ಸಂಬಳ ಕೇಳಿದ ದಲಿತ ಯುವಕನಿಗೆ ಚಪ್ಪಲಿ ಬಾಯಲ್ಲಿಟ್ಟು ಹಲ್ಲೆ ಮಾಡಿದ ಕಂಪನಿ ಸಿಬ್ಬಂದಿ

Date:

ತನಗೆ ನೀಡಬೇಕಾಗಿದ್ದ ಬಾಕಿ ಸಂಬಳ ಕೇಳಿದ ದಲಿತ ಯುವಕನಿಗೆ ಕಂಪನಿಯ ಮಾಲಕಿಯೊಬ್ಬಳು ತನ್ನ ಚಪ್ಪಲಿಯನ್ನು ಆತನ ಬಾಯಲ್ಲಿಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.

21 ವರ್ಷದ ನಿಲೇಶ್ ದಲ್ಸಾನಿಯಾ ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕ. ಇವರು ನ.23 ರಂದು ವಿಭೂತಿ ಪಟೇಲ್ ನಡೆಸುತ್ತಿರುವ ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಚೇರಿಗೆ ಸುಮಾರು 7 ಗಂಟೆಗೆ ತಮ್ಮ ಸಹೋದರರ ಜೊತೆ ಸಂಬಳ ಕೇಳಲು ಹೋಗಿದ್ದಾರೆ.

ಈ ಸಂದರ್ಭದಲ್ಲಿ ಕಂಪನಿಯ ಮಾಲಕಿಯಾದ ವಿಭೂತಿ ಪಟೇಲ್, ಆಕೆಯ ಸಹೋದರ ಓಂ ಪಟೇಲ್, ಕಂಪನಿಯ ಮ್ಯಾನೇಜರ್ ಪರೀಕ್ಷಿತ್ ಪಟೇಲ್ ಸೇರಿ ನಾಲ್ವರು ನಿಲೇಶ್ ದಲ್ಸಾನಿಯಾ ಹಾಗೂ ಇತರ ಮೂವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದಲ್ಲದೆ ನಿಲೇಶ್ ಅವರಿಗೆ ತನ್ನ ಚಪ್ಪಲಿಯನ್ನು ಬಾಯಲ್ಲಿ ಕಚ್ಚಿಕೊಂಡು ಕ್ಷಮೆ ಕೇಳುವಂತೆ ಮಾಲಕಿ ವಿಭೂತಿ ಪಟೇಲ್ ಹೇಳಿದ್ದಾರೆ. ಇದಾದ ನಂತರ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆ | ತ್ರಿಕೋನ ಸ್ಪರ್ಧೆಯ ನಡುವೆ ಗದ್ದುಗೆಗಾಗಿ ಕಾಂಗ್ರೆಸ್, ಬಿಆರ್‌ಎಸ್‌ ಜಿದ್ದಾಜಿದ್ದಿ

ಘಟನೆಯ ಬಗ್ಗೆ ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಸಿ/ಎಸ್‌ಟಿ ಸೆಲ್) ಪ್ರತಿಪಾಲ್‌ ಸಿನ್ಹಾ ಝಾಲಾ ಮಾತನಾಡಿ, ಹಲ್ಲೆಯ ನಂತರ ನಿಲೇಶ್ ಮೊರ್ಬಿಯಲ್ಲಿರುವ ರಾಜ್ಯ ಸರ್ಕಾರ ನಡೆಸುವ ಜಿಎಂಇಆರ್‌ಎಸ್ ಆಸ್ಪತ್ರೆಗೆ ತೆರಳಿದರು. ತೀವ್ರವಾಗಿ ಗಾಯಗೊಂಡ ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ನಾವು ಎಫ್ಐಆರ್ ಅನ್ನು ದಾಖಲಿಸಿದ್ದೇವೆ ಮತ್ತು ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಎಫ್ಐಆರ್ ಪ್ರಕಾರ, ನಿಲೇಶ್ ಅವರು ಅಕ್ಟೋಬರ್ 2 ರಂದು ತಿಂಗಳಿಗೆ 12 ಸಾವಿರ ವೇತನದಂತೆ ಕಂಪನಿಗೆ ಸೇರಿದ್ದರು. ನಿಲೇಶ್ ಅವರನ್ನು ಅಕ್ಟೋಬರ್ 18 ರಂದು ಯಾವುದೇ ಕಾರಣ ನೀಡದೆ ಏಕಾಏಕಿ ವಜಾಗೊಳಿಸಲಾಯಿತು. ನಂತರ, ಅವರು ಮತ್ತೊಂದು ಸಂಸ್ಥೆಗೆ ಸೇರಿಕೊಂಡರು. ನಿನ್ನೆ ಬಾಕಿ ವೇತನ ಕೇಳಲು ಹೋದಾಗ ಹಲ್ಲೆ ನಡೆಸಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (2) (ಅಪರಾಧ ಬೆದರಿಕೆ), 143 (ಕಾನೂನುಬಾಹಿರ ಸಭೆ), 147 (ಗಲಭೆ) ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...