ಪಹಲ್ಗಾಮ್‌ನಲ್ಲಿ ಉಗ್ರರೊಂದಿಗೆ ಮಹಿಳೆಯರು ಹೋರಾಡಬೇಕಿತ್ತು: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

Date:

ಕೆಚ್ಚು ತೋರುವ ಸ್ಫೂರ್ತಿಯ ಕೊರತೆಯಿಂದಾಗಿ 26 ಮಂದಿ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ ಎಂದು ಹರಿಯಾಣದ ರಾಜ್ಯಸಭಾ ಸದಸ್ಯ ರಾಮಚಂದ್ರ ಜಾಂಗ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ ಯೋಜನೆಯಡಿ ಸೂಕ್ತ ತರಬೇತಿ ಪಡೆದಿದ್ದರೆ, ಸಾವಿನ ಸಂಖ್ಯೆ ಕಡಿಮೆಯಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

“ತಮ್ಮ ಗಂಡಂದಿರನ್ನು ದಾಳಿಯಲ್ಲಿ ಕಳೆದುಕೊಂಡ ಮಹಿಳೆಯರು ಸಾಹಸ ಮನೋಭಾವವನ್ನು ಪ್ರದರ್ಶಿಸಲಿಲ್ಲ. ಇದರಿಂದಾಗಿ ಗುಂಡಿನ ದಾಳಿಗೆ 26 ಮಂದಿ ಬಲಿಯಾದರು ಎಂದು ಬಿಜೆಪಿ ಸರ್ಕಾರದ ಅಹಲ್ಯಾಬಾಯಿ ಹೋಳ್ಕರ್ ತ್ರಿಶಮಾನ ಸ್ಮಾರಕ ಅಭಿಯಾನ ಸಮಾರಂಭದಲ್ಲಿ ಮಾತನಾಡುವ ವೇಳೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಪ್ರವಾಸಿಗರು ದೈನ್ಯತೆಯಿಂದ ಇದ್ದ ಕಾರಣ ಹತ್ಯೆಗೀಡಾದರು. ಪ್ರಧಾನಿಯವರ ಯೋಜನೆಯಡಿ ತರಬೇತಿ ಪಡೆದು ದಾಳಿಕೋರರ ಜತೆ ಸಂಘರ್ಷಕ್ಕೆ ಇಳಿದಿದ್ದರೆ, ಅಷ್ಟು ಸಂಖ್ಯೆಯಲ್ಲಿ ಸಾವು ಸಂಭವಿಸುತ್ತಿರಲಿಲ್ಲ. ಪ್ರವಾಸಿಗರು ಮೂಲ ಸಲಕರಣೆಗಳಾದ ಬಡಿಗೆಯನ್ನು ಹೊಂದಿ, ದಾಳಿಕೋರರ ವಿರುದ್ಧ ಹೋರಾಟ ನಡೆಸಿದ್ದರೆ,ಸಾವಿನ ಸಂಖ್ಯೆ ಐದರಿಂದ ಆರಷ್ಟೇ ಆಗುತ್ತಿತ್ತು. ಮೂವರು ಉಗ್ರರನ್ನು ಸಾಯಿಸಬಹುದಿತ್ತು ಎಂದರು.

ಜಾಂಗ್ರ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಕಟುವಾಗಿ ಟೀಕಿಸಿದ್ದು, ತನ್ನ ಪತಿಯನ್ನು ದಾಳಿಯಲ್ಲಿ ಕಳೆದುಕೊಂಡ ಮಹಿಳೆಗೆ ಮಾಡಿದ ಘೋರ ಅವಮಾನ ಇದಾಗಿದೆ ಎಂದು ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...