ಉತ್ತರಾಯಣ ಉತ್ಸವ | ಆರು ಮಂದಿಗೆ ಉರುಳಾದ ಗಾಳಿಪಟದ ಮಾಂಜಾ ದಾರ; ನೂರಾರು ಮಂದಿಗೆ ಗಾಯ

Date:

ಜನವರಿ 14ರಂದು ಗುಜರಾತ್‌ನಲ್ಲಿ ಉತ್ತರಾಯಣ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಗಾಳಿಪಟದ ಹರಿತವಾದ ಮಾಂಜಾ ದಾರ ಆರು ಮಂದಿಯ ಕೊರಳಿಗೆ ಉರುಳಾಗಿ ಪರಿಣಮಿಸಿ ಸಾವನ್ನಪ್ಪಿದ್ದಾರೆ, ನೂರಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.

ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ಹಲವು ಮಂದಿಗೆ ತೀವ್ರವಾದ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹಬ್ಬದ ದಿನದಂದೇ ರಾಜ್ಯದಲ್ಲಿ ತುರ್ತು ಸೇವೆಗೆ ಒತ್ತಡ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ಗಾಳಿಪಟಕ್ಕೆ ಬಳಸುವ ಮಾಂಜಾ ದಾರ; ತಯಾರಿಕೆ – ಮಾರಾಟ ನಿಷೇಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು 14ರಂದು ರಾತ್ರಿ 9 ಗಂಟೆಯ ವೇಳೆ 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದೆ. ಹಬ್ಬದ ನಡುವೆ ಈ ಸೇವೆಯನ್ನು ತುರ್ತಾಗಿ ನೀಡುವಲ್ಲಿ ಅಡಚಣೆ ಉಂಟಾಗಿದೆ ಎಂದು ಹೇಳಲಾಗಿದೆ.

ರಾಜ್‌ಕೋಟ್‌ನಲ್ಲಿ ಗಾಳಿಪಟದ ದಾರ ಗಂಟಲನ್ನೇ ಸೀಳಿದ್ದು ಬೈಕ್ ಸವಾರ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಸುರೇಂದ್ರ ನಗರದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ಎಂಬ ಬಾಲಕ ಕತ್ತನ್ನು ಗಾಳಿಪಟದ ದಾರ ಸೀಳಿದ್ದು ಬಾಲಕ ಸಾವನ್ನಪ್ಪಿದ್ದಾನೆ.

ಇನ್ನು ಕಸ್ಬಾ ಪ್ರದೇಶದಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಗಾಳಿಪಟ ದಾರವನ್ನು ತೆಗೆದುಹಾಕಲು ಪ್ರಯತ್ನಿಸುವಾಗ ಮಹಿಳೆಯೊಬ್ಬರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಇನ್ನು ಮಹಿಳೆಯನ್ನು ರಕ್ಷಿಸಲು ಯತ್ನಿಸಿದ ಸಹೋದರ ಕೂಡಾ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಉತ್ತರಾಯಣ ಆಚರಣೆಯ ಸಮಯದಲ್ಲಿ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ವಡ್ನಾಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ದಾರ ತಗುಲಿ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಮಾಂಜಾ ದಾರ ಬಳಕೆ ನಿಷೇಧ; ಬಳಕೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ: ಡಿಸಿ

ಇನ್ನು ಉತ್ತರಾಯಣ ಹಬ್ಬದ ಸಂದರ್ಭದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಗಾಯಗಳಾಗಿರುವ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ ಕರುಣಾ ಅನಿಮಲ್ ಆ್ಯಂಬುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದ್ದು, ಈ ಪೈಕಿ ಪ್ರಾಣಿಗಳ ರಕ್ಷಣೆಗೆ 758 ಮತ್ತು ಪಕ್ಷಿಗಳ ರಕ್ಷಣೆಗೆ 644 ಕರೆಗಳು ಬಂದಿದೆ.

ಸಾಮಾನ್ಯವಾಗಿ ಪ್ರತಿದಿನ 3,000ರಿಂದ 4,000 ತುರ್ತು ಸೇವೆಯ ಕರೆಗಳು 108ಕ್ಕೆ ಬರುತ್ತದೆ. ಆದರೆ ಜನವರಿ 14 ಮತ್ತು 15 ರಂದು ಕರೆಗಳ ಪ್ರಮಾಣ ಶೇಕಡ 70ರಷ್ಟು ಹೆಚ್ಚಳವಾಗಿದೆ. ಜನವರಿ 14ರಂದು ಅಂದಾಜು 4,900 ಮತ್ತು ಜನವರಿ 15ರಂದು 4,500 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಉತ್ತರಾಯಣ ಹಬ್ಬದ ಹಿನ್ನೆಲೆಯಲ್ಲಿ ಗಾಳಿಪಟ ಹಾರಿಸಲು ಬಳಸುವ ಎಲ್ಲಾ ರೀತಿಯ ಗಾಜು ಲೇಪಿತ ದಾರಗಳನ್ನು ನಿಷೇಧಿಸಲಾಗಿದೆ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ. ಆದರೂ ಕೂಡಾ ಬಳಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...