ಹರಿಯಾಣ ವಿವಿ | ಮಹಿಳಾ ಸಿಬ್ಬಂದಿಗಳ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಅಧಿಕಾರಿಗಳು

Date:

ಮಹಿಳಾ ಸಿಬ್ಬಂದಿಗಳು ತಮ್ಮ ‘ಮುಟ್ಟು’ ಸಾಬೀತು ಪಡಿಸಲು, ತಾವು ಧರಿಸಿರುವ ಸ್ಯಾನಿಟರಿ ಪ್ಯಾಡ್‌ನ ಫೋಟೋ ತೆಗೆದು, ತಂದು ತೋರಿಸುವಂತೆ ಕೇಳಲಾಗಿರುವ ಅಮಾನವೀಯ, ಆಘಾತಕಾರಿ ಘಟನೆ ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವಿಶ್ವವಿದ್ಯಾಲಯದಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಸ್ಯಾನಿಟರಿ ಪ್ಯಾಡ್‌ಗಳ ಛಾಯಚಿತ್ರ ತೆಗೆಯುವಂತೆ ಅವರ ಮೇಲ್ವಿಚಾರಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ.

ಅಕ್ಟೋಬರ್ 26 ರಂದು ಕ್ಯಾಂಪಸ್‌ನಲ್ಲಿ ಕೆಲ ಮಹಿಳೆಯರು ತಡವಾಗಿ ಕೆಲಸಕ್ಕೆ ಬಂದಿದ್ದರು. ಅವರನ್ನು ಮೇಲ್ವಿಚಾರಕರಾದ ವಿನೋದ್ ಮತ್ತು ಜೀತೇಂದ್ರ ನಿಂದಿಸಲಾರಂಭಿಸಿದ್ದರು. ಈ ವೇಳೆ, ಅವರು ತಮ್ಮ ಋತುಚಕ್ರದಲ್ಲಿದ್ದಾರೆ ಮತ್ತು ಸುಸ್ತಾಗಿದ್ದಾರೆಂದು ಇತರ ಸಿಬ್ಬಂದಿಗಳು ಮೇಲ್ವಿಚಾರಕರಿಗೆ ತಿಳಿಸಿದ್ದಾರೆ. ಆದರೆ, ಅವರ ಮಾತನ್ನು ನಂಬದ ವಿನೋದ್ ಮತ್ತು ಜೀತೇಂದ್ರ, ‘ವಾಶ್‌ರೂಮ್‌ಗೆ ಹೋಗಿ, ತಮ್ಮ ಸ್ಯಾನಿಟರ್ ಪ್ಯಾಡ್‌ನ ಚಿತ್ರ ತೆಗೆದು, ತಮ್ಮ ಮುಟ್ಟನ್ನು ಸಾಬೀತುಪಡಿಸಿ’ ಎಂದು ಸೂಚಿಸಿದ್ದಾರೆ. ಅದನ್ನು ಪರಿಶೀಲಿಸುವಂತೆ ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ನಿರ್ದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಟ್ಟನ್ನು ದೃಢೀಕರಿಸಲು ಖಾಸಗಿ ಭಾಗಗಳ ಫೋಟೋಗಳನ್ನು ಪುರಾವೆಯಾಗಿ ಕ್ಲಿಕ್ಕಿಸಬೇಕೆಂದು ಮೇಲ್ವಿಚಾರಕರು ಒತ್ತಾಯಿಸಿದರು. ನಮ್ಮಲ್ಲಿ ಇಬ್ಬರು ಆ ಸೂಚನೆಗಳನ್ನು ಪಾಲಿಸಲು ನಿರಾಕರಿಸಿದಾಗ, ನಮ್ಮನ್ನು ಮೇಲ್ವಿಚಾರಕರು ನಿಂದಿಸಿದರು. ವಜಾಗೊಳಿಸುವುದಾಗಿ ಬೆದರಿಕೆ ಹಾಕಿದರು” ಎಂದು ಸಂತ್ರಸ್ತ ಮಹಿಳೆಯರು ದೂರಿರುವುದಾಗಿ ವರದಿಯಾಗಿದೆ.

ಘಟನೆಯ ಬಗ್ಗೆ ತಿಳಿದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಗಳು ಮತ್ತು ಉಳಿದ ಮಹಿಳಾ ಸಿಬ್ಬಂದಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ವಾರ್ಸಿಟಿ ರಿಜಿಸ್ಟ್ರಾರ್ ಕೃಷ್ಣನ್ ಕಾಂತ್, “ಘಟನೆ ಬಗ್ಗೆ ಆಂತರಿಕ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಬಿಡಲಾಗುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಇಬ್ಬರು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪಿಜಿಐಎಂಎಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರೋಷನ್ ಲಾಲ್ ತಿಳಿಸಿದ್ದಾರೆ.

“ಕೆಲಸದ ಸ್ಥಳದಲ್ಲಿ ಅಭದ್ರತೆ ಉಂಟುಮಾಡುವ ಯಾವುದೇ ಘಟನೆಯನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಸುರಕ್ಷತ, ಗೌರವ ಹಾಗೂ ಸೂಕ್ಷ್ಮತೆಯುಳ್ಳ ಕೆಲಸದ ವಾತಾವರಣವನ್ನು ಒದಗಿಸುವು ನಮ್ಮ ಆದ್ಯತೆಯಾಗಿದೆ. ಯಾವುದೇ ರೀತಿಯ ಅನುಚಿತ ನಡವಳಿಕೆ ಅಥವಾ ದುಷ್ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಿಶ್ವವಿದ್ಯಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...