ಗುಜರಾತ್ | ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

Date:

ಗುಜರಾತ್‌ ರಾಜ್ಯದ ಸೂರತ್ ನಗರದ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅದಾಜಾನ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಕುಟುಂಬವು ಆತ್ಮಹತ್ಯೆಗೆ ಶರಣಾಗಿದ್ದು, ಅಲ್ಲಿ ಸಿಕ್ಕಿರುವ ಪತ್ರವೊಂದರಲ್ಲಿ’ಹಣಕಾಸಿನ ಸಂಕಷ್ಟವೇ ನಮ್ಮ ಈ ನಿರ್ಧಾರಕ್ಕೆ ಕಾರಣ” ಎಂದು ಬರೆಯಲಾಗಿದೆ.

ಮೃತರನ್ನು ಮನೆಯ ಯಜಮಾನ ಮನೀಷ್ ಸೋಲಂಕಿ (37), ಆತನ ಪತ್ನಿ, ತಂದೆ-ತಾಯಿ, 6 ವರ್ಷದ ಪುತ್ರ, 10 ಮತ್ತು 13 ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ. ಮನೀಷ್ ಸೋಲಂಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ ಉಳಿದ ಆರು ಮಂದಿ ವಿಷಾಹಾರ ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿಕ್ಷಕರ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು

ಕುಟುಂಬದ ಯಜಮಾನ ಮನೀಷ್ ಸೋಲಂಕಿ ಪೀಠೋಪಕರಣ ಉದ್ಯಮಿಯಾಗಿದ್ದು ಕುಟುಂಬವು ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಗುಜರಾತ್‌ ಸೂರತ್‌ನ ಕಾರ್ಖಾನೆಯಲ್ಲಿ ಸುಮಾರು 35 ಕಾರ್ಮಿಕರನ್ನು ಹೊಂದಿದ್ದ ಕಾರ್ಖಾನೆಯನ್ನು ಸೋಲಂಕಿ ಅವರು ನಡೆಸುತ್ತಿದ್ದರು. ಈ ಕಾರ್ಮಿಕರು ಶನಿವಾರ ಬೆಳಿಗ್ಗೆ ಸೋಲಂಕಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು. ಆದರೆ ಅವರು ಕರೆಗಳಿಗೆ ಉತ್ತರಿಸಲಿಲ್ಲ. ಅಲ್ಲದೆ ಅವರ ಮನೆಯ ಬಾಗಿಲನ್ನು ತೆರೆಯಲಿಲ್ಲ.

ಸ್ಥಳೀಯರು ಮನೆಯ ಹಿಂಬದಿಯ ಕಿಟಕಿ ಒಡೆದು ಮನೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸೋಲಂಕಿ ದೊಡ್ಡ ದೊಡ್ಡ ಒಪ್ಪಂದಗಳನ್ನು ಹೊಂದಿದ್ದರು ಮತ್ತು ದೀರ್ಘಕಾಲದಿಂದ ಕೆಲವು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಕುಟುಂಬದ ಸಂಬಂಧಿಕರು ಯಾವುದೇ ವಿವರ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಸಾವಿಗೆ ನಿಖರ ಕಾರಣವೇನೆಂದು ತನಿಖೆ ನಂತರ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...