ಗೋ ಕಳ್ಳಸಾಗಣೆ ಆರೋಪ: ಹಿಂದು ಯುವಕನ ಬರ್ಬರ ಹತ್ಯೆ; ಕೃತ್ಯದಲ್ಲಿ ಗೋರಕ್ಷಕರೊಂದಿಗೆ ಪೊಲೀಸರೂ ಭಾಗಿ

Date:

ಹಸು ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ಯುವಕರನ್ನು ಗೋರಕ್ಷಕ ಪುಂಡರು ಅಮಾನುಷವಾಗಿ ಥಳಿಸಿದ್ದು, ಓರ್ವನನ್ನು ಕೊಂದಿರುವ ಹೃದಯವಿದ್ರಾವಕ ಘಟನೆ ಹರಿಯಾಣದ ಪಲ್ವಾಲ್‌ನಲ್ಲಿ ನಡೆದಿದೆ. ಯುವಕರ ವಾಹನವನ್ನು ಪೊಲೀಸರು ತಡೆದಿದ್ದು, ಬಳಿಕ ಯುಕರನ್ನು ಪೊಲೀಸರೇ ಗೋರಕ್ಷಕ ದುಷ್ಕರ್ಮಿಗಳ ಗುಂಪಿನ ವಶಕ್ಕೆ ನೀಡಿದ್ದಾರೆ ಎಂದು ಆರೋಪಿಲಾಗಿದೆ.

ಪಲ್ವಾಲ್‌ನಲ್ಲಿ ಇಬ್ಬರು ಯುವಕರು – ಬಾಲ್‌ ಕಿಶನ್ ಮತ್ತು ಸಂದೀಪ್ – ಹಸುಗಳನ್ನು ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದರು. ಈ ವೇಳೆ, ಅವರನ್ನು ಪೊಲೀಸರು ತಡೆದಿದ್ದಾರೆ. ಬಳಿಕ, ಯುವಕರನ್ನು ಗೋರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುತ್ತಿದ್ದ ದುಷ್ಕರ್ಮಿಗಳ ಗುಂಪಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಬ್ಬರನ್ನೂ ಅಮಾನುಷವಾಗಿ ಥಳಿಸಿದ ಹಿಂದುತ್ವವಾದಿ ಗೋರಕ್ಷಕ ದುಷ್ಕರ್ಮಿಗಳು, ಗಾಯಾಳುಗಳನ್ನು ಗುರುಗ್ರಾಮದ ಕಾಲುವೆಗೆ ಎಸೆದಿದ್ದಾರೆ. ಸಂದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಾಲ್‌ ಕಿಶನ್‌ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ವಿವರಿಸಿರುವ ಬಾಲ್‌ ಕಿಶನ್, “ಫೆಬ್ರವರಿ 22ರಂದು ಘಟನೆ ನಡೆದಿದೆ. ರಾಜಸ್ಥಾನದ ಗಂಗಾನಗರದಿಂದ ಉತ್ತರ ಪ್ರದೇಶದ ಲಕ್ನೋಗೆ ಪಿಕಪ್ ವ್ಯಾನ್‌ನಲ್ಲಿ ಎರಡು ಹಸುಗಳನ್ನು ಸಾಗಿಸುತ್ತಿದ್ದೆವು. ಈ ವೇಳೆ, ದಾರಿ ತಪ್ಪಿ ಬೇರೊಂದು ರಸ್ತೆಯಲ್ಲಿ ಸಾಗಿದ್ದೆವು. ನಮ್ಮನ್ನು ಪೊಲೀಸ್ ವಾಹನವೊಂದು ತಡೆದು ನಿಲ್ಲಿಸಿತು. ಬಳಿಕ, ಗೋರಕ್ಷಕರೆಂದು ಕರೆಯಲ್ಪಡುವ ಗುಂಪಿಗೆ ಒಪ್ಪಿಸಿತು. ಗೋರಕ್ಷಕರು ನಮ್ಮನ್ನು ಎಳೆದೊಯ್ದು, ಅಮಾನುಷವಾಗಿ ಥಳಿಸಿದರು. ನಮ್ಮನ್ನು ಕೊಲ್ಲಲೆಂದು ಸಿಲಾನಿ ಗ್ರಾಮದ ಬಳಿಯ ಗುರುಗ್ರಾಮ ಕಾಲುವೆಗೆ ಎಸೆದರು. ನೀರಿನಲ್ಲಿ ಮುಳುಗಿ ಸಂದೀಪ್ ಸಾವನ್ನಪ್ಪಿದ್ದಾರೆ. ನಾನು ಬದುಕುಳಿದು ಕಾಲುವೆಯಿಂದ ಹೊರಬಂದೆ” ಎಂದು ಹೇಳಿದ್ದಾರೆ.

“ಸೋಹ್ನಾ ಪೊಲೀಸ್ ಠಾಣೆಗೆ ತೆರಳಿ, ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನನ್ನನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು” ಎಂದು ಹೇಳಿದ್ದಾರೆ.

ಪೊಲೀಸರು ಸಂದೀಪ್ ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ಪರಾಗಿಯಾಗಿದ್ದು, ಅವರ ಸುಳಿವು ಕೊಟ್ಟವರಿಗೆ ತಲಾ 5,000 ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...