‘ದೃಶ್ಯಂ’ಸಿನಿಮಾದಿಂದ ಪ್ರೇರಣೆ: ಜಿಲ್ಲಾಧಿಕಾರಿ ನಿವಾಸದ ಬಳಿ ಶವ ಹೂತಿಟ್ಟಿದ್ದ ಜಿಮ್‌ ತರಬೇತುದಾರ

Date:

ಇತ್ತೀಚಿಗೆ ವಿವಾಹಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕಾಗಿ 35 ವರ್ಷದ ವಿಮಲ್‌ ಸೋನಿ ಎಂಬ ಜಿಮ್‌ ತರಬೇತುದಾರರೊಬ್ಬರನ್ನು ಕಾನ್ಪುರದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದರು. ಕೊಲೆಗೆ ‘ದೃಶ್ಯಂ’ ಸಿನಿಮಾ ಪ್ರೇರಣೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ವಿವಾಹಿತ ಮಹಿಳೆ ಎಕ್ತಾ ಕಪೂರ್‌ ಎಂಬುವರ ಜೊತೆ ಸಂಬಂಧ ಹೊಂದಿದ್ದ ಜಿಮ್‌ ತರಬೇತುದಾರ ಆಕೆಯನ್ನು ಕೊಲೆ ಮಾಡಿ ಶವವನ್ನು ಕಾನ್ಪುರದ ಸಿವಿಲ್ ಲೈನ್ಸ್‌ನಲ್ಲಿರುವ ಜಿಲ್ಲಾಧಿಕಾರಿ ಅವರ ನಿವಾಸದ ಬಳಿ ಹೂತಿದ್ದ.

ತಾನು ಮದುವೆಯಾಗಲು ವಿವಾಹಿತ ಮಹಿಳೆ ಆಕ್ಷೇಪಿಸಿದ ಕಾರಣ ಕೊಲೆ ಮಾಡಿದ್ದ. ಕೊಲೆ ಮಾಡಿ ಶವವನ್ನು ಹೂಳಲು ಬಾಲಿವುಡ್‌ನ ಅಜಯ್ ದೇವಗನ್ ಅಭಿನಯದ ‘ದೃಶ್ಯಂ ಚಿತ್ರದಿಂದ ಪ್ರೇರಾಪಿತನಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯನ್ನು ಕೊಲೆ ಮಾಡಿ ಆಕೆಯ ಶವವನ್ನು ಜಿಲ್ಲಾಧಿಕಾರಿ ಮನೆಯ ಮುಂದಿನ ಆಫೀಸರ್ಸ್ ಕ್ಲಬ್ ಕಾಂಪೌಂಡ್‌ನಲ್ಲಿ ವಿಮಲ್‌ ಸೋನಿ ಸಮಾಧಿ ಮಾಡಿದ್ದ. ‘ದೃಶ್ಯಂ’ ಸಿನಿಮಾದಿಂದ ಸ್ಫೂರ್ತಿ ಪಡೆದ ಆರೋಪಿ, ಶವವನ್ನು ಹೂಳಲು ಜಿಲ್ಲಾಧಿಕಾರಿ ನಿವಾಸದ ಬಳಿಯ ಜಾಗ ಆಯ್ಕೆ ಮಾಡಿಕೊಂಡಿದ್ದಾನೆ.

ಆದರೆ, ವಿಮಲ್ ಸೋನಿಯ ಕೃತ್ಯ ನಾಲ್ಕು ತಿಂಗಳುಗಳ ಬಳಿಕ ಬಯಲಾಗಿತ್ತು. ಪೊಲೀಸರು ಕಳೆದ ಶನಿವಾರ ಆರೋಪಿಯನ್ನು ಬಂಧಿಸಿದ್ದರು. 32 ವರ್ಷದ ಏಕ್ತಾ ಗುಪ್ತಾ ಅವರನ್ನು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ವಿಮಲ್ ಒಪ್ಪಿಕೊಂಡಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳ ಮೀಸಲಾತಿ ತೀರ್ಮಾನ: ಹೋರಾಟಕ್ಕೆ ಸಂದ ಜಯ, ಕಾಯಿಸದಿರಲಿ ಸರ್ಕಾರ

‘ಜೂನ್ 24ರಂದು ವಿಮಲ್, ಜಿಮ್‌ಗೆ ಬಂದಿದ್ದ ಏಕ್ತಾಳನ್ನು ತಮ್ಮ ಸಂಬಂಧದ ಬಗ್ಗೆ ಚರ್ಚಿಸುವ ಉದ್ದೇಶದಿಂದ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ವಿಮಲ್, ಏಕ್ತಾಳ ಕುತ್ತಿಗೆಗೆ ಬಲವಾಗಿ ಗುದ್ದಿದ ಕಾರಣ ಆಕೆ ಮೃತಪಟ್ಟಿದ್ದಾಳೆ’ ಎಂದು ಮಾಹಿತಿ ನೀಡಿದ್ದಾರೆ.

ಪತ್ನಿ ಮನೆಗೆ ಬಾರದಿರುವುದನ್ನು ಆತಂಕಗೊಂಡು ಪತಿ ರಾಹುಲ್ ಗುಪ್ತ ಎಂಬುವವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣದ ಜಾಡು ಹಿಡಿದ ಪೊಲೀಸರು ನಾಲ್ಕು ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದರು.

‘ದೃಶ್ಯಂ ಚಲನಚಿತ್ರದಿಂದ ಪ್ರೇರಿತನಾದ ವಿಮಲ್ ಮೃತ ದೇಹವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಹೂತುಹಾಕಿದರೆ ಯಾರಿಗೂ ಅನುಮಾನ ಬರುವುದಿಲ್ಲ. ಪತ್ತೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದು ಕಾಂಪೌಂಡ್ ಬಳಿ ಸಮಾಧಿ ಮಾಡಿರುವುದಾಗಿ ತಿಳಿಸಿದ್ದಾನೆ.

ಪೊಲೀಸರು ಪತ್ತೆಹಚ್ಚುವುದನ್ನು ತಪ್ಪಿಸಲು ಆತ ಈ ಪ್ರದೇಶದ ಸಮೀಪದಲ್ಲಿ ಮೊಬೈಲ್ ಫೋನ್ ಬಳಕೆಯನ್ನೂ ನಿಲ್ಲಿಸಿದ್ದ. ಆದರೂ ಪೊಲೀಸರು ಶವ ಪತ್ತೆಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಏಕ್ತಾಳನ್ನು ಕೊಲೆ ಮಾಡಿದ್ದಾನೆ ಎನ್ನಲಾದ ಸ್ಥಳವು ಜಿಲ್ಲಾಧಿಕಾರಿ ಅವರ ಕ್ಯಾಂಪ್ ಆಫೀಸ್‌ನಿಂದ ಕೆಲವು ಮೀಟರ್‌ಗಳಷ್ಟು ದೂರದಲ್ಲಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...