಡೆದಿದ್ದರು. ಎಫ್‌ಎಸ್‌ಎಲ್ ಅಧಿಕಾರಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆಸಿ ಕೂದಲಿನ ಮಾದರಿಗಳನ್ನು ಸಹ ಸಂಗ್ರಹಿಸಿದ್ದರು. ವಿಧಿವಿಜ್ಞಾನ ಪರೀಕ್ಷೆಯಲ್ಲಿ ಕೂದಲು ಆರೋಪಿಯದ್ದೇ ಎಂದು ದೃಢಪಟ್ಟಿದೆ. ಹಾಗೆಯೇ ಕಬ್ಬಿಣದ ರಾಡ್‌ನಲ್ಲಿ ಕಂಡುಬಂದ ರಕ್ತವು ಸಂತ್ರಸ್ತೆಯದ್ದು ಎಂದು ದೃಢಪಟ್ಟಿದೆ.

ಇದನ್ನು ಓದಿದ್ದೀರಾ? 60ರ ವೃದ್ಧೆ ಮೇಲೆ ಅತ್ಯಾಚಾರ, ಕೊಲೆ: ಗಲ್ಲು ಶಿಕ್ಷೆಗೆ ಒಳಗಾಗಿದ್ದ ಆರೋಪಿ ಖುಲಾಸೆ

ಆರೋಪಿಯ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅಪರಾಧದ ಸಮಯದಲ್ಲಿ ಕಾನ್ಪರ್ ಗ್ರಾಮ ಪ್ರದೇಶದಲ್ಲಿ ಈತ ಇದ್ದ ಎಂದು ಪತ್ತೆಹಚ್ಚಿದ್ದಾರೆ. ತನಿಖೆ ಪೂರ್ಣಗೊಂಡ ನಂತರ, ತನಿಖಾಧಿಕಾರಿ ಕೇವಲ 11 ದಿನಗಳಲ್ಲಿ, ಡಿಸೆಂಬರ್ 8 ರಂದು ಆರೋಪಪಟ್ಟಿ ಸಲ್ಲಿಸಿದ್ದರು. ಈ ನಡುವೆ ಸಂತ್ರಸ್ತೆ ತಂದೆ ನ್ಯಾಯಾಲಯಕ್ಕೆ ವಿವರವಾದ ಪತ್ರವನ್ನು ಬರೆದಿದ್ದಾರೆ. ತನ್ನ ಮಗಳ ಈ ಸ್ಥಿತಿಗೆ ಕಾರಣವಾದ ಆರೋಪಿಯನ್ನು ತಕ್ಷಣವೇ ವಿಚಾರಣೆಗೆ ಒಳಪಡಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಕೋರಿದ್ದರು.

ಅಪರಾಧದ ಗಂಭೀರತೆ ಮತ್ತು ಅದರಲ್ಲಿನ ಕ್ರೌರ್ಯವನ್ನು ಗಣನೆಗೆ ತೆಗೆದುಕೊಂಡು, ನ್ಯಾಯಾಲಯವು ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಆದೇಶಿಸಿತು. ನ್ಯಾಯಾಲಯವು ಆರು ದಿನಗಳಲ್ಲಿ ಸಾಕ್ಷ್ಯಗಳ ದಾಖಲಾತಿಯನ್ನು ಪೂರ್ಣಗೊಳಿಸಿದ್ದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಎ. ರಾಣಾ ಕೇವಲ 35 ದಿನಗಳ ನಂತರ ಜನವರಿ 12ರಂದು ತೀರ್ಪು ನೀಡಿದ್ದಾರೆ. ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಿದೆ. ಆರಂಭದಲ್ಲಿ ಶಿಕ್ಷೆಯನ್ನು ಜನವರಿ 15ರಂದು ನಿಗದಿಪಡಿಸಲಾಗಿದ್ದರೂ, ಅಂತಿಮವಾಗಿ ಜನವರಿ 17ರಂದು ಘೋಷಿಸಿದೆ.

ಈ ಹಿಂದೆ ರಾಜ್ಯದ ಪೋಕ್ಸೊ (POCSO) ವಿಶೇಷ ನ್ಯಾಯಾಲಯವು ಮೊದಲ ಬಾರಿಗೆ ಅತ್ಯಾಚಾರದಂತಹ ಗಂಭೀರ ಪ್ರಕರಣವೊಂದರಲ್ಲಿ ಕೇವಲ 40 ದಿನಗಳಲ್ಲಿ ನ್ಯಾಯಾಲಯವು ತೀರ್ಪು ಪ್ರಕಟಿಸಿ ಕರ್ನಾಟಕದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಈ ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ನ್ಯಾಯಾಲಯವು 40 ದಿನಗಳಲ್ಲೇ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡವನ್ನು ವಿಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...