ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್‌ ವಿರುದ್ಧ ಖರ್ಗೆ ವಾಗ್ದಾಳಿ

Date:

ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ‌ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹೊಗಳಿ ಇತ್ತಿಚಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬರೆದ ಲೇಖನದ ಬಗ್ಗೆ ಮಾತನಾಡಿದರು. ಶಶಿ ತರೂರ್ ಇಂಗ್ಲಿಷ್‌ನಲ್ಲಿ ತುಂಬಾ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ, ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ ಎಂದರು.

26 ನಾಗರಿಕರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಖರ್ಗೆ, ಸಶಸ್ತ್ರ ಪಡೆಗಳಿಗೆ ಬೆಂಬಲ ನೀಡುವಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ನಿಂತಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?

ದೇಶದಲ್ಲಿ ಈಗ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ನಮ್ಮ ‘ಸಂವಿಧಾನ ಬಚಾವೋ ಯಾತ್ರೆ’ಯಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡತೊಡಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗದವರೂ ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ತುರ್ತು ಪರಿಸ್ಥಿತಿಯ 50ನೇ ವರ್ಷವನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈಗ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುತ್ತಿರುವವರು ಮುಗಿದು ಹೋಗಿರುವ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ. ಭಾರತದ ಸ್ವಾತಂತ್ರ‍್ಯ ಚಳವಳಿಯಲ್ಲಿ ಯಾವುದೇ ಕೊಡುಗೆ ನೀಡದವರು ಈಗ ಸಂವಿಧಾನ ರಚನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...