ಕೂದಲು ಕಳ್ಳಸಾಗಣೆ: ಪ್ರಕರಣದ ವಿಚಾರಣೆಗೆ ನಾಂಪಲ್ಲಿ ನ್ಯಾಯಾಲಯ ಸಮ್ಮತಿ

Date:

ಭಾರತದಿಂದ ಮ್ಯಾನ್ಮಾರ್‌ಗೆ ಮಾನವ ಕೂದಲನ್ನು ಅಕ್ರಮವಾಗಿ ಸಾಗಿಸಿದ್ದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಪ್ರಾಸಿಕ್ಯೂಷನ್‌ ದೂರನ್ನು ತೆಲಂಗಾಣದ ನಾಂಪಲ್ಲಿ ವಿಷೇಶ ನ್ಯಾಯಾಲಯ ಪರಿಗಣನೆಗೆ ತೆಗದುಕೊಂಡಿದೆ.

2022ರಲ್ಲಿ ‘ನಯ್ ಲಾ ಫ್ಯಾಮಿಲಿ ಎಕ್ಸ್‌ಪೋರ್ಟ್ಸ್’ ಮೂಲಕ ಮಿಜೋರಾಂ ನಿವಾಸಿಯೊಬ್ಬ ಸೇರಿದಂತೆ 16 ಮಂದಿ ಆರೋಪಿಗಳು ಕೂಲದನ್ನು ಕಳ್ಳ ಸಾಗಾಣಿಕೆ ಮಾಡಿದ್ದರು ಎಂದು ಇಡಿ ಆರೋಪಿಸಿದೆ. ಇಡಿ ದಾಖಲಿಸಿದ್ದ ದೂರನ್ನು ಇದೀಗ, ನ್ಯಾಯಾಲಯ ಪರಿಗಣಿಸಿದೆ.

ಹೈದರಾಬಾದ್‌ನಲ್ಲಿ ಅಕ್ರಮ ಹಣ ವರ್ಗಾವಣೆ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ, 11,793 ಕೋಟಿ ರೂ. ಮೌಲ್ಯದ ಮಾನವ ಕೂದಲು ಕಳ್ಳಸಾಗಣೆ ದಂಧೆಯನ್ನು ಇಡಿ ಪತ್ತೆಹಚ್ಚಿದೆ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೀನಾದ ಜನರನ್ನು ಕಾಡುತ್ತಿರುವ ಬೋಳು ಸಮಸ್ಯೆಯ ನಡುವೆ, ಹೈದರಾಬಾದ್‌ನಿಂದ ಕಳ್ಳಸಾಗಣೆ ಮೂಲಕ ಕೂದಲನ್ನು ಚೀನಾಕ್ಕೆ ಸಾಗಿಸಲಾಗಿದೆ. ಹಾಗೆಯೇ ಮ್ಯಾನ್ಮಾರ್, ಬಾಂಗ್ಲಾದೇಶ ಮತ್ತು ವಿಯೆಟ್ನಾಂನಂತಹ ಇತರ ದೇಶಗಳಿಗೆ ಹೈದರಾಬಾದ್ ವಿಮಾನ ನಿಲ್ದಾಣದಿಂದ ಮತ್ತು ಇತರ ಭೂ ಮಾರ್ಗಗಳ ಮೂಲಕ ಸಾಗಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಳ್ಳಸಾಗಣೆದಾರರು ಹವಾಲಾ ಜಾಲಗಳನ್ನು ಬಳಸಿಕೊಂಡು ಸರಕುಗಳ ವಿತ್ತೀಯ ವಹಿವಾಟು ನಡೆಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ನಕಲಿ ದಾಖಲೆಗಳ ಮೂಲಕ ಮಾನವ ಕೂದಲನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ‘ನಯ್ ಲಾ ಫ್ಯಾಮಿಲಿ ಎಕ್ಸ್‌ಪೋರ್ಟ್ಸ್’ ವಿರುದ್ಧ ಹೈದರಾಬಾದ್ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿ 2022ರ ಫೆಬ್ರವರಿಯಲ್ಲಿ ಇಡಿ ತನಿಖೆ ಆರಂಭಿಸಿತ್ತು.

ಚೀನಾದ ಕೂದಲು ಉದುರುವಿಕೆಯ ಸಮಸ್ಯೆ
ಚೀನಾದಲ್ಲಿ 251 ಮಿಲಿಯನ್ ಜನರು ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2020ರಲ್ಲಿ ವರದಿಯಾಗಿತ್ತು. ಅದರಲ್ಲಿ 88 ಮಿಲಿಯನ್ ಮಹಿಳೆಯರು ಇದ್ದಾರೆ. ಚೀನೀ ವ್ಯಕ್ತಿಗಳಲ್ಲಿ ಕಿರಿಯ ವಯಸ್ಸಿನಲ್ಲೇ ಕೂದಲು ಉದುರುವಿಕೆ ಸಮಸ್ಯೆ ಎದುರಾಗುತ್ತಿದೆ. ಅನೇಕರು, 21 ರಿಂದ 30 ವರ್ಷ ವಯಸ್ಸಿನಲ್ಲಿಯೇ ಈ ಸದಸ್ಯೆಗೆ ತುತ್ತಾಗುತ್ತಿದ್ದಾರೆ. ಹಿಂದಿನ ಪೀಳಿಗೆಗೆ ಹೋಲಿಸಿದರೆ ಗಣನೀಯ ಬದಲಾವಣೆಯಾಗಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...