ಹರಿಯಾಣ | ಸಹಾಯಕ ಅಡ್ವೊಕೇಟ್ ಜನರಲ್ ಹುದ್ದೆಗೆ ಅತ್ಯಾಚಾರ ಆರೋಪಿಯನ್ನು ನೇಮಿಸಿದ ಬಿಜೆಪಿ ಸರ್ಕಾರ

Date:

ಐಎಎಸ್‌ ಅಧಿಕಾರಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್‌ ಬರಾಲಾ ಅವರನ್ನು ಹರಿಯಾಣದ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ ಹರಿಯಾಣ ಸರ್ಕಾರ ನೇಮಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಎಎಜಿ ಹುದ್ದೆಗೆ ನೇಮಿಸಿದ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

2017ರಲ್ಲಿ ವಿಕಾಸ್ ಬರಾಲಾ ಮತ್ತು ಆಶಿಶ್ ಕುಮಾರ್ ವಿರುದ್ಧ ಐಎಎಸ್ ಅಧಿಕಾರಿ ವಿ.ಎಸ್ ಕುಂದು ಅವರ ಪುತ್ರಿ ವರ್ಣಿಕಾ ಕುಂದು ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಈ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿದ್ದರು. ವಿಕಾಸ್ ಮತ್ತು ಆಶಿಶ್‌ ವಿರುದ್ಧ ಐಪಿಸಿ ಸೆಕ್ಷನ್ 354 ಡಿ, 341, 365, 511 ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದ ಪೊಲೀಸರು, ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದರು. ಸುಮಾರು 5 ತಿಂಗಳ ಜೈಲಿನಲ್ಲಿದ್ದ ವಿಕಾಸ್‌, 2018ರ ಜನವರಿಯಲ್ಲಿ ಜಾಮೀನು ಪಡೆದು, ಹೊರಬಂದಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.

ಇದೀಗ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ವಿಕಾಸ್ ಬರಾಲಾ ಅವರನ್ನು ಎಎಪಿ ಹುದ್ದೆಗೆ ನೇಮಿಸಲಾಗಿದೆ. ಇತ್ತೀಚೆಗೆ, ಹರಿಯಾಣ ಸರ್ಕಾರವು ಸಹಾಯಕ ಅಡ್ವೊಕೇಟ್ ಜನರಲ್‌ಗಳು, ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು, ಹಿರಿಯ ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು ಹಾಗೂ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಹುದ್ದೆಗಳಿಗೆ 97 ಮಂದಿಯನ್ನು ನೇಮಿಸಿದೆ. ಅವರಲ್ಲಿ, ವಿಕಾಸ್‌ ಕೂಡ ಒಬ್ಬರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಅಚ್ಯುತಾನಂದನ್- ಕೇರಳ ರಾಜಕಾರಣದ ದಂತಕಥೆ

ವಿಕಾಸ್‌ ನೇಮಕದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಐಎಎಸ್‌ ಅಧಿಕಾರಿ ವಿ.ಎಸ್‌ ಕುಂದು, “ಈ ವಿಚಾರದಲ್ಲಿ ನಾನು ಅಥವಾ ನನ್ನ ಮಗಳು ಪ್ರತಿಕ್ರಿಯಿಸಲು ಬರುವುದಿಲ್ಲ. ಸರ್ಕಾರವು ಯಾವ ರೀತಿಯ ಜನರನ್ನು ನೇಮಿಸುತ್ತಾರೆ ಅಥವಾ ನೇಮಿಸುವುದಿಲ್ಲ ಅವರ ವಿವೇಚನೆಗೆ ಬಿಟ್ಟಿದ್ದು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ, ಇದು ದುರದೃಷ್ಟಕರ. ನಾವು ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದೇವೆ. ಆದರೆ, ಕಳೆದ 7 ವರ್ಷಗಳಿಂದ ಪ್ರಕರಣವು ತಾರ್ತಿಕ ಹಂತಕ್ಕೆ ಹೋಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಖಂಡಿಸಿದ್ದಾರೆ. ಅಡ್ವೊಕೇಟ್ ಜನರಲ್ ಕಚೇರಿಗೆ ಸಮರ್ಥ ಜನರನ್ನು ಮಾತ್ರವೇ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...