ಹರಿಯಾಣ | ಮನೆ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಆಕ್ಷೇಪ; ವೃದ್ದನಿಗೆ ಥಳಿಸಿ ಕೊಲೆ

Date:

ತಮ್ಮ ನಿವಾಸದ ಎದುರು ಪಟಾಕಿ ಸಿಡಿಸುವುದನ್ನು ವಿರೋಧ ಮಾಡಿದ್ದಕ್ಕೆ ವೃದ್ದರೊಬ್ಬರಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ವಿನೋದ್ ಪೊಲೀಸರಿಗೆ ದೂರು ನೀಡಿದ್ದಾರೆ.

“ರಾಜು, ಧೀರಜ್ ಮತ್ತು ನಂದು ಎಂಬ ಮೂವರು ಯುವಕರು ಗುರುವಾರ ಸಂಜೆ ಫರಿದಾಬಾದ್‌ನ ಸೆಕ್ಟರ್ 18 ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ನಮ್ಮ ನಿವಾಸದ ಮುಂದೆ ಪಟಾಕಿ ಸಿಡಿಸುತ್ತಿದ್ದರು. ಇದಕ್ಕೆ ನನ್ನ ತಂದೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿ ನಡೆದಿದೆ” ಎಂದು ವಿನೋದ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಗ್ವಾದ ನಡೆದಾಗ ನಾನು ಮಧ್ಯಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದೆ. ಆದರೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೂವರು ವ್ಯಕ್ತಿಗಳು ಹಿಂತಿರುಗಿ ಮತ್ತೆ ನಮ್ಮ ಮನೆಯ ಮುಂದೆ ಪಟಾಕಿ ಸಿಡಿಸಲು ಪ್ರಾರಂಭಿಸಿದರು” ಎಂದು ದೂರಿನಲ್ಲಿ ವಿನೋದ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ವಿನೋದ್‌ನ ತಂದೆ ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮೂವರು ಆರೋಪಿಗಳು ವೃದ್ದ ವ್ಯಕ್ತಿಗೆ ಥಳಿಸಿದ್ದಾರೆ. ವಿನೋದ್ ಮತ್ತು ಅವರ ಪತ್ನಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಮೂವರು ಸೇರಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೂರುದಾರರ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...