ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ ಖುಲಾಸೆ

Date:

2002ರಲ್ಲಿ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ ಖುಲಾಸೆಗೊಂಡಿದ್ದಾರೆ. ಏಳು ವರ್ಷಗಳ ಹಿಂದೆ ವಿಶೇಷ ಸಿಬಿಐ ಕೋರ್ಟ್ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಶನಿವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ. ಆದರೆ ಗುರ್ಮೀತ್‌ ಸಿಂಗ್‌ ಇನ್ನೂ ಎರಡು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿದ್ದು 20 ವರ್ಷಗಳ ಜೀವಾವಧಿ ಶಿಕ್ಷೆಯಿದೆ. ಆದ್ದರಿಂದ ಜೈಲಿನಲ್ಲೇ ಇರಲಿದ್ದಾರೆ.

ಸಿರ್ಸಾ ಮೂಲದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆಗೆ ಸಂಬಂಧಿಸಿದಂತೆ ಸಿಂಗ್ ಮತ್ತು ಇತರ ಮೂವರು ಕುಲದೀಪ್ ಸಿಂಗ್, ನಿರ್ಮಲ್ ಸಿಂಗ್ ಮತ್ತು ಕ್ರಿಶನ್ ಲಾಲ್‌ಗೆ 2019ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗುರ್ಮೀತ್ ಸಿಂಗ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗುರ್ಮೀತ್‌ ಸಿಂಗ್‌ ಅವರನ್ನು ಖುಲಾಸೆಗೊಳಿಸಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್: ಇದು 15ನೇ ಬಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರಾ ಸಚ್ ಪತ್ರಿಕೆಯನ್ನು ನಡೆಸುತ್ತಿದ್ದ ಛತ್ರಪತಿ ಅವರನ್ನು 2002ರ ಅಕ್ಟೋಬರ್‌ನಲ್ಲಿ ಹರಿಯಾಣದ ಸಿರ್ಸಾದಲ್ಲಿರುವ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಡೇರಾ ಸಚ್ಚಾ ಸೌದಾ ಪ್ರಧಾನ ಕಚೇರಿಯಲ್ಲಿ ಮಹಿಳಾ ಅನುಯಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿದ ಅನಾಮಧೇಯ ಪತ್ರವೊಂದನ್ನು ಛತ್ರಪತಿ ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ್ದರು. ಅದಾದ ಬಳಿಕ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಛತ್ರಪತಿಯವರ ಕುಟುಂಬವು 2003ರಲ್ಲಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಬಳಿಕ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. 2007ರ ಜುಲೈನಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದರೂ, ಗುರ್ಮೀತ್ ರಾಮ್ ರಹೀಮ್ ಸಿಂಗ್ 2017ರಲ್ಲಿ ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಅಪರಾಧಿ. ಆದರೆ ಪದೇ ಪದೇ ಪರೋಲ್ ಮೇಲೆ ಗುರ್ಮೀತ್ ಹೊರಬರುವುದು ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

2026ರ ಜನವರಿಯಲ್ಲಿ ಗುರ್ಮೀತ್ ಸಿಂಗ್‌ಗೆ 40 ದಿನಗಳ ಪರೋಲ್ ಮಂಜೂರು ಮಾಡಲಾಗಿದೆ. 2017ರಲ್ಲಿ ಸಿಂಗ್ ಶಿಕ್ಷೆಗೊಳಗಾದ ನಂತರ 15ನೇ ಬಾರಿ ಪರೋಲ್ ಪಡೆದಿರುವುದು. ಕಳೆದ ಐದು ವರ್ಷಗಳಲ್ಲಿ ಸಿಂಗ್ ಪರೋಲ್ ಮತ್ತು ಫರ್ಲೋ ಮೂಲಕ ಒಟ್ಟು 400ಕ್ಕೂ ಹೆಚ್ಚು ದಿನಗಳನ್ನು ಜೈಲಿನಿಂದ ಹೊರಗೆ ಕಳೆದಿದ್ದಾರೆ.

ಮುಖ್ಯವಾಗಿ ಹರಿಯಾಣ ಅಥವಾ ದೆಹಲಿಯ ಚುನಾವಣೆಗಳ ಸಮಯದಲ್ಲಿಯೇ ಪರೋಲ್ ಸಿಗುವುದರ ವಿರುದ್ಧ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಹರಿಯಾಣದಲ್ಲಿ ಗುರ್ಮೀತ್‌ ಸಿಂಗ್‌ಗೆ ದೊಡ್ಡ ಮಟ್ಟದ ಅನುಯಾಯಿಗಳಿರುವುದರಿಂದ ಚುನಾವಣೆ ವೇಳೆಯೇ ಪರೋಲ್ ಸಿಗುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಇನ್ನು ಅತ್ಯಾಚಾರದಂತಹ ಗಂಭೀರ ಪ್ರಕರಣದ ಅಪರಾಧಿಗೆ ಪದೇ ಪದೇ ಪರೋಲ್ ನೀಡುವುದನ್ನು ಪ್ರಶ್ನಿಸಿ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ (SGPC) ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಹಿಂದೆಯೇ ಹೈಕೋರ್ಟ್ ಮುಂದಿನ ಬಾರಿ ಪರೋಲ್ ನೀಡುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಹರಿಯಾಣ ಸರ್ಕಾರಕ್ಕೆ ಸೂಚಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...