ಮನಕಲಕುವ ದೃಶ್ಯ | ಆಸ್ಪತ್ರೆಯಲ್ಲಿ ಡ್ರಿಪ್ ಬಾಟಲಿ ಹಿಡಿದು ನಿಂತ ಅಜ್ಜಿ

Date:

72 ವರ್ಷದ ಅಜ್ಜಿಯೊಬ್ಬರು ತಮ್ಮ ಗಾಯಗೊಂಡ ಮೊಮ್ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಡ್ರಿಪ್‌ ಬಾಟಲಿಯನ್ನು ಹಿಡಿದುಕೊಂಡು ನಿಂತಿದ್ದ ಮನಕಲಕುವ ಘಟನೆ ಮಧ್ಯಪ್ರದೇಶದ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಸಿಬ್ಬಂದಿ ಡ್ರಿಪ್ ಸ್ಟ್ಯಾಂಡ್‌ಅನ್ನು ನೀಡದ ಕಾರಣದಿಂದಾಗಿ, ಅಜ್ಜಿಯೇ ಡ್ರಿಪ್ ಬಾಟಲಿಯನ್ನು ಹಿಡಿದು ನಿಂತಿದ್ದರು ಎಂದು ವರದಿಯಾಗಿದೆ.

ರಸ್ತೆ ಅಪಘಾತಕ್ಕೀಡಾಗಿದ್ದ ಅಶ್ವನಿ ಮಿಶ್ರಾ ಅವರನ್ನು ಅಜ್ಜಿ ಆಸ್ಪತ್ರೆಗೆ ಕರೆತಂದಿದ್ದರು. ಆತನ ಸ್ಥಿತಿ ಗಂಭೀರವಾಗಿದ್ದ ಪರಿಣಾಮ, ಡ್ರಿಪ್‌ ಹಾಕಲಾಗಿತ್ತು. ಆದರೆ, ಡ್ರಿಪ್‌ ಸ್ಟ್ಯಾಂಡ್‌ ಲಭ್ಯವಿಲ್ಲವೆಂದು ಸಿಬ್ಬಂದಿಗಳು ಸ್ಟ್ಯಾಂಡ್‌ಅನ್ನು ಒದಗಿಸಲಾಗದೆ ಮೂಕ ಪ್ರೇಕ್ಷಕರಾಗಿದ್ದರು. ಈ ವೇಳೆ, ಡ್ರಿಪ್‌ ಬಾಟಲಿಯನ್ನು ಕೈಯಲ್ಲಿ ಹಿಡಿದು, ಬಾಲಟಲಿಯಲ್ಲಿದ್ದ ಗ್ಲೂಕೋಸ್‌ ಪೂರ್ತಿಯಾಗಿ ದೇಹಕ್ಕೆ ಇಳಿಯುವವರೆಗೂ ನಿಂತಿದ್ದರು ಎಂದು ತಿಳಿದುಬಂದಿದೆ.

ಆದಾಗ್ಯೂ, ಆಸ್ಪತ್ರೆಯಲ್ಲಿ ಡ್ರಿಪ್ ಸ್ಟ್ಯಾಂಡ್‌ಗಳ ಕೊರತೆಯಿಲ್ಲ. ಸಿಬ್ಬಂದಿಗಳ ಅಸಡ್ಡೆಯಿಂದ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ದೃಢಪಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: 1947 – ಅಂದು ಭಾರತವು ಸ್ವಾತಂತ್ರ್ಯ ಗಳಿಸಿತು; ಇಂದು ಜಾತ್ಯತೀತ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದೆ!

ಮಿಶ್ರಾ ಅವರನ್ನು ಕರೆತಂದ ಆ್ಯಂಬುಲೆನ್ಸ್‌ ಕೂಡ ಸುಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ, ಆ್ಯಂಬುಲೆನ್ಸ್‌ನಲ್ಲಿ ಬಂದರೂ, ಆತನ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಮಿಶ್ರಾ ಅವರನ್ನು ಆಸ್ಪತ್ರೆಯ ಗೇಟ್‌ನಲ್ಲಿ ಇಳಿಸಿದ ನಂತರ, ವಾಹನವು ಕೆಟ್ಟುಹೋಯಿತು. ಅದನ್ನು ಮತ್ತೆ ಸ್ಟಾರ್ಟ್‌ ಮಾಡಲು, ಪಕ್ಕದಲ್ಲಿದ್ದವರು ಅದನ್ನು ತಳ್ಳಬೇಕಾಯಿತು ಎಂದು ವರದಿಯಾಗಿದೆ.

ಪ್ರತಿದಿನ ನೂರಾರು ರೋಗಿಗಳನ್ನು ನಿಭಾಯಿಸುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯು ಮೂಲಭೂತ ಸೌಲಭ್ಯಗಳು, ಸ್ಟ್ರೆಚರ್‌ಗಳು, ಹಾಸಿಗೆಗಳು ಹಾಗೂ ಸಕಾಲಿಕ ನೆರವನ್ನು ಒದಗಿಸದಿದ್ದಕ್ಕಾಗಿ ಪದೇ ಪದೇ ಟೀಕೆಗಳನ್ನು ಎದುರಿಸುತ್ತಿದೆ. ಇದೀಗ, ಮತ್ತೊಂದು ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...