ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ ಇಲಾಖೆಯು ತಿಳಿಸಿದೆ.

1976ರ ಬಳಿಕ ಮೊದಲ ಬಾರಿಗೆ 2024ರ ಆಗಸ್ಟ್‌ನಲ್ಲಿ ಅರಬ್ಬಿ ಸಮುದ್ರದ ಮೇಲೆ ಕಾಣಿಸಿಕೊಳ್ಳುವ ಮೊದಲ ಚಂಡಮಾರುತ ಇದಾಗಿದ್ದು, ಪಾಕಿಸ್ತಾನದ ಪ್ರಸ್ತಾಪದಂತೆ ಈ ಚಂಡಮಾರುತಕ್ಕೆ ‘ಸೈಕ್ಲೋನ್ ಅಸ್ನಾ’ ಎಂದು ಹೆಸರಿಡುವ ಸಾಧ್ಯತೆಯಿದೆ.

ಕರಾವಳಿಯಲ್ಲಿರುವ ಎಲ್ಲ ರಾಜ್ಯಗಳಲ್ಲಿಯೂ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಈಗಾಗಲೇ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗುಜರಾತ್ ಪ್ರವಾಹ | 15ಕ್ಕೂ ಅಧಿಕ ಸಾವು: ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚಂಡಮಾರುತವು ಹೆಚ್ಚಾಗಿ ಗುಜರಾತ್‌ನ ಜಾಮ್‌ನಗರ, ಪೋರಬಂದರ್ ಮತ್ತು ದ್ವಾರಕಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಭಾವ ಬೀರುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಗುಜರಾತ್‌ನ ಚಂಡಮಾರುತಕ್ಕೆ ತುತ್ತಾಗುವ ಆತಂಕ ಎದುರಾಗಿರುವಾಗ, ಈಗಾಗಲೇ ಭಾರೀ ಮಳೆಯಿಂದಾಗಿ ಗುಜರಾತ್‌ನಲ್ಲಿ ಹಲವಾರು ದುರಂತಗಳು ನಡೆದಿದೆ. ಭಾರೀ ಮಳೆಯಿಂದಾಗಿ ನಡೆದ ಅವಘಡಗಳಿಂದಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಒಟ್ಟಾಗಿ 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...