ಹರಿಯಾಣ ಚುನಾವಣೆ | ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌ ಜಯಭೇರಿ

Date:

ಸ್ವತಂತ್ರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾರಾ ಮತ್ತು ಹಾಲಿ ಬಿಜೆಪಿ ಶಾಸಕ ಕಮಲ್ ಗುಪ್ತಾ ಅವರನ್ನು ಸಾವಿತ್ರಿ ಜಿಂದಾಲ್ ಸೋಲಿಸಿದ್ದಾರೆ. ತನ್ನ ಗೆಲುವಿನ ನಂತರ ಸಾವಿತ್ರಿ ಜಿಂದಾಲ್ ಹಿಸಾರ್‌ನ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಾವಿತ್ರಿ ಜಿಂದಾಲ್, “ನೀವೆಲ್ಲರೂ ಈ ಚುನಾವಣೆಯಲ್ಲಿ ಹೋರಾಡಿದ್ದೀರಿ, ಈ ಗೆಲುವು ನಿಮ್ಮದೇ ಗೆಲುವು. ಈ ವಿಜಯಕ್ಕಾಗಿ ನನ್ನ ಹಿಸಾರ್ ಕುಟುಂಬಕ್ಕೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | 40 ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

74 ವರ್ಷದ ಸಾವಿತ್ರಿ ಜಿಂದಾಲ್ ಅವರು ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಅವರ ತಾಯಿ ಮತ್ತು ಕೈಗಾರಿಕೋದ್ಯಮಿ ದಿವಂಗತ ಓ ಪಿ ಜಿಂದಾಲ್ ಅವರ ಪತ್ನಿಯಾಗಿದ್ದಾರೆ. ಅಫಿಡವಿಟ್ ಪ್ರಕಾರ ಸಾವಿತ್ರಿ ಜಿಂದಾಲ್ ಅವರು 80 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದಂತೆ 270 ಕೋಟಿ ರೂಪಾಯಿ ಆಸ್ತಿಯನ್ನು ಹೊಂದಿದ್ದಾರೆ.

ಫೋರ್ಬ್ಸ್ ಇಂಡಿಯಾ ಪ್ರಕಾರ, ಸಾವಿತ್ರಿ ಜಿಂದಾಲ್ ಮತ್ತು ಕುಟುಂಬದ ಒಟ್ಟು ಆಸ್ತಿ 42.2 ಬಿಲಿಯನ್ ಡಾಲರ್ ಆಗಿದೆ. ಫೋರ್ಬ್ಸ್ ಇಂಡಿಯಾ ಸಾವಿತ್ರಿ ಜಿಂದಾಲ್ ಅವರ ವೈಯಕ್ತಿಕ ನಿವ್ವಳ ಮೌಲ್ಯವನ್ನು 3.65 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಿದೆ.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು: ಅರವಿಂದ್ ಕೇಜ್ರಿವಾಲ್

ವರದಿಗಳ ಪ್ರಕಾರ 29.1 ಬಿಲಿಯನ್ ಡಾಲರ್ ನಿವ್ವಳ ಆದಾಯವನ್ನು ಹೊಂದಿರುವ ಸಾವಿತ್ರಿ ಜಿಂದಾಲ್ ಈ ವರ್ಷ ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಸಾವಿತ್ರಿ ಜಿಂದಾಲ್ ಹಿಸಾರ್ ಕ್ಷೇತ್ರದಲ್ಲಿ ಈ ಹಿಂದೆ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2005ರಲ್ಲಿ ಹಿಸಾರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಅದಾದ ಬಳಿಕ 2009ರಲ್ಲಿ ಇದೇ ಕ್ಷೇತ್ರದಲ್ಲಿ ಮರು ಆಯ್ಕೆಯಾಗಿದ್ದಾರೆ, 2013ರಲ್ಲಿ ಸಚಿವರಾದರು.

ಮಾರ್ಚ್‌ನಲ್ಲಿ ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರಿದ್ದರು. ಬಿಜೆಪಿಯು ಹಿಸಾರ್ ಕ್ಷೇತ್ರದಲ್ಲಿ ಟಿಕೆಟ್ ನೀಡುವ ನಿರೀಕ್ಷೆಯನ್ನು ಸಾವಿತ್ರಿ ಹೊಂದಿದ್ದರು. ಆದರೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...