ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ ಸಾಯುವವರೆಗೂ ಜೈಲು; ಕೋರ್ಟ್‌ ಆದೇಶ

Date:

ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ ಆತ ಸಾಯುವವರೆಗೂ ಜೈಲಿನಲ್ಲಿರುವ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಗುಜರಾತ್‌ನ ಅಹಮದಾಬಾದ್‌ ಜಿಲ್ಲೆಯಲ್ಲಿ ಕಾಮುಕ ತಂದೆ ತನ್ನ ಮಗಳ ಮೇಲೆ ಸತತ ಆರು ತಿಂಗಳಿನಿಂದ ನಿರಂತರವಾಗಿ ಪದೇ-ಪದೇ ಅತ್ಯಾಚಾರ ಎಸಗಿದ್ದ. 2024ರ ಏಪ್ರಿಲ್‌ನಲ್ಲಿ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ಮೆಹ್ಸಾನಾದ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಸ್. ಕಾಳೆ ಅವರು ಕೃತ್ಯವನ್ನು ‘ಅತ್ಯಂತ ಕ್ರೂರ ಅಪರಾಧ’ ಎಂದು ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪ್ರಕರಣವು ಘೋರ ಅಪರಾಧದ ವ್ಯಾಪ್ತಿಗೆ ಬರುತ್ತದೆ. ಆರೋಪಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಂತಹ ಮನಸ್ಥಿತಿ ಹೊಂದಿರುವ ವ್ಯಕ್ತಿಯನ್ನು ಸಮಾಜದಲ್ಲಿ ಬದುಕಲು ಬಿಟ್ಟರೆ, ಯಾವುದೇ ಹುಡುಗಿ ಸುರಕ್ಷಿತವಾಗಿರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಆರೋಪಿಗೆ ಶಿಕ್ಷೆಯ ವಿಷಯದಲ್ಲಿ ಗರಿಷ್ಠ ಶಿಕ್ಷೆ ನೀಡಬೇಕಿದೆ. ಆತನಿಗೆ ಜೀವಿತಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ” ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...