ಹರಿಯಾಣ | ಕುಸ್ತಿ ಸಂಘದಿಂದ ದೆಹಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರ ಅಮಾನತು

Date:

  • ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್‌ ಕಾರ್ಯದರ್ಶಿಗಳ ಅಮಾನತು
  • ಬ್ರಿಜ್‌ ಭೂಷಣ್‌ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು

ಹರಿಯಾಣ ಹವ್ಯಾಸಿ ಕುಸ್ತಿ ಸಂಘ (ಎಚ್‌ಎಡಬ್ಲ್ಯುಎ) ತನಗೆ ಸಂಯೋಜಿತ ಮೂರು ಜಿಲ್ಲಾ ಘಟಕಗಳ ಕಾರ್ಯದರ್ಶಿಗಳನ್ನು ಮಂಗಳವಾರ (ಮೇ 9) ಅಮಾನತು ಮಾಡಿದೆ.

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಮಹಿಳೆ ಹಾಗೂ ಪುರುಷ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕುಸ್ತಿ ಸಂಘ ಹೇಳಿದೆ.

ಜಜ್ಜರ್‌ನ ವೀರೇಂದ್ರ ಸಿಂಗ್ ದಲಾಲ್, ಹಿಸಾರ್‌ನ ಸಂಜಯ್ ಸಿಂಗ್ ಮಲಿಕ್ ಮತ್ತು ಮೇವಾತ್‌ನ ಜೈ ಭಗವಾನ್ ರನ್ನು ಅಮಾನತುಗೊಳಿಸಿ ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್ ಪತ್ರವೊಂದನ್ನು ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ರಾಜ್ಯದ ಕುಸ್ತಿ ಸಂಘದ ಕಾರ್ಯದರ್ಶಿಗಳ ಭಾಗವಹಿಸುವಿಕೆಯನ್ನು ಅನೈತಿಕ ಎಂದು ರೋಹ್ತಾಶ್‌ ಸಿಂಗ್‌ ಕರೆದಿದ್ದಾರೆ.

ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್‌ ಮಾತನಾಡಿ, “ಮೂವರು ಕಾರ್ಯದರ್ಶಿಗಳು ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದು ಸಂಪೂರ್ಣ ಅನೈತಿಕ ಹಾಗೂ ಡಬ್ಲ್ಯುಎಫ್‌ಐ ಮತ್ತು ಎಚ್‌ಎಡಬ್ಲ್ಯುಎ ಸಂಸ್ಥೆಗಳ ಉದ್ದೇಶ, ನಿಯಮ ಹಾಗೂ ನಿಬಂಧನೆಗಳಿಗೆ ವಿರುದ್ಧವಾದುದು” ಎಂದು ಹೇಳಿದರು.

ರೋಹ್ತಾಶ್‌ ಅವರ ನಿರ್ಧಾರ ರಾಜ್ಯ ಕುಸ್ತಿ ಸಂಘ ಹಾಗೂ ಭಾರತದ ಕುಸ್ತಿ ಒಕ್ಕೂಟದ ನಡುವೆ ಭಿನ್ನಾಭಿಪ್ರಾಯ ಉಂಟಾಗಿರುವುದು ಬಹಿರಂಗವಾಗಿದೆ. ಕುಸ್ತಿ ಸಂಘದ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಡಬ್ಲ್ಯುಎಫ್‌ಐನ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಹೇಳಿದ್ದಾರೆ.

ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಅವರು ಅಧಿಕಾರಿಗಳನ್ನು ಅಮಾನತು ಮಾಡುವ ಅಧಿಕಾರ ಹೊಂದಿಲ್ಲ ಎಂದು ರಾಕೇಶ್‌ ತಿಳಿಸಿದ್ದಾರೆ.

ಬ್ರಿಜ್ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಏಪ್ರಿಲ್‌ 23 ರಿಂದ ಮಹಿಳೆ ಹಾಗೂ ಪುರುಷ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೋಟ್‌ ದುರಂತಗಳಲ್ಲಿ 200ಕ್ಕೂ ಅಧಿಕ ಮಂದಿ ಬಲಿ; ಪಾಠ ಕಲಿಯದ ಕೇರಳ!

ಬ್ರಿಜ್‌ ಭೂಷಣ್‌ ಅವರು ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ದೆಹಲಿ ಪೊಲೀಸರು ಏಪ್ರಿಲ್‌ 28 ರಂದು ಬ್ರಿಜ್‌ ಭೂಷಣ್‌ ಅವರ ವಿರುದ್ಧ ಎರಡು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...