ಗುಜರಾತ್ | 8ನೇ ತರಗತಿ ಓದಿದವರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ

Date:

ಗುಜರಾತ್‌ನಲ್ಲಿ 8ನೇ ತರಗತಿ ಓದಿದವರಿಗೂ, 70,000 ರೂ. ಕೊಡುವ ಎಲ್ಲರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲವನ್ನು ಗುಜರಾತ್‌ನ ಪೊಲೀಸರು ಬೇಧಿಸಿದ್ದಾರೆ. 14 ಮಂದಿ ನಕಲಿ ವೈದ್ಯರನ್ನು ಬಂಧಿಸಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ 1,200 ನಕಲಿ ಪದವಿಗಳ ಡೇಟಾವನ್ನು ಹೊಂದಿದ್ದ ಗ್ಯಾಂಗ್‌ಅನ್ನು ಸೆರೆಹಿಡಿದಿರುವ ಪೊಲೀಸರು ಪ್ರಮಖ ಆರೋಪಿ ಡಾ. ರಮೇಶ್ ಗುಜರಾತಿಯನ್ನೂ ಬಂಧಿಸಿದ್ದಾರೆ.

ಆರೋಪಿಗಳು ‘ಬೋರ್ಡ್ ಆಫ್ ಎಲೆಕ್ಟ್ರೋ ಹೋಮಿಯೋಪತಿಕ್ ಮೆಡಿಸಿನ್’ (BEHM) ವೈದ್ಯಕೀಯ ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದರು. ಅವರ ಬಳಿ ಇದ್ದ ನೂರಾರು ಅರ್ಜಿಗಳು, ಪ್ರಮಾಣಪತ್ರಗಳು ಹಾಗೂ ಸ್ಟ್ಯಾಂಪ್‌ಗಳನ್ನು ಪತ್ತೆಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲಿ ವೈದ್ಯಕೀಯ ಪದವಿ ಹೊಂದಿರುವ ಮೂವರು ಅಲೋಪತಿ ವಿಭಾಗದಲ್ಲಿ ಅಭ್ಯಾಸ (ಪ್ರಾಕ್ಟಿಸ್‌-ಕೆಲಸ) ಮಾಡುತ್ತಿದ್ದಾರೆ ಎಂಬ ಮಾಹಿತಿ ದೊರೆತಿತ್ತು. ಮಾಹಿತಿ ಆಧಾರದಲ್ಲಿ ಅವರ ಕ್ಲಿನಿಕ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿಚಾರಣೆ ವೇಳೆ ತಾವು ಬಿಇಎಚ್‌ಎಂ ನೀಡಿದ ಪದವಿ ಪಡೆದಿರುವುದಾಗಿ ತೋರಿಸಿದ್ದಾರೆ. ಆದರೆ, ಗುಜರಾತ್ ಸರ್ಕಾರ ಅಂತಹ ಯಾವುದೇ ಪದವಿಯನ್ನು ನೀಡದ ಕಾರಣ ಇದು ನಕಲಿ ಎಂಬುದು ಸ್ಪಷ್ಟವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಚುನಾವಣಾ ಬಾಂಡ್ | ಆರೋಪಿ, ಅಪರಾಧಿಗಳೇ ಇಲ್ಲದ ಹಗರಣವೇ?

“ಭಾರತದಲ್ಲಿ ‘ಎಲೆಕ್ಟ್ರೋ ಹೋಮಿಯೋಪತಿ’ಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳಿಲ್ಲ ಎಂಬುದನ್ನು ಪ್ರಮುಖ ಆರೋಪಿ ರಮೇಶ್‌ ಕಂಡುಕೊಂಡಿದ್ದರು. ಆ ಕೋರ್ಸ್‌ ಹೆಸರಿನಲ್ಲಿ ಪದವಿಗಳನ್ನು ನೀಡಲು ಮಂಡಳಿಯನ್ನು ತೆರೆಯಲು ಯೋಜಿಸಿದ್ದರು. ಅದಕ್ಕಾಗಿ 5 ಮಂದಿಯನ್ನು ನೇಮಿಸಿಕೊಂಡು, ಅವರಿಗೆ ಎಲೆಕ್ಟ್ರೋ-ಹೋಮಿಯೋಪತಿಯಲ್ಲಿ ತರಬೇತಿ ನೀಡಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

“ಆದರೆ, ಜನರು ಎಲೆಕ್ಟ್ರೋ ಹೋಮಿಯೋಪತಿಯ ಬಗ್ಗೆ ಭಯಪಡುತ್ತಿದ್ದಾರೆ ಎಂದು ತಿಳಿದಾಗ, ಆರೋಪಿಗಳು ತಮ್ಮ ಯೋಜನೆಗಳನ್ನು ಬದಲಾಯಿಸಿದರು. ಗುಜರಾತ್‌ನ ಆಯುಷ್ ಸಚಿವಾಲಯ ನೀಡುವ ಪದವಿಗಳನ್ನು ನಕಲು ಮಾಡಿ, ಜನರಿಗೆ ನೀಡಲು ಪ್ರಾರಂಭಿಸಿದರು. ತಮ್ಮ BEHM ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿಕೊಂಡು, 70,000 ರೂ. ಶುಲ್ಕ ಪಡೆಯುವ ಮೂಲಕ ಅಲೋಪತಿ, ಹೋಮಿಯೋಪತಿಯಂತಹ ವಿಭಾಗಗಳ ಪ್ರಮಾಣಪತ್ರ ನೀಡುತ್ತಿದ್ದರು” ಎಂದು ಪೊಲೀಸರು ವಿವರಿಸಿದ್ದಾರೆ.

“ಹಣ ಪಾವತಿ ಮಾಡಿದ 15 ದಿನಗಳಲ್ಲಿ ಅವರು ಪ್ರಮಾಣಪತ್ರಗಳನ್ನು ನೀಡುತ್ತಿದ್ದರು. ಪ್ರಮಾಣಪತ್ರಗಳು ಸಿಂಧುತ್ವವನ್ನು ಹೊಂದಿದ್ದು, ಅವುಗಳನ್ನು ಪಡೆದ ವೈದ್ಯರು (ನಕಲಿ) ಒಂದು ವರ್ಷದ ನಂತರ 5,000 ರಿಂದ 15,000 ರೂ. ನೀಡಿ ಪ್ರಮಾಣಪತ್ರಗಳನ್ನು ನವೀಕರಿಸಬೇಕಾಗಿತ್ತು. ನವೀಕರಣ ಶುಲ್ಕ ಪಾವತಿಸಲು ಸಾಧ್ಯವಾಗದ ವೈದ್ಯರಿಗೆ ಆರೋಪಿಗಳ ಗ್ಯಾಂಗ್ ಬೆದರಿಕೆ ಹಾಕಿ ವಸೂಲಿ ಮಾಡುತ್ತಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...