ಗುಜರಾತ್‌ | ʻನನ್ನ ಪತ್ನಿ ಗರ್ಭಿಣಿʼ ಎಂದ ಅತ್ಯಾಚಾರ ಆರೋಪಿ; ಹೈಕೋರ್ಟ್‌ ಸಂಧಾನ ವಿಫಲ

Date:

ಗರ್ಭಪಾತಕ್ಕೆ ಅನುಮತಿ ಕೋರಿ ಅಪ್ರಾಪ್ತೆ ಯುವತಿಯೊಬ್ಬಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಗುಜರಾತ್‌ ಹೈಕೋರ್ಟ್‌ ನಡೆಸಿದ ಸಂಧಾನ ಯತ್ನ ವಿಫಲವಾಗಿದೆ. 

23 ವರ್ಷದ ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಯುವತಿಯು ಇದೀಗ ಏಳು ತಿಂಗಳ ಗರ್ಭಿಣಿಯಾಗಿದ್ದಾಳೆ. ತನ್ನ ಮಗಳ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಯುವತಿಯ ತಂದೆ  ಗುಜರಾತ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದೂರುದಾರರು ಮತ್ತು ಆರೋಪಿಯ ಜೊತೆ ಸಂಧಾನ ಸಾಧ್ಯವೇ ಎಂದು ಸಲಹೆ ಕೇಳಿದ್ದ ನ್ಯಾಯಾಯಲಯವು, ಮೋರ್ಬಿ ಸಬ್‌ ಜೈಲ್‌ನಲ್ಲಿರುವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ನ್ಯಾಯಾಧೀಶ ಸಮೀರ್ ದವೆ ಎದುರು ಹಾಜರಾದ ಆರೋಪಿʻ ನಾನು ಎರಡು ವರ್ಷಗಳ ಹಿಂದೆ ವಿವಾಹಿತನಾಗಿದ್ದು, ನನ್ನ ಪತ್ನಿಯು ಇದೀಗ ಗರ್ಭಿಣಿಯಾಗಿದ್ದಾಳೆʼ ಎಂದು ಹೇಳಿಕೆ ನೀಡಿದ್ದಾನೆ. ಹೀಗಾಗಿ ಸಂಧಾನವು ಸಾಧ್ಯವಿಲ್ಲ ಎಂದು ಬಾಲಕಿ ಪರ ವಕೀಲರಾದ ಸಿಕಂದರ್ ಸೈಯದ್ ಅವರಿಗೆ ನ್ಯಾಯಾಲಯ ತಿಳಿಸಿದೆ.

ಇದೇ ಪ್ರಕರಣದ ಅರ್ಜಿ ವಿಚಾರಣೆ  ವೇಳೆ ಕಳೆದ ವಾರ ನ್ಯಾಯಾಧೀಶ ಸಮೀರ್ ದವೆ, ʻಮನುಸ್ಮೃತಿʼ ಓದುವಂತೆ ವಕೀಲರಿಗೆ ಸಲಹೆ ನೀಡಿದ್ದರು. ನ್ಯಾಯಾಧೀಶರ ಈ ಹೇಳಿಕೆ ವಿವಾದ ಸೃಷ್ಟಿಸಿತ್ತು. 

ʻಆಗಸ್ಟ್ 16ರಂದು ಬಾಲಕಿಯ ಹೆರಿಗೆ ದಿನಾಂಕ ನೀಡಲಾಗಿದೆ. ಹೀಗಾಗಿ ಆದಷ್ಟು ಬೇಗನೆ ಪ್ರಕರಣದ ವಿಚಾರಣೆ ನಡೆಸಬೇಕುʼ ಎಂದು ಬಾಲಕಿ ಪರ ವಕೀಲರಾದ ಸಿಕಂದರ್ ಸೈಯದ್ ಮನವಿ ಮಾಡಿದ್ದರು.

ʻನಾವು 21ನೇ ಶತಮಾನದಲ್ಲಿ ಬದುಕುತ್ತಿರುವ ಕಾರಣಕ್ಕೆ ಈ ಉದ್ವೇಗವಿದೆ. ಈ ಹಿಂದೆ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ತಾಯ್ತನ ಪಡೆದುಕೊಳ್ಳುತ್ತಿದ್ದರು. ನೀವು ಇದನ್ನು ಓದುವುದಿಲ್ಲ. ಆದರೆ ಇದಕ್ಕಾಗಿ ಒಮ್ಮೆ ಮನುಸ್ಮೃತಿಯನ್ನು ಓದಿರಿʼ ಎಂದು ವಕೀಲರಿಗೆ ನ್ಯಾಯಮೂರ್ತಿ ʻಸಲಹೆʼ ನೀಡಿದ್ದರು.

ಒಂದು ಕಾಲದಲ್ಲಿ 14- 15 ವರ್ಷಕ್ಕೆ ಹೆಣ್ಣುಮಕ್ಕಳು ತಾಯಂದಿರಾಗುವುದು ಸರ್ವೇ ಸಾಮಾನ್ಯವಾಗಿತ್ತು. 17 ವರ್ಷಕ್ಕೆ ತಲುಪುವ ವೇಳೆಗೆ ಬಹುತೇಕರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿರುತ್ತಿದ್ದರು ಎಂದು ಹೇಳಿದ್ದರು.

ಗರ್ಭಪಾತ ಪ್ರಕ್ರಿಯೆ ವೇಳೆ ಮಗು ಜೀವಂತವಾಗಿ ಜನಿಸುವ ಸಾಧ್ಯತೆಯೂ ಇದೆ ಎಂದು ಹೇಳುದ್ದ ನ್ಯಾಯಮೂರ್ತಿ, ಇದು ನಡೆದರೆ, ಮಗುವನ್ನು ಯಾರು ನೋಡಿಕೊಳ್ಳುತ್ತಾರೆ? ಮಗು ಜೀವಂತ ಜನಿಸಿದರೆ ಅದನ್ನು ಕೊಲ್ಲಲು ಕೋರ್ಟ್ ಅನುಮತಿ ನೀಡಲು ಸಾಧ್ಯವೇ?” ಎಂದು ಪ್ರಶ್ನಿಸಿತ್ತು.  ಏಳು ತಿಂಗಳು ಕಳೆದಿರುವುದರಿಂದ ಮಗು ಜೀವಂತ ಜನಿಸಿದರೆ ಏನು ಮಾಡಬಹುದು? “ದತ್ತು ಸ್ವೀಕಾರ ಆಯ್ಕೆಯ ಬಗ್ಗೆ ಪರಿಶೀಲಿಸುವುದನ್ನು ನೀವು ಆರಂಭಿಸಿ” ಎಂದು ವಕೀಲರಿಗೆ ಸಲಹೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...