ಆಕ್ಷೇಪಾರ್ಹ ದೃಶ್ಯಗಳ ಕತ್ತರಿಗೆ ಒಪ್ಪಿಗೆ: ‘ಹಮಾರೆ ಬಾರಹ್’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ

Date:

ಚಿತ್ರ ನಿರ್ಮಾಣಕಾರರು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ ಸೂಚಿಸಿದ ನಂತರ ‘ಹಮಾರೆ ಬಾರಹ್‌’ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸಿನಿಮಾವು ಜೂನ್‌ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇಸ್ಲಾಂ ಮತ್ತು ಮುಸ್ಲಿಂ ಸಮುದಾಯದವರ ಬಗ್ಗೆ ನಕಾರಾತ್ಮಕವಾಗಿ ತೋರಿಸಲಾಗಿದೆ ಹಾಗೂ ಕುರಾನ್‌ಅನ್ನು ವಿಕೃತಗೊಳಿಸಲಾಗಿರುವ ಆಧಾರದ ಮೇಲೆ ‘ಹಾಮಾರೆ ಬಾರಹ್‌’ ಚಿತ್ರವನ್ನು ನಿಷೇಧಿಸಬೇಕೆಂದು ಕೋರಲಾಗಿದ್ದ ಮನವಿಯ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ.

ಬಿ ಪಿ ಕೊಲಾಬಾವಲ್ಲ ಹಾಗೂ ಫಿರ್‌ದೋಶ್‌ ಪೋನಿವಲ್ಲಾ ನೇತೃತ್ವದ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಎರಡೂ ಕಡೆಯ ಪಕ್ಷದವರು ಕೋರ್ಟ್‌ ನೀಡಿದ ಆಕ್ಷೇಪಾರ್ಹವಾದ ಸಂಭಾಷಣೆಗಳನ್ನು ತೆರವುಗೊಳಿಸುವುದು ಸೇರಿ ಪರ್ಯಾಯ ಸಲಹೆಗೆ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚುವರಿಯಾಗಿ 12 ಸೆಕೆಂಡ್‌ಗಳ ಕಾಲ ಹಕ್ಕು ನಿರಾಕರಣೆಯನ್ನು ಸಿನಿಮಾದಲ್ಲಿ ತೋರಿಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಚಿತ್ರ ನಿರ್ಮಾಣಕಾರರು ಅರ್ಜಿದಾರರು ಆಯ್ಕೆ ಮಾಡಿದ ಚಾರಿಟಿ ಸಂಸ್ಥೆಗೆ 5 ಲಕ್ಷ ರೂ. ಕಾನೂನು ವೆಚ್ಚವನ್ನು ಒದಗಿಸಬೇಕೆಂದು ತಿಳಿಸಲಾಗಿದೆ. ಕೇಂದ್ರೀಯ ಸಿನಿಮಾ ಪ್ರಮಾಣ ಪತ್ರ ಮಂಡಳಿಗೆ(ಸಿಬಿಎಫ್‌ಸಿ) ಜೂನ್‌ 20ರೊಳಗೆ ಮಾರ್ಪಾಡುಗಳೊಂದಿಗೆ ಮರು ಪ್ರಮಾಣಿಕರಿಸಬೇಕೆಂದು ಕೋರ್ಟ್ ಸೂಚಿಸಿದೆ.

ಸಿನಿಮಾ ಬಿಡುಗಡೆಗೆ ಈ ಮೊದಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್, ಬಾಂಬೆ ಹೈಕೋರ್ಟ್‌ಗೆ ಅರ್ಜಿ ವಿಲೇವಾರಿಯ ಹೊಣೆ ವಹಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...