ಭಾರತದ ಪ್ರಮುಖ 10 ನಗರಗಳಲ್ಲಿ ಬಿಸಿಗಾಳಿ ಹೆಚ್ಚಳ; ರೆಡ್‌ ಅಲರ್ಟ್ ಘೋಷಣೆ

Date:

ದೇಶದ ಹಲವಾರು ಭಾಗಗಳಲ್ಲಿ ಬಿಸಿ ಗಾಳಿ, ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಕೆಲವು ನಗರಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ರೆಡ್‌ ಅಲರ್ಟ್’ ಘೋಷಿಸಿದೆ. ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಮಧ್ಯಪ್ರದೇಶಗಳಿಗೆ ಐಎಂಡಿ ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಗರಿಷ್ಠ 46 ಡಿಗ್ರಿ ತಾಪಮಾನ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ ಬಿಸಿಗಾಳಿ ಅಧಿಕವಾಗಿದ್ದು ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಸ್ಥಾನದ ಅನೇಕ ಅಥವಾ ಹೆಚ್ಚಿನ ಭಾಗಗಳಲ್ಲಿ ಬಿಸಿಗಾಳಿ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿಯ ಕೆಲವು ಅಥವಾ ಹಲವು ಭಾಗಗಳಲ್ಲಿ ತಾಪಮಾನ ಅಧಿಕವಾಗಿರಲಿದೆ. ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮೇ 27ರಿಂದ 29ರವರೆಗೆ ತಾಪಮಾನ ಅಧಿಕವಾಗಿರಲಿದೆ. ಅದಾದ ಬಳಿಕ ಕ್ರಮೇಣ ಕಡಿಮೆಯಾಗಲಿದೆ” ಎಂದು ಐಎಂಡಿ ಬುಲೆಟಿನ್‌ನಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ?  ಬಿಸಿಗಾಳಿ | ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಶಾರೂಖ್ ಖಾನ್

ಮಂಗಳವಾರದಂದು, ರಾಜಸ್ಥಾನದ ಚುರು ದೇಶದಲ್ಲಿ ಅತಿ ಹೆಚ್ಚು ತಾಪಮಾನ 50.5 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಾಗಿದೆ. ರಾಜಸ್ಥಾನದಲ್ಲಿ ಮಂಗಳವಾರ ಬಿಸಿಗಾಳಿಗೆ ಮೂವರು ಸಾವನ್ನಪ್ಪಿದರೆ, ತಾಪಮಾನದಿಂದ ಅಸ್ವಸ್ಥತೆಗೆ ಒಳಗಾಗಿರುವವರ ಸಂಖ್ಯೆಯು 3,965ಕ್ಕೆ ಏರಿಕೆಯಾಗಿದೆ.

ಅತೀ ಅಧಿಕ ತಾಪಮಾನವಿರುವ ಹತ್ತು ನಗರಗಳು

1. ಚುರು, ರಾಜಸ್ಥಾನ: 50.5°C
2. ಸಿರ್ಸಾ, ಹರಿಯಾಣ: 50.3°C
3. ಮುಂಗೇಶಪುರ, ದೆಹಲಿ: 49.9°C
4. ಝಾನ್ಸಿ, ಉತ್ತರ ಪ್ರದೇಶ: 49.0°C
5. ಪೃಥ್ವಿಪುರ (ನಿವಾರಿ), ಮಧ್ಯಪ್ರದೇಶ: 48.5°C
6. ದಾಲ್ತೋಂಗಂಜ್, ಜಾರ್ಖಂಡ್: 47.5°C
7. ಭಟಿಂಡಾ, ಪಂಜಾಬ್: 47.2°C
8. ಡೆಹ್ರಿ, ಬಿಹಾರ: 47.0°C
9. ಮುಂಗೇಲಿ, ಛತ್ತೀಸ್‌ಗಢ: 47.0°C
10. ಬೌಧ್, ಒಡಿಶಾ: 45.9°C

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತ| ಬಂಗಾಳ, ಬಾಂಗ್ಲಾದೇಶದಲ್ಲಿ 16 ಮಂದಿ ಸಾವು

ಮಳೆ ಮುನ್ಸೂಚನೆ ನೀಡಿದ ಐಎಂಡಿ

ದೇಶದ ಕೆಲವು ರಾಜ್ಯಗಳಲ್ಲಿ ಬಿಸಿಯ ತಾಪ ಅಧಿಕವಾಗಿದ್ದರೆ, ಇನ್ನೂ ಕೆಲವು ಪ್ರಮುಖ ನಗರಗಳಲ್ಲಿ ರೆಮಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಕಾರಣ ರೆಡ್‌ ಅಲರ್ಟ್ ಘೋಷಿಸಲಾಗಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮೇ 29ರಂದು ಸುಮಾರು 115.5 ರಿಂದ 204.4 ಮಿಮೀ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮೇ 9ರಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...