ಗುಜರಾತ್ | ಕಾಗದದಲ್ಲೇ 1,906 ಶೌಚಾಲಯ ಕಟ್ಟಿದ ಪುರಸಭೆ; ಅಚ್ಚರಿಯಲ್ಲ – ಹಗರಣ!

Date:

ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ ಸೃಷ್ಟಿಸಿ, ಸುಮಾರು 2 ಕೋಟಿ ರೂ. ಹಣ ಲೂಟಿ ಮಾಡಲಾಗಿದೆ.

ಆರ್‌ಟಿಐ ಕಾರ್ಯಕರ್ತ, ನಿವೃತ್ತ ಶಿಕ್ಷಕ ಪ್ರವೀಣ್ ಮೋದಿ ಅವರು ಈ ಹಗರಣವನ್ನು ಬಯಲಿಗೆಳೆದಿದ್ದಾರೆ. ಪ್ರತಿ ಮನೆಗೂ ಶೌಚಾಲಯ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರವು ನೀಡಿದ್ದ ಅನುದಾನದಲ್ಲಿ ಪುರಸಭೆಯವರು ಅಕ್ರಮ ಎಸಗಿದ್ದಾರೆ. ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಹಣ ಲಪಟಾಯಿಸಿದ್ದಾರೆ ಎಂದು ಪ್ರವೀಣ್ ಮೋದಿ ಆರೋಪಿಸಿದ್ದಾರೆ.

“ಐದು ಖಾಸಗಿ ಟ್ರಸ್ಟ್‌ಗಳಾದ ಆನಂದ್ ಕಡಿ ಗ್ರಾಮೋಧ್ಯೋಗ್ ಟ್ರಸ್ಟ್, ನವಚೇತನ ವಿಕಾಸ್ ಟ್ರಸ್ಟ್, ಕಾಮದಾರ್ ಕಲ್ಯಾಣ್ ಮಂಡಲ್, ಮಹಾತ್ಮಾ ಗಾಂಧಿ ಗ್ರಾಮನಿರ್ಮಾಣ ಟ್ರಸ್ಟ್ ಹಾಗೂ ವಸುಂಧರಾ ಸಾರ್ವಜನಿಕ ಟ್ರಸ್ಟ್‌ ಮೂಲಕ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 1,906 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅಂಕಲೇಶ್ವರ ಪುರಸಭೆಯ ದಾಖಲೆಗಳಲ್ಲಿ ವಿವರಿಸಲಾಗಿದೆ. ಆದರೆ, ದಾಖಲೆಗಳಲ್ಲಿ ಉಲ್ಲೇಖಿಸಿರುವ ಹಲವು ಸ್ಥಳಗಳಲ್ಲಿ ಯಾವುದೇ ಶೌಚಾಲಯವನ್ನು ನಿರ್ಮಿಸಲಾಗಿಲ್ಲ. ವಿವಾಹ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ಸಮಯದಲ್ಲಿ ನೀಡಲಾಗಿದ್ದ ಆಧಾರ್‌ ಕಾರ್ಡ್‌ನಂತಹ ಗುರುತಿನ ಚೀಟಿಗಳನ್ನು ಪುರಸಭೆಯಲ್ಲಿ ಅಕ್ರಮಕ್ಕೆ ಬಳಸಿಕೊಳ್ಳಲಾಗಿದೆ” ಎಂದು ಪ್ರವೀಣ್ ಆಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಮನಾರ್ಹ ವಿಚಾರವೆಂದರೆ, “ಐಷಾರಾಮಿ ಬಂಗಲೆಗಳಲ್ಲಿ ವಾಸಿಸುತ್ತಿರುವವರಿಗೂ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಉಲ್ಲೇಖಿತ ಐಷಾರಾಮಿ ಕುಟುಂಬಗಳು ಯಾವುದೇ ರೀತಿಯ ಸಹಾಯಧನಕ್ಕಾಗಿ ಅರ್ಜಿಗಳನ್ನೇ ಸಲ್ಲಿಸಿಲ್ಲ” ಎಂದು ಅವರು ವಿವರಸಿದ್ದಾರೆ.

ಈ ಲೇಖನ ಓದಿದ್ದೀರಾ?: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಅನುಮಾನ – ವಿವಾದಗಳದೇ ಮೇಲುಗೈ!

“2012ರಲ್ಲಿ ವಿವಾಹವಾಗಿದ್ದ ನೀರವ್ ಮತ್ತು ಕ್ರಿಮಾ ಹಜಾರಿವಾಲಾ ಅವರು ವಿವಾಹ ಪ್ರಮಾಣಪತ್ರಕ್ಕಾಗಿ ಆಧಾರ್ ಕಾರ್ಡ್‌ ಸಲ್ಲಿಸಿದ್ದರು. ಅದನ್ನು ದುರುಪಯೋಗ ಮಾಡಿಕೊಂಡು, ಶೌಚಾಲಯಕ್ಕೆ ಸಹಾಯಧನ ನೀಡಿರುವುದಾಗಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆದರೆ, ನೀರವ್ ಕುಟುಂಬವು ತಾವು ಯಾವುದೇ ಸಹಾಯಧನ ಪಡೆದಿಲ್ಲ. ಅದಕ್ಕಾಗಿ ಅರ್ಜಿಯನ್ನೂ ಸಲ್ಲಿಸಿಲ್ಲ. ಇದು ನಮ್ಮ ಗೌರವಕ್ಕೆ ಧಕ್ಕೆ ತಂದಿದೆ. ಪುರಸಭೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೀರವ್ ಒತ್ತಾಯಿಸಿದ್ದಾರೆ. ಇಂತಹ ಹಲವಾರು ವಿಚಾರಗಳಿಗಾಗಿ ಅರ್ಜಿ ಸಲ್ಲಿಸಿದ್ದವರ ಆಧಾರ್‌ ಕಾರ್ಡ್‌ಗಳ ದುರುಪಯೋಗವಾಗಿದ್ದು, ಅಕ್ರಮಕ್ಕೆ ಬಳಸಿಕೊಳ್ಳಲಾಗಿದೆ” ಎಂದು ಪ್ರವೀಣ್ ತಿಳಿಸಿದ್ದಾರೆ.

ಶೌಚಾಲಯದ ಸಹಾಯಧನ ಹಗರಣದ ಮೇಲೆ ತಕ್ಷಣವೇ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಬಯಲಿಗೆಳೆಯಬೇಕು ಎಂದು ಆರ್‌ಟಿಐ ಕಾರ್ಯಕರ್ತ ಪ್ರವೀಣ್ ಮೋದಿ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಡಿಎಸ್‌ಪಿಗೆ ಲಿಖಿತ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...