ಮಕ್ಕಳಿಂದಲೇ ಕಿರುಕುಳ; ವೃದ್ಧ ದಂಪತಿ ಆತ್ಮಹತ್ಯೆ

Date:

ಇಳಿ ವಯಸ್ಸಿನಲ್ಲಿ ತಂದೆ-ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಮಗೆ ಕಿರುಕುಳ ನೀಡಿದ್ದು, ಬೇಸತ್ತ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನಲ್ಲಿ ನಡೆದಿದೆ. ನೀರಿನ ಟ್ಯಾಂಕ್‌ಗೆ ಬಿದ್ದು ದಂಪತಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಅವರ ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಅವರು ನಾಗೌರ್‌ನ ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ. ದಂಪತಿಗಳೂ ಕಾಣಿಸಿರಲಿಲ್ಲ. ಅನುಮಾನಗೊಂಡ ನೆರೆಹೊರೆಯವರು ವೃದ್ಧ ದಂಪತಿಯ ಮಗನಿಗೆ ಕರೆ ಮಾಡಿದ್ದಾರೆ. ಆತ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಹುಡುಕಾಟ ನಡೆಸಿದ್ದಾರೆ ಈ ವೇಳೆ, ಮನೆಯ ನೀರಿನ ಟ್ಯಾಂಕ್‌ನಲ್ಲಿ ದಂಪತಿಗಳ ಮೃತದೇಹಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿ, “ಆಸ್ತಿ ವಿಚಾರವಾಗಿ ತಮ್ಮ ಇಬ್ಬರು ಗಂಡು ಮಕ್ಕಳು ಮತ್ತು ಸೊಸೆಯಂದಿರುವ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ” ಎಂದು ದಂಪತಿಗಳು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...