ಪೈಶಾಚಿಕ ಕೃತ್ಯ | ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ

Date:

ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಯ ICUನಲ್ಲಿ ವೆಂಟಿಲೇಟರ್‌ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಪೈಶಾಚಿಕ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಗುರುಗ್ರಾಮ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಕಾಮುಕ ಆರೋಪಿಯನ್ನು ಪತ್ತೆ ಮಾಡಲು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 5ರಂದು, 46 ವರ್ಷದ ಗಗನಸಖಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿದ್ದಾಗ ಅಸ್ಥಸ್ಥಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿದ್ದರು.
ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕ ಆಸ್ಪತ್ರೆಯಲ್ಲಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತನ್ನ ಪತಿಯ ಬಳಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 6ರಂದು ಆಸ್ಪತ್ರೆಯ ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು‌ ಮಹಿಳೆ ಹೇಳಿಕೊಂಡಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನಯ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ‌ ಕೊಲೆ ಮಾಡಲಾಗಿತ್ತು.ಆರೋಪಿಯ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದಾಗ್ಯೂ, ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಸಾರ್ವಜನಿಕ ಆಕ್ರೋಶವನ್ನು ತಣಿಸಲು ಆರೋಪಿಯನ್ನು ಕೊಲ್ಲಕಾಗಿದೆ ಎಂಬ ಆರೋಪ-ಅಭಿಪ್ರಾಯಗಳು ಕೇಳಿ ಬಂದಿವೆ. ಸದ್ಯ, ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...