ಕೆಲವರು ಜೈಲಿನಲ್ಲಿ, ಉಳಿದವರು ಬೇಲ್‌ನಲ್ಲಿ: ಇಂಡಿಯಾ ಒಕ್ಕೂಟದ ನಾಯಕರನ್ನು ಟೀಕಿಸಿದ ನಡ್ಡಾ

Date:

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಕೆಲವರು ಜೈಲಿನಲ್ಲಿದ್ದಾರೆ, ಇನ್ನುಳಿದವರು ಬೇಲ್‌ನಲ್ಲಿದ್ದಾರೆ (ಜಾಮೀನಿನಲ್ಲಿದ್ದಾರೆ) ಎಂದು ಇಂಡಿಯಾ ಒಕ್ಕೂಟದ ನಾಯಕರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಟೀಕಿಸಿದರು.

ರಾಜಸ್ಥಾನದ ಜಲಾವರ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ನಡ್ಡಾ ಅವರು, “ಇಂಡಿ (ಇಂಡಿಯಾ) ಒಕ್ಕೂಟವು ‘ಭ್ರಷ್ಟಾಚಾರ ಉಳಿಸಿ ಮೈತ್ರಿ’ ಆಗಿದೆ. ಈ ಒಕ್ಕೂಟದಲ್ಲಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಚಿವರುಗಳೆಲ್ಲರೂ ಒಂದೇ ಕುಟುಂಬದವರಾಗಿರುವ ಪಕ್ಷವಿದೆ. ಇದು ಕುಟುಂಬಗಳ ಪಕ್ಷ” ಎಂದು ಟಾಂಗ್ ನೀಡಿದರು.

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು “ಕಾಂಗ್ರೆಸ್ ಎಲ್ಲೆಡೆ ಹಗರಣಗಳನ್ನು ಮಾಡಿದೆ” ಎಂದು ಆರೋಪಿಸಿದ ಬಿಜೆಪಿ ಅಧ್ಯಕ್ಷರು, “ರಾಹುಲ್ ಗಾಂಧಿ ಜಾಮೀನಲ್ಲಿ ಹೊರಗಿರುವುದಲ್ಲವೇ?, ಸೋನಿಯಾ ಗಾಂಧಿ, ಚಿಂದಂಬರಂ, ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನಿನಲ್ಲಿ ಹೊರಗಿರುವುದಲ್ಲವೇ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ ಅಲ್ವೆ” ಎಂದು ಛೇಡಿಸಿದರು.

ಇನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷ ನಾಯಕರುಗಳನ್ನು ಬಂಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಡೆಯಲೆಂದೇ ಚುನಾವಣೆ ಸಮೀಪಿಸುತ್ತಿರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಕೇಜ್ರಿವಾಲ್ ಪರ ವಕೀಲ ಆರೋಪಿಸಿದ್ದಾರೆ. ಜರ್ಮನಿ, ಅಮೆರಿಕಾ, ವಿಶ್ವ ಸಂಸ್ಥೆಯು ಕೇಜ್ರಿವಾಲ್ ಬಂಧನದ ಬಳಿಕ “ನ್ಯಾಯಯುತ ತನಿಖೆ ನಡೆಯಲಿ” ಎಂದು ಹೇಳಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...