ಹಿಮಾಚಲ ಪ್ರದೇಶ | ಭಾರೀ ಮಳೆಗೆ 52 ಮಂದಿ ಬಲಿ: ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹದ ಭೀತಿ

Date:

ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಏಳು ಜಿಲ್ಲೆಗಳ ಕೆಲವು ಭಾಗಗಳಲ್ಲಿ ದಿಡೀರ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮಂಗಳವಾರ ಎಚ್ಚರಿಕೆ ನೀಡಿದೆ.

ಚಂಬಾ, ಕಾಂಗ್ರಾ, ಮಂಡಿ, ಕುಲ್ಲು, ಶಿಮ್ಲಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಪ್ರವಾಹ ಅಪಾಯ ಅಧಿಕವಾಗಿದೆ. ಹವಾಮಾನ ಇಲಾಖೆಯು ಈಗಾಗಲೇ ‘ಯೆಲ್ಲೋ’ ಅಲರ್ಟ್‌ ಅನ್ನು ಕೂಡಾ ಘೋಷಿಸಿದೆ. ಮುಂದಿನ ಸೋಮವಾರದವರೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ | ಮಳೆಯ ಅಬ್ಬರ; ಭೂಕುಸಿತಕ್ಕೆ 350 ಮಂದಿ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮಾಚಲ ಪ್ರದೇಶದ ತುರ್ತು ಕಾರ್ಯಾಚರಣೆ ಕೇಂದ್ರ(SEOC) ಪ್ರಕಾರ, ರಾಜ್ಯದಲ್ಲಿ 163 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 174 ನೀರು ಸರಬರಾಜು ಯೋಜನೆಗಳ ಮೇಲೆ ಭಾರೀ ಮಳೆಯ ಪ್ರಭಾವ ಉಂಟಾಗಿವೆ.

ಜೂನ್ 1ರಿಂದ ಜುಲೈ 8ರವರೆಗೆ ಹಿಮಾಚಲ ಪ್ರದೇಶದಲ್ಲಿ ವಾಡಿಕೆಯಂತೆ 152.6 ಮಿಮೀ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಮಂಡಿ ಜಿಲ್ಲೆಯಲ್ಲಿ ಶೇ. 110ರಷ್ಟು, ಶಿಮ್ಲಾ ಶೇ.89 ಮತ್ತು ಉನಾ ಶೇ. 86ರಷ್ಟು ಮಳೆಯಾಗಿದೆ.

ಜೂನ್ 20ರಂದು ಮಾನ್ಸೂನ್ ಹಿಮಾಚಲ ಪ್ರದೇಶವನ್ನು ಅಪ್ಪಳಿಸಿತ್ತು. ಅದಿನಿಂದ ಈವರೆಗೆ ಹಿಮಾಚಲ ಪ್ರದೇಶದಲ್ಲಿ 23 ದಿಢೀರ್ ಪ್ರವಾಹ, 19 ಮೇಘಸ್ಫೋಟ ಮತ್ತು 16 ಭೂಕುಸಿತಗಳು ಸಂಭವಿಸಿದೆ. ರಾಜ್ಯದಲ್ಲಿ ಇದುವರೆಗೆ ಮಳೆಯಿಂದಾಗಿ 52 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಿ ಜಿಲ್ಲೆಯಲ್ಲಿ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಕಳೆದ ವಾರ ತುನಾಗ್, ಗೋಹರ್ ಮತ್ತು ಕರ್ಸೋಗ್ ಉಪವಿಭಾಗಗಳಲ್ಲಿ ನಾಪತ್ತೆಯಾದ 28 ಜನರನ್ನು ಪತ್ತೆಹಚ್ಚಲು ಡ್ರೋನ್‌ಗಳು ಮತ್ತು ಸ್ನಿಫರ್ ನಾಯಿಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...