ಹಾಥರಸ್ ಕಾಲ್ತುಳಿತ | ದೆಹಲಿಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಬಂಧನ

Date:

ಜುಲೈ 2ರಂದು ಹಾಥರಸ್‌ನಲ್ಲಿ ನಡೆದ ಕಾಲ್ತುಳಿತ ದುರಂತದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳವಾರ ನಡೆದ ದುರಂತ ಘಟನೆಯಲ್ಲಿ 121 ಜನರು ಸಾವನ್ನಪ್ಪಿದ್ದರು. ಘಟನೆಯ ಬಳಿಕ, ಆರೋಪಿ ಮಧುಕರ್ ದೆಹಲಿಗೆ ಪರಾರಿಯಾಗಿದ್ದ. ಆತ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಪೊಲೀಸರ ಎದುರು ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಹಾಥರಸ್‌ನ ಸಿಕಂದರಾ ರಾವ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ ಏಕೈಕ ಆರೋಪಿ ಮಧುಕರ್. ಆತನನ್ನು ದೆಹಲಿಯ ನಜಾಫ್‌ಗಢ ಪ್ರದೇಶದಲ್ಲಿ ಹಾಥರಸ್ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಬಂಧಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಕಾಲ್ತುಳಿತ ಸಂಭವಿಸಿದ ‘ಸತ್ಸಂಗ’ದ ‘ಮುಖ್ಯ ಸಂಘಟಕ’ ಮಧುಕರ್‌ನ ಬಂಧನವನ್ನು ಪೊಲೀಸರು ಇನ್ನೂ ಅಧಿಕೃತವಾಗಿ ಘೋಷಿಸಬೇಕಾಗಿದೆ.

“ಹಾಥರಸ್‌ ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿ ಮುಖ್ಯ ಸಂಘಟಕ ಎಂದು ಉಲ್ಲೇಖಿಸಲಾಗಿರುವ ದೇವಪ್ರಕಾಶ್ ಮಧುಕರ್ ಅವರು ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಉ. ಹೀಗಾಗಿ, ದೆಹಲಿಯ ಪೊಲೀಸರು, ಎಸ್‌ಐಟಿ ಮತ್ತು ಎಸ್‌ಟಿಎಫ್‌ಗೆ ಕರೆ ಮಾಡಿ ಅವರು ಶರಣಾಗಿದ್ದಾರೆ” ಎಂದು ಮಧುಕರ್ ಪರ ವಕೀಲ ಎ.ಪಿ ಸಿಂಗ್ ಹೇಳಿದ್ದಾರೆ.

“ನಾವು ಯಾವುದೇ ತಪ್ಪು ಮಾಡದ ಕಾರಣ ನಾವು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ. ಅವರ ಅಪರಾಧವೇನು? ಅವರು ಎಂಜಿನಿಯರ್ ಮತ್ತು ಹೃದ್ರೋಗಿಯಾಗಿದ್ದಾರೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದ್ದರಿಂದ ಅವರು ತನಿಖೆಗೆ ಸಹಕರಿಸಲು ಶರಣಾಗಿದ್ದಾರೆ:” ಎಂದು ವಕೀಲರು ಹೇಳಿದ್ದಾರೆ.

ಮಧುಕರ್ ಬಂಧನಕ್ಕಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಮಂಗಳವಾರ ನಡೆದ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಅವರ ‘ಸತ್ಸಂಗ’ದ ಸಂಘಟನಾ ಸಮಿತಿಯ ಸದಸ್ಯರಾದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ ಆರು ಮಂದಿಯನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಜುಲೈ 2ರಂದು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 105, 110, 238 126(2) ಹಾಗೂ 223 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...