ಗುಜರಾತ್ ವಿಮಾನ ದುರಂತ | 190 ಸಂತ್ರಸ್ತರ ಗುರುತು ಪತ್ತೆ, 159 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

Date:

ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಕನಿಷ್ಠ 190 ಮಂದಿಯ ಗುರುತು ಪತ್ತೆಯಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಯ ಪತ್ತೆಹಚ್ಚಲಾಗಿದೆ. 32 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 159 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಜೂನ್ 12ರಂದು 242 ಪ್ರಯಾಣಿಕರು ಮತ್ತು ಸಿಬ್ಬಂದಿಯಿಂದ ಏರ್‌ ಇಂಡಿಯಾ AI-171 ಬೋಯಿಂಗ್ 787-8 ಡ್ರೀಮ್‌ಲೈನರ್‌ ವಿಮಾನವು ಅಹಮದಾಬಾದ್‌ನಲ್ಲಿ ಪತನಗೊಂಡಿದೆ. ಒಬ್ಬ ಪ್ರಯಾಣಿಕರನ್ನು ಹೊರತುಪಡಿಸಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್‌ ವಿಮಾನ ದುರಂತ: ಮೃತರ ಸಂಖ್ಯೆಯ ಬಗ್ಗೆ ಹೆಚ್ಚಿದ ಗೊಂದಲ, ಅಧಿಕಾರಿಗಳು ಮೌನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನ ವೈದ್ಯರಿದ್ದ ಹಾಸ್ಟೆಲ್‌ ಒಂದಕ್ಕೆ ಅಪ್ಪಳಿಸಿದ ಕಾರಣದಿಂದಾಗಿ ಮೆಸ್‌ನಲ್ಲಿ ಊಟ ಮಾಡುತ್ತಿದ್ದವರು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ವೈದ್ಯರು ಹೇಳಿದಂತೆ ಒಟ್ಟು 270 ಮೃತದೇಹಗಳು ಲಭಿಸಿದೆ. ವಿಮಾನದಲ್ಲಿ ಇದ್ದದ್ದು 242 ಮಂದಿ. ಆದ್ದರಿಂದ ಹಾಸ್ಟೆಲ್‌ನಲ್ಲಿ 28 ಮಂದಿ ಮೃತಪಟ್ಟಿದ್ದಾರೆಯೇ ಎಂಬ ಪ್ರಶ್ನೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಮೃತದೇಹಗಳ ಹಸ್ತಾಂತರದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ, “ಬುಧವಾರ ಬೆಳಿಗ್ಗೆವರೆಗೆ, 190 ಡಿಎನ್‌ಎ ಮಾದರಿಗಳ ಹೊಂದಾಣಿಕೆಯಾಗಿದೆ. 159 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇತರ ಮೃತದೇಹಗಳ ಡಿಎನ್‌ಎ ಮಾದರಿಗಳನ್ನು ಹೊಂದಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.

“ಅಪಘಾತದ ಬಳಿಕ 71 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಪೈಕಿ ಕೇವಲ ಏಳು ಮಂದಿ ಮಾತ್ರ ಪ್ರಸ್ತುತ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇತರೆ 12 ರೋಗಿಗಳನ್ನು ಅಹಮದಾಬಾದ್ ಮತ್ತು ದಾಹೋದ್‌ನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಚಿಕಿತ್ಸೆಯ ವೇಳೆ ಮೂವರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಡಾ. ರಾಕೇಶ್ ಜೋಶಿ ಮಾಹಿತಿ ನೀಡಿದ್ದಾರೆ.

ಇನ್ನು ವಿಮಾನದಲ್ಲಿದ್ದ ವ್ಯಕ್ತಿಗಳ ಮತ್ತು ಹಾಸ್ಟೆಲ್ ಸೇರಿದಂತೆ ವಿಮಾನ ದುರಂತ ನಡೆದ ಸ್ಥಳದಲ್ಲಿ ಸಾವನ್ನಪ್ಪಿದವರು ಸೇರಿದಂತೆ 250 ಮಂದಿಯ ಕಟುಂಬಸ್ಥರ ಡಿಎನ್ಎ ಸಂಗ್ರಹಿಸಲಾಗಿದೆ ಎಂದು ಈ ಹಿಂದೆ ರಾಜ್ಯ ಸರ್ಕಾರ ಹೇಳಿದೆ. ಆಸ್ಪತ್ರೆಯ ವೈದ್ಯರು 270 ಶವಗಳು ಪತ್ತೆಯಾಗಿದೆ ಎಂದಿದ್ದಾರೆ. 270 ಜನರ ಅಂಕಿ ಅಂಶ ನಿಖರವಾಗಿದ್ದರೂ 16 ಹೆಚ್ಚುವರಿ ಸಾವುಗಳ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟೀಕರಣವಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...