ಆಂಧ್ರದ ಗ್ರಾಮದಲ್ಲಿ ನಿಗೂಢ ಕಾಯಿಲೆಯಿಂದ 20 ಸಾವು; ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

Date:

ಗುಂಟೂರು ಜಿಲ್ಲೆಯ ತುರಕಪಾಲೇಂ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರ ಸಾವುಗಳು ಸಂಭವಿಸುತ್ತಿರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ಅವಧಿಯಲ್ಲಿ 20 ಕ್ಕೂ ಹೆಚ್ಚು ಮಂದಿ ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಗ್ಯ ಇಲಾಖೆಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಗ್ರಾಮದ ಸ್ಥಿತಿಯನ್ನು ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಲು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಸಿಎಂ ಸೂಚಿಸಿದ್ದಾರೆ. ಶನಿವಾರ ಮತ್ತು ಭಾನುವಾರ ವಿಶೇಷ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು, ಪ್ರತಿಯೊಬ್ಬರಿಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆರೋಗ್ಯ ಮಾಹಿತಿ ಸಂಗ್ರಹಿಸಬೇಕೆಂದು ನಿರ್ದೇಶಿಸಿದ್ದಾರೆ.

ಮುಖ್ಯಮಂತ್ರಿಗಳು, ಅಗತ್ಯವಿದ್ದರೆ ಮಂಗಳಗಿರಿಯ ಏಮ್ಸ್ ವೈದ್ಯರ ಜೊತೆಗೆ ಅಂತಾರಾಷ್ಟ್ರೀಯ ತಜ್ಞರ ಸಹಾಯವನ್ನೂ ಪಡೆಯಲು ಸೂಚಿಸಿದರು. ಜೊತೆಗೆ ಗ್ರಾಮದ ಪ್ರತಿಯೊಬ್ಬರಿಗೂ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಬೇಕೆಂದು ತಿಳಿಸಿದರು. ಅಧಿಕಾರಿಗಳು ಈ ಸಾವುಗಳಿಗೆ “ಮೆಲಿಯೋಡೋಸಿಸ್” ಎಂಬ ಅಪರೂಪದ ಬ್ಯಾಕ್ಟೀರಿಯಾ ಸೋಂಕೇ ಕಾರಣವಾಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ರಕ್ತದ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದ್ದು, ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಮಳೆಗಾಲದಲ್ಲಿ ಹೊಲಗಳಲ್ಲಿ ನಿಂತ ನೀರಿನಲ್ಲಿ ಕೆಲಸ ಮಾಡುವ ರೈತರು ಈ ಸೋಂಕಿಗೆ ಹೆಚ್ಚು ಒಳಗಾಗುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ಆರೋಗ್ಯ ಸಚಿವ ವೈ. ಸತ್ಯಕುಮಾರ್ ಯಾದವ್ ಪರಿಸ್ಥಿತಿಯನ್ನು ಪರಿಶೀಲಿಸಿ, ಜುಲೈ ತಿಂಗಳಿಂದ ಸೆಪ್ಟೆಂಬರ್ 3ರವರೆಗೆ 23 ಸಾವುಗಳು ದಾಖಲಾಗಿದ್ದರೂ ಅಧಿಕಾರಿಗಳು ಎಚ್ಚರಿಕೆ ವಹಿಸದಿರುವುದನ್ನು ಗಂಭೀರವಾಗಿ ಪ್ರಶ್ನಿಸಿದರು. ತುರ್ತು ಪರಿಸ್ಥಿತಿಯನ್ನು ತಡವಾಗಿ ಗುರುತಿಸಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ನಡುವೆ ಪ್ರತಿಪಕ್ಷ ವೈಎಸ್ಆರ್‌ ಕಾಂಗ್ರೆಸ್ ಪಕ್ಷ, ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿದೆ. ನಾಯಕ ಗೋಪಿರೆಡ್ಡಿ ಶ್ರೀನಿವಾಸರೆಡ್ಡಿ ಮತ್ತು ಮಾಜಿ ಸಚಿವ ಅಂಬಟಿ ರಾಂಬಾಬು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರಕಪಾಲೇಂನಿಂದ ಪ್ರತಿದಿನ ಲಕ್ಷಾಂತರ ಲೀಟರ್ ನೀರನ್ನು ಗುಂಟೂರು ನಗರಕ್ಕೆ ಸಾಗಿಸಲಾಗುತ್ತಿದೆಯಾದರೂ, ಗ್ರಾಮದ ಜನರು ಮಾಲಿನ್ಯಗೊಂಡ ಕ್ವಾರಿ ನೀರನ್ನು ಕುಡಿಯುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಗ್ರಾಮದ ಆರೋಗ್ಯ ಕೇಂದ್ರ ಹೆಸರಿಗೆ ಮಾತ್ರ ಇದ್ದು, ಇದರಿಂದಾಗಿ 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಆರೋಪಿಸಿದರು. ತಕ್ಷಣವೇ ಶುದ್ಧ ಕುಡಿಯುವ ನೀರು ಪೂರೈಸಿ, ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಸ್ಥಾಪಿಸಿ, ತಜ್ಞ ವೈದ್ಯರನ್ನು ನಿಯೋಜಿಸಿ ಹಾಗೂ ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...