ಹರಿಯಾಣ ವಿಧಾನಸಭಾ ಚುನಾವಣೆ | ‘ಟ್ರೆಂಡ್‌ ಅಪ್‌ಡೇಟ್’ ವಿಳಂಬ; ದೂರು ನೀಡಿದ ಕಾಂಗ್ರೆಸ್

Date:

ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನೂತನ ಅಪ್‌ಡೇಟ್‌ಗಳನ್ನು ಅಪ್‌ಲೋಡ್ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಹರಿಯಾಣದಲ್ಲಿ ಆರಂಭಿಕವಾಗಿ ಹಲವು ಬಿಜೆಪಿಯು ಮುನ್ನಡೆ ಸಾಧಿಸಿದೆ. ಇದಾದ ಬೆನ್ನಲ್ಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ‘ಟ್ರೆಂಡ್‌ ಅಪ್‌ಡೇಟ್’ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ದೂರು ಪ್ರತಿಯನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, “ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಟ್ರೆಂಡ್‌ಗಳನ್ನು ಅಪ್‌ಡೇಟ್ ಮಾಡುವಲ್ಲಿ ವಿಳಂಬದ ಬಗ್ಗೆ ನಾನು ಪತ್ರ ಬರೆದಿದ್ದೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈರಾಮ್ ರಮೇಶ್, “ಮುಂದಿನ 5-7 ನಿಮಿಷಗಳಲ್ಲಿ ನಾವು ದೂರು ಸಲ್ಲಿಸುತ್ತೇವೆ. ಚುನಾವಣಾ ಆಯೋಗವು ನಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತದೆ ಎಂದು ನಾವು ಭಾವಿಸುತ್ತೇವೆ. 10-11ರ ಸುತ್ತಿನ ಮತ ಎಣಿಕೆ ಈಗಾಗಲೇ ನಡೆದಿದೆ. ಆದರೆ 4-5 ಸುತ್ತುಗಳ ಅಪ್‌ಡೇಟ್‌ ಅನ್ನು ಮಾತ್ರ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಹಾಕಿದೆ. ಇದು ಆಡಳಿತದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ” ಎಂದು ದೂರಿದ್ದಾರೆ.

ಚುನಾವಣಾ ಆಯೋಗದ ಅಂಕಿಅಂಶಗಳು ಮತ್ತು ಮಾಧ್ಯಮದ ಅಂಕಿಅಂಶಗಳಿಗೂ ಹೊಂದಾಣಿಕೆಯಿಲ್ಲ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

“ಚುನಾವಣಾ ಆಯೋಗದ ಅಂಕಿಅಂಶಗಳು ಹಿಂದುಳಿದಿವೆ. ಅವರು ಇನ್ನೂ ನಾಲ್ಕನೇ ಅಥವಾ ಐದನೇ ಸುತ್ತಿನ ಡೇಟಾ ಅಪ್‌ಲೋಡ್ ಮಾಡುತ್ತಿದ್ದಾರೆ. ಆದರೆ ನಿಜವಾಗಿ 11ನೇ ಸುತ್ತಿನ ಎಣಿಕೆಯಾಗಿದೆ. ನಮ್ಮ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ವರದಿ ಪ್ರಕಾರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ನಡುವೆ ಚುನಾವಣಾ ಫಲಿತಾಂಶ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ತಡವಾಗಿ ಅಪ್‌ಲೋಡ್ ಆಗುತ್ತಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ಯಾವುದೇ ಏಜೆಂಟ್‌ಗಳು ಅಥವಾ ಅಭ್ಯರ್ಥಿಗಳು ಈ ಆರೋಪ ಮಾಡಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...