ಉತ್ತರ ಪ್ರದೇಶ | ದೆಹಲಿ-ಬರೇಲಿ ಹೆದ್ದಾರಿಯಲ್ಲಿ ಬಸ್‌ಗಳು ಮುಖಾಮುಖಿ; ಮೂವರು ಸಾವು, 49 ಮಂದಿಗೆ ಗಾಯ

Date:

ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿ ಸುಮಾರು 49 ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೆಹಲಿ-ಬರೇಲಿ ಹೆದ್ದಾರಿಯ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ-ಬರೇಲಿ ಹೆದ್ದಾರಿಯು ಕಾವಡ್ ಯಾತ್ರೆ ಮಾರ್ಗವಾಗಿದೆ ಎಂದು ವರದಿಯಾಗಿದೆ.

ಖಾಸಗಿ ಬಸ್ ಹರಿದ್ವಾರದಿಂದ ಶ್ರಾವಸ್ತಿ ಜಿಲ್ಲೆಗೆ ಸಾಗುತ್ತಿದ್ದರೆ, ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಯುಪಿಎಸ್‌ಆರ್‌ಟಿಸಿ) ಬಸ್ ಬರೇಲಿಯಿಂದ ದೆಹಲಿಗೆ ಸಾಗುತ್ತಿತ್ತು. ಎರಡೂ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ-ಬರೇಲಿ ಹೆದ್ದಾರಿ ಅಪಘಾತದ ಬಗ್ಗೆ ಮಾಹಿತಿ ಪಡೆದ ಬೆನ್ನಲ್ಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಜೋಗಿಂದರ್ ಸಿಂಗ್ ಮತ್ತು ರಾಮ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿದ್ಯಾಸಾಗರ್ ಮಿಶ್ರಾ ಅವರು ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಕೋಲಾರ | ಬಸ್‌ ಅಪಘಾತ; ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದ್ದವರು ದಾರುಣ ಸಾವು

“ಯುಪಿಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ಎನ್‌ಎಚ್-24 ನಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 49 ಮಂದಿ ಗಾಯಗೊಂಡಿದ್ದಾರೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಜೋಗಿಂದರ್ ಸಿಂಗ್ ತಿಳಿಸಿದ್ದಾರೆ.

ಮಿಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಾಳುಗಳನ್ನು ದಾಖಲಿಸಲಾಗಿದ್ದು, ಒಂಬತ್ತು ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಖಾಸಗಿ ಬಸ್ ತಪ್ಪು ದಾರಿಯಲ್ಲಿ ಸಾಗುತ್ತಿತ್ತು, ಇದರಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಜೋಗಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮೃತ ಚಾಲಕ ಯುಪಿ ರೋಡ್‌ವೇಸ್ ಬಸ್‌ನವನಾಗಿರಬಹುದು. ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ ಎಂದು ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...