ಬಿಜೆಪಿ ಆಡಳಿತದ ಗುಜರಾತ್‌ | ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

Date:

ಗುಜರಾತ್‌ನಲ್ಲಿ 2021ರಿಂದ ಈವರೆಗೆ ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ 87,607 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕ ದ್ರವ್ಯ ರಿವಾರ್ಡ್ ನೀತಿ (ಎನ್‌ಆರ್‌ಪಿ) ಅಡಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 87 ಟನ್‌ ಮಾದಕ ವಸ್ತುಗಳನ್ನು ವಶಕ್ಕೆ ಪಡೆಸಿದ್ದಾರೆ. ಎನ್ಆರ್‌ಪಿ ಕಾಯ್ದೆಯಡಿ 2,500ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಿದ್ದಾರೆ. ಅಲ್ಲದೆ, ಮಾದಕ ವಸ್ತುಗಳು ಮಾರಾಟ ಮತ್ತು ಸಾಗಾಣಿಕೆಯ ಬಗ್ಗೆ ಮಾಹಿತಿ ನೀಡಿದ್ದ 64 ಮಂದಿಗೆ 51,202 ರೂ. ಬಹುಮಾನ ಘೋಷಿಸಿದ್ದಾರೆ. ಎಲ್ಲದೆ, 737 ಮಂದಿಗೆ ಒಟ್ಟು 5.13 ಕೋಟಿ ರೂ. ಬಹುಮಾನ ನೀಡುವ ಪ್ರಸ್ತಾಪವನ್ನು ಎನ್‌ಸಿಬಿ ಸಮಿತಿ ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.

ಎನ್‌ಆರ್‌ಪಿ ನೀತಿಯಡಿ ಡ್ರಗ್ಸ್‌ ವಶಪಡಿಸಿಕೊಳ್ಳಲು ಪೊಲೀಸರಗೆ ಸಹಾಯ ಮಾಡುವ ಸರ್ಕಾರಿ ನೌಕರರು ತಮ್ಮ ವೃತ್ತಿಜೀವನದಲ್ಲಿ 20 ಲಕ್ಷ ರೂ.ಗಳವರೆಗೆ ಬಹುಮಾನ ಗಳಿಸಬಹುದು. ಅಲ್ಲದೆ, ಸಾಮಾನ್ಯ ಜನರು ಮಾಹಿತಿ ನೀಡಿದರೆ, ಪ್ರತಿ ಪ್ರಕರಣಕ್ಕೆ 2,500 ರೂ. ನೀಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಜರಾತ್‌ನ ಯುವಜನರನ್ನು ರಕ್ಷಿಸಲು ಮತ್ತು ಮಾದಕ ವಸ್ತು ಜಾಲಗಳನ್ನು ನಿರ್ಮೂಲನೆ ಮಾಡಲು ‘ಮಾದಕ ವಸ್ತು ಬಹುಮಾನ ನೀತಿ’ಯು ಒಂದು ಪ್ರಮುಖ ಕ್ರಮವಾಗಿದೆ” ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...