ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

Date:

ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, “ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ತನ್ನದೇ ಸತ್ಸಂಗದ ಬಳಿಕ ನೂರಾರು ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಭೋಲೆ ಬಾಬಾ, ಈ ಘಟನೆ ಬಳಿಕ ತಾನು ಆಳವಾದ ಖಿನ್ನತೆಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

“ಏನು ನಡೆಯಬೇಕೋ ಅದನ್ನು ತಪ್ಪಿಸಲು ಯಾರಿಂದಲೂ ಕೂಡಾ ಸಾಧ್ಯವಿಲ್ಲ. ಎಲ್ಲರೂ ಇಂದು ಅಥವಾ ನಾಳೆ ಸಾಯಲೇಬೇಕು. ಪ್ರತಿಯೊಬ್ಬರೂ ಒಂದು ದಿನ ಸಾಯಬೇಕು. ಸಮಯ ಮಾತ್ರ ನಿಶ್ಚಿತ. ನಾನು ಈ ಘಟನೆಯಿಂದ ಖಿನ್ನತೆಗೆ ಒಳಗಾಗಿದ್ದೇನೆ. ಆದರೆ ಅದೃಷ್ಟವನ್ನು ತಪ್ಪಿಸುವವರು ಯಾರು? ಇಂದಲ್ಲ ನಾಳೆ ಸಾಯಲೇಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷ ಅನಿಲ ಸಿಂಪಡಿಸಿದ ಬಳಿಕ ಜನರು ಗಾಬರಿಗೊಂಡು ಈ ಕಾಲ್ತುಳಿತ ನಡೆದಿದೆ ಎಂಬ ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನು ಒಪ್ಪಿಕೊಂಡ ಭೋಲೆ ಬಾಬಾ, “ಕಾಲ್ತುಳಿತದ ಹಿಂದೆ ಪಿತೂರಿಯಿದೆ. ಕೆಲವು ವ್ಯಕ್ತಿಗಳು ನಮ್ಮ ಸಂಸ್ಥೆ ನಡೆಸುತ್ತಿರುವ ಆಧ್ಯಾತ್ಮಿಕ ಆಚರಣೆಗಳನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಹಾಥರಸ್ ಕಾಲ್ತುಳಿತ ದುರಂತ : ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ನಿರಾಕರಣೆ

ವಿಶೇಷ ತನಿಖಾ ತಂಡ (ಎಸ್‌ಐಟಿ), ನ್ಯಾಯಾಂಗ ಆಯೋಗ ಮತ್ತು ಮಾನವ ಕಲ್ಯಾಣ ಸೌಹಾರ್ದ ಸಂಘದ ಅನುಯಾಯಿಗಳು ಸತ್ಯವನ್ನು ಬಹಿರಂಗಪಡಿಸಲು ಮತ್ತು ದುರಂತ ಘಟನೆಯ ಹಿಂದಿನ ಸಂಚುಕೋರರನ್ನು ಪತ್ತೆಹಚ್ಚುತ್ತಾರೆ ಎಂಬ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದೂ ಕೂಡಾ ಹೇಳಿದರು.

ಜುಲೈ 2ರಂದು ಹತ್ರಾಸ್‌ನ ಸಿಕಂದರಾರು ಪ್ರದೇಶದಲ್ಲಿ ನಡೆದ ಭೋಲೆ ಬಾಬಾರವರ ‘ಸತ್ಸಂಗ’ದಲ್ಲಿ ಕಾಲ್ತುಳಿತ ಸಂಭವಿಸಿದ್ದು, 121 ಜನರು ಸಾವನ್ನಪ್ಪಿದ್ದಾರೆ. ಘಟನೆಯ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ನ್ಯಾಯಾಂಗ ಆಯೋಗ ಎರಡನ್ನೂ ರಚಿಸಿದೆ.

ಸಿಕಂದರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರು ಮಾತ್ರ ಆರೋಪಿ ಎಂದು ಪಟ್ಟಿ ಮಾಡಿಲ್ಲ. ಆದರೆ ಜುಲೈ 9ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಎಸ್‌ಐಟಿ ವರದಿಯಲ್ಲಿ ಜನದಟ್ಟಣೆಯೇ ಕಾಲ್ತುಳಿತದ ಹಿಂದಿನ ಪ್ರಮುಖ ಕಾರಣ ಎಂದು ಹೇಳಲಾಗಿದ್ದು, ಘಟನೆಯಲ್ಲಿ ‘ಪಿತೂರಿ’ಯನ್ನು ತಳ್ಳಿಹಾಕಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...