ಮುಸ್ಲಿಮನೆಂದು ಭಾವಿಸಿ ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತಾಪ ಪಡುತ್ತೇನೆ: ಕೊಲೆ ಆರೋಪಿ

Date:

ಹಸು ಕಳ್ಳಸಾಗಾಣಿಕೆ ಮಾಡುತ್ತಿದ್ದಾನೆಂಬ ಶಂಕೆ ಮೇಲೆ ಹರಿಯಾಣದ ಫರಿದಾಬಾದ್‌ನಲ್ಲಿ ಆರ್ಯನ್ ಮಿಶ್ರಾ ಎಂಬಾತನನ್ನು ಗೋರಕ್ಷಣೆಯ ಹೆಸರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಹತ್ಯೆಗೈದಿತ್ತು. ಇದೀಗ, ಕೊಲೆ ಆರೋಪಿ ಹೇಳಿದ್ದಾನೆಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹತ್ಯೆಗೀಡಾದ ಆರ್ಯನ್ ಮಿಶ್ರಾ ಅವರ ತಂದೆಯ ಬಳಿ ಕೊಲೆ ಆರೋಪಿ ಮೋನು ಮಾನೇಸರ್, ‘ಮುಸ್ಲಿಮನೆಂದು ಭಾವಿಸಿ ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ವಾತಾಪ ಪಡುತ್ತೇನೆ’ ಎಂದಿದ್ದಾನೆ ಎಂದು ವರದಿಯಾಗಿದೆ.

ಕಳೆದ ತಿಂಗಳು (ಆಗಸ್ಟ್) 24ರ ಮುಂಜಾನೆ ಹರಿಯಾಣದ ಫರಿದಾಬಾದ್‌ನ ಗಢಪುರಿ ಟೋಲ್ ಬಳಿ ದುಷ್ಕರ್ಮಿಗಳ ಗುಂಪು 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆರ್ಯನ್ ಮಿಶ್ರಾನನ್ನು 30 ಕಿ.ಮೀ ಬೆನ್ನಟ್ಟಿ, ಗುಂಡಿಕ್ಕಿ ಹತ್ಯೆಗೈದಿತ್ತು. ಹಸು ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾನೆಂಬ ಶಂಕೆಯ ಮೇಲೆ ಆತನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಮೋನು, ಸೌರಭ್, ಅನಿಲ್, ವರುಣ್, ಕೃಷ್ಣ ಮತ್ತು ಆದೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ, ಆರ್ಯನ್ ಮಿಶ್ರಾ ಅವರ ತಂದೆ ಸಿಯಾನಂದ್ ಮಿಶ್ರಾ ಅವರ ಹೇಳಿಕೆ ವೈರಲ್ ಆಗುತ್ತಿದ್ದು, “ಕೊಲೆ ಆರೋಪಿ ಮೋನು ಮಾನೇಸರ್‌ನನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ತನ್ನ ಮಗನನ್ನು ಮುಸ್ಲಿಂ ಹಸು ಕಳ್ಳಸಾಗಣೆದಾರನೆಂದು ತಪ್ಪಾಗಿ ಭಾವಿಸಿ ಹತ್ಯೆ ಮಾಡಿದ್ದಾಗಿ ಮೋನು ಹೇಳಿದ್ದಾನೆ” ಎಂದು ಮಿಶ್ರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಮಗ ಮುಸ್ಲಿಮನೆಂದು ಅವರು ಭಾವಿಸಿದ್ದರು. ಮುಸ್ಲಿಮನೆಂದು ಭಾವಿಸಿ ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆಂದು ಮೋನು ಹೇಳಿದ್ದಾನೆ. ನನ್ನ ಪಾದಗಳನ್ನು ಮುಟ್ಟಿ ಕ್ಷಮೆ ಯಾಚಿಸಿದ್ದಾನೆ” ಎಂದು ಸಿಯಾನಂದ್ ಮಿಶ್ರಾ ಹೇಳಿದ್ದಾರೆ.

“ಆರೋಪಿಗಳ ಬಂಧನವು ನಿಟ್ಟುಸಿರು ಬಿಡುವಂತೆ ಮಾಡಿದೆ. ಆದರೆ, ನನಗೆ ಕೆಲವು ಪ್ರಶ್ನೆಗಳು ಕಾಡುತ್ತಿವೆ. ಅಂದು ಕಾರಿನಲ್ಲಿ ನನ್ನ ಮಗನೊಂದಿಗೆ ಇನ್ನೂ ಹಲವರಿದ್ದರು. ಆದರೆ, ಅವರು ನನ್ನ ಮಗನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉಳಿದ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಈ ಬಗ್ಗೆ ಗಂಭೀರ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...