ಹತ್ರಾಸ್ ಕಾಲ್ತುಳಿತ| ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದೇಶ

Date:

ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಾಸ್‌ ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ದುರಂತದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಲಿದೆ.

ನಿವೃತ್ತ ಐಎಎಸ್ ಅಧಿಕಾರಿ ಹೇಮಂತ್ ರಾವ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭವೇಶ್ ಕುಮಾರ್ ಸಿಂಗ್ ನ್ಯಾಯಾಂಗ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, “ನಾವು ಈ ವಿಚಾರದಲ್ಲಿ ಪಿತೂರಿಯ ದೃಷ್ಟಿಕೋನವನ್ನು ತಳ್ಳಿಹಾಕುವಂತಿಲ್ಲ. ಎಲ್ಲಾ ರೀತಿಯಲ್ಲಿಯೂ ಸಮಿತಿಯು ತನಿಖೆ ನಡೆಸಲಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಿತಿಯು ಈ ತನಿಖೆಯಲ್ಲಿ ಪೂರ್ಣಗೊಳಿಸಿ ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯಲು, ಇಂತಹ ಘಟನೆಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನ್ಯಾಯಾಂಗ ಆಯೋಗವು ಸೂಚಿಸಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?   ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಇನ್ನು, “ಕಾಲ್ತುಳಿತ ಸಂಭವಿಸಿದ ಸಂದರ್ಭದಲ್ಲಿ ಭೋಲೆ ಬಾಬಾ ಅವರ ಸ್ವಯಂಸೇವಕರು ಅದರ ನಿರ್ವಹಣೆ ಮಾಡುತ್ತಿದ್ದರು. ಜಿಲ್ಲಾಡಳಿತದ ಅಧಿಕಾರಿಗಳಿಗೆ ಪೆಂಡಲ್ ಒಳಗೆ ಹೋಗಲು ಅವಕಾಶವಿರಲಿಲ್ಲ” ಎಂದು ಆಗ್ರಾ ವಲಯದ ಎಡಿಜಿ ಅನುಪಮ್ ಕುಲಶ್ರೇಷ್ಠ ನೇತೃತ್ವದ ವಿಶೇಷ ತನಿಖಾ ತಂಡವು ಸಲ್ಲಿಸಿದ ಆರಂಭಿಕ ವರದಿಯನ್ನು ಉಲ್ಲೇಖಿಸಿ ಯುಪಿ ಸಿಎಂ ಹೇಳಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಬಾಬಾನ ಚಿತ್ರಗಳು ಮತ್ತು ವೀಡಿಯೊಗಳನ್ನು ಉಲ್ಲೇಖಿಸಿದ ಆದಿತ್ಯನಾಥ್, ಇದು ಬಾಬಾ ಅವರ ರಾಜಕೀಯ ಸಂಪರ್ಕವನ್ನು ತೋರಿಸುತ್ತದೆ ಎಂದರು. “ಪೆಂಡಲ್ ಹೊರಗೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಕಾಲ್ತುಳಿತದ ನಂತರ ಗಾಯಾಳುಗಳಿಗೆ ಸಹಾಯ ಮಾಡುವ ಪ್ರಯತ್ನವನ್ನು ಕೂಡಾ ಮಾಡದೆ ಬಾಬಾ ಅವರ ಸ್ವಯಂಸೇವಕರು ಅಲ್ಲಿಂದ ಓಡಿಹೋಗಿದ್ದಾರೆ” ಎಂದು ಹೇಳಿದರು.

ಇನ್ನು ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರು ಉಲ್ಲೇಖಿಸದೆ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರವೇ ಭೋಲೆ ಬಾಬಾರ ರಕ್ಷಣೆ ಮಾಡಲು ಯತ್ನಿಸುತ್ತಿದೆ. ಆದರೆ ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಬಲಿಯುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, “ತನಿಖೆ ಮುಂದುವರೆದಂತೆ, ದುರಂತದ ಜವಾಬ್ದಾರಿ ಯಾರೆಂದು ಹೆಸರು ಸೇರಿಸಲಾಗುವುದು” ಎಂದು ಹೇಳಿದರು.

ಇನ್ನು ಬಾಬಾ ಪರಾರಿಯಾಗಿದ್ದು, ಪೊಲೀಸರು ಟ್ರಸ್ಟ್ ಮೇಲೆ ದಾಳಿ ಮಾಡಿದ್ದಾರೆ. ಬಾಬಾ ಪರಾರಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಹತ್ರಾಸ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬುಧವಾರ, ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿರುವ ಬಾಬಾ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...