ಗುಜರಾತ್ | RTI ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ದಿನು ಸೋಲಂಕಿ ಸಹಿತ 6 ಮಂದಿ ಖುಲಾಸೆ

Date:

2010ರಲ್ಲಿ ಗುಜರಾತಿನಲ್ಲಿ ನಡೆದಿದ್ದ ಆರ್‌ಟಿಐ ಕಾರ್ಯಕರ್ತ ಅಮಿತ್‌ ಜೇತ್ವಾ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿದ್ದ ಶಿಕ್ಷೆಯ ವಿರುದ್ಧ ಬಿಜೆಪಿ ಮಾಜಿ ಸಂಸದ ದಿನು ಸೋಲಂಕಿ ಮತ್ತು ಇತರ ಆರು ಮಂದಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಸೋಮವಾರ ಪುರಸ್ಕರಿಸಿದೆ. ಅಲ್ಲದೇ, ಪ್ರಕರಣದಿಂದ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

‘ವಿಚಾರಣಾ ನ್ಯಾಯಾಲಯ ಪೂರ್ವನಿರ್ಧರಿತ ಕಲ್ಪನೆಯೊಂದಿಗೆ ವಿಚಾರಣೆಯನ್ನು ನಡೆಸಿದೆ’ ಎಂದು ಪರಿಗಣಿಸಿ ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ವಿಮಲ್ ಕೆ ವ್ಯಾಸ್ ಅವರ ವಿಭಾಗೀಯ ಪೀಠವು ಸೋಲಂಕಿ ಮತ್ತು ಇತರ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಿಬಿಐ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ನ್ಯಾಯಮೂರ್ತಿ ಸುಪೇಹಿಯಾ ಅವರು ಖುಲಾಸೆಗೊಳಿಸುವ ತೀರ್ಪು ನೀಡುವಾಗ, “ಅನಿರೀಕ್ಷಿತ ಸಂದರ್ಭಗಳಿಂದಾಗಿ ನಾವು ಈ ತೀರ್ಪು ಪ್ರಕಟಿಸಲು ಮೂರು ವಾರ ತಡವಾಯಿತು. ಸತ್ಯಮೇವ ಜಯತೇ. ಸತ್ಯಕ್ಕೆ ಜಯ ಸಿಗಬೇಕು. ಮೊದಲಿನಿಂದಲೂ ತನಿಖೆಯು ನಿಷ್ಪ್ರಯೋಜಕ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ” ಎಂದು ಹೇಳುತ್ತಾ ಮೇಲ್ಮನವಿಯನ್ನು ಪುರಸ್ಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 20, 2010 ರಂದು ಗುಜರಾತ್ ಹೈಕೋರ್ಟ್ ಆವರಣದ ಹೊರಗೆ ಆರ್‌ಟಿಐ ಕಾರ್ಯಕರ್ತ ಅಮಿತ್‌ ಜೇತ್ವಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೋಲಂಕಿ ಮತ್ತು ಇತರ ಆರು ಮಂದಿಗೆ 2019ರಲ್ಲಿ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣದಲ್ಲಿ 15 ಲಕ್ಷ ರೂ. ದಂಡ ಕೂಡ ವಿಧಿಸಲಾಗಿತ್ತು.

ಪ್ರಕರಣದಲ್ಲಿ ಅಪರಾಧಿಯಾಗಿದ್ದ ದಿನು ಸೋಲಂಕಿ ಮತ್ತು ಅವರ ಸೋದರಳಿಯ ಶಿವ ಸೋಲಂಕಿ ಅವರ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ನಂತರ ಅಮಾನತುಗೊಳಿಸಿತ್ತು.

AMIT JETHVA
ಆರ್‌ಟಿಐ ಕಾರ್ಯಕರ್ತ ಅಮಿತ್‌ ಜೇತ್ವಾ

“ಅಪರಾಧದ ಆರಂಭದಿಂದಲೂ ತನಿಖೆಯು ನಿಷ್ಪ್ರಯೋಜಕ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ. ಸಾಕ್ಷಿಗಳ ವಿಶ್ವಾಸವನ್ನು ಭದ್ರಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ” ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿತು. ಪರಿಣಾಮವಾಗಿ ಜುಲೈ 11, 2019 ರಂದು ಸಿಬಿಐ ಕೋರ್ಟ್‌ನ ವಿಶೇಷ ನ್ಯಾಯಾಧೀಶರು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದರು.

ಸಿಬಿಐ ಕೋರ್ಟ್ ವಿಶೇಷ ನ್ಯಾಯಾಧೀಶರು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302 (ಕೊಲೆ) 120 (ಬಿ) (ಅಪರಾಧ ಪಿತೂರಿ, 201 (ಸಾಕ್ಷಾಧಾರಗಳು ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಅಪರಾಧಕ್ಕಾಗಿ ಶಿಕ್ಷೆ ವಿಧಿಸಿದ್ದರು.

ಜುಲೈ 20, 2010 ರಂದು ಗುಜರಾತ್ ಹೈಕೋರ್ಟಿನ ಹೊರಗೆ ಜೇಥ್ವಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅವರು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಮಾಹಿತಿ ಪಡೆಯುವ ಮೂಲಕ ದಿನು ಸೋಲಂಕಿಯನ್ನು ಒಳಗೊಂಡಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ಬಹಿರಂಗಪಡಿಸಲು ಪ್ರಯತ್ನಿಸಿದ್ದರು. ನಂತರ ಇಬ್ಬರು ಅಪರಿಚಿತ ದಾಳಿಕೋರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ತನಿಖೆಯನ್ನು ರಾಜ್ಯ ಪೊಲೀಸ್‌ನ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿತ್ತು. ನಂತರ ಆರೋಪಪಟ್ಟಿ ಸಲ್ಲಿಸಿತ್ತು. ಸೆಪ್ಟೆಂಬರ್ 2012ರಲ್ಲಿ ಹೈಕೋರ್ಟ್ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿತ್ತು. ನವೆಂಬರ್ 2013ರಲ್ಲಿ ಸಿಬಿಐ ದಿನು ಸೋಲಂಕಿಯನ್ನು ಬಂಧಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...