ಆಂಧ್ರಪ್ರದೇಶ ಮತ್ತು ಛತ್ತೀಸಗಢ ಗಡಿಯಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿ ನಾಯಕ ಸಾವಿಗೀಡಾಗಿದ್ದಾನೆ.
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪ್ರಮುಖ ಮಾವೋವಾದಿ ಕಾರ್ಯಕರ್ತ ಮದ್ವಿ ಹಿದ್ಮಾ ಎಂಬಾತನನ್ನು ಎನ್ ಕೌಂಟರ್ ನಲ್ಲಿ ಪೊಲೀಸರು ಹತ್ಯೆ ಮಾಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ ಸೇರಿ ಆರು ಮಂದಿಯನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ಮಾವೋವಾದಿಗಳ ಗುರುತು ಮತ್ತು ಗಾಯಗೊಂಡವರ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.





