ಮುಂಬೈನಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ, ರೈಲು ಸೇವೆಗಳಲ್ಲಿ ವ್ಯತ್ಯಯ

Date:

ಸೋಮವಾರ ಮುಂಜಾನೆ ಮುಂಬೈ ಮತ್ತು ಇಲ್ಲಿನ ಉಪನಗರಗಳಲ್ಲಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಗಳಲ್ಲಿ ವ್ಯಾಪಕವಾಗಿ ಜಲಾವೃತಗೊಂಡು ಜನಜೀವನ ಅಸ್ಥವ್ಯಸ್ಥಗೊಂಡಿದೆ. ನಗರದ ವಿವಿಧೆಡೆ 300 ಮಿಲಿ ಮೀಟರ್‌ಗೂ ಅಧಿಕ ಮಳೆಯಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ಅಂಧೇರಿ, ಕುರ್ಲಾ, ಭಾಂಡೂಪ್, ಕಿಂಗ್ಸ್ ಸರ್ಕಲ್ ಮತ್ತು ದಾದರ್ ಸೇರಿದಂತೆ ಹಲವು ಪ್ರದೇಶಗಳು ಮಳೆಯಿಂದ ಹೆಚ್ಚು ಹಾನಿಯುಂಟಾಗಿವೆ. ಬಹುತೇಕ ಪ್ರದೇಶಗಳಲ್ಲಿ 2 ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಾಗರಿಕ ಮಂಡಳಿಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಭಾರೀ ಮಳೆಯಿಂದಾಗಿ ಉಪನಗರ ರೈಲು ಸೇವೆಗಳು ಮತ್ತು ಬೆಸ್ಟ್ ಬಸ್ ಸೇವೆಗಳಿಗೆ ಅಡಚಣೆಯುಂಟಾಗಿದೆ. ಹಲವು ಬೆಸ್ಟ್ ಬಸ್‌ಗಳನ್ನು ಅವುಗಳ ನಿಯಮಿತ ಮಾರ್ಗಗಳಿಂದ ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಅಧಿಕಾರಿಗಳ ಪ್ರಕಾರ, ಮುಂದಿನ ಗಂಟೆಗಳಲ್ಲಿ ನಗರದಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ರೈಲುಗಳ ರದ್ದು

ಕೇಂದ್ರ ರೈಲ್ವೆ ಎಂಎಂಆರ್‌ ಸಿಎಸ್‌ಎಂಟಿ (12110), ಪುಣೆ-ಸಿಎಸ್‌ಎಂಟಿ (11010), ಪುಣೆ-ಸಿಎಸ್‌ಎಂಟಿ ಡೆಕ್ಕನ್ (12124), ಪುಣೆ-ಸಿಎಸ್‌ಎಂಟಿ ಡೆಕ್ಕನ್ (11007) ಮತ್ತು ಸಿಎಸ್‌ಎಂಟಿ-ಪುಣೆ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (12127) ರೈಲುಗಳನ್ನು ರದ್ದುಗೊಳಿಸಲಾಗಿದೆ.

ಹಳಿಗಳಲ್ಲಿ ನೀರು ಹೆಚ್ಚಿದ ಕಾರಣ ಸ್ಥಳೀಯ ರೈಲು ಸೇವೆಗಳನ್ನು ಸಹ ಸ್ವಲ್ಪ ಸಮಯದವರೆಗೆ ನಿಲ್ಲಿಸಿ ನಂತರ ಪುನರಾರಂಭಿಸಲಾಯಿತು.

“ಭಾರೀ ಮಳೆಯಿಂದಾಗಿ ಕೇಂದ್ರ ರೈಲ್ವೆ ಉಪನಗರ ಸೇವೆಗಳಿಗೆ ಅಡಚಣೆಯಾಗಿದೆ. ಸ್ಥಳೀಯ ಸಿಯಾನ್ ಮತ್ತು ಭಾಂಡೂಪ್ ಮತ್ತು ನಹೂರ್ ನಿಲ್ದಾಣಗಳ ನಡುವೆ ರೈಲು ಸೇವೆಗಳು ತೊಂದರೆಗೀಡಾಗಿವೆ. ಮಳೆ ನೀರು ಹಳಿಗಳ ಮೇಲೆ ನಿಂತ ಕಾರಣ ರೈಲುಗಳನ್ನು ಸುಮಾರು ಒಂದು ಗಂಟೆ ಸ್ಥಗಿತಗೊಳಿಸಲಾಗಿತ್ತು. ಈಗ ನೀರು ಸ್ವಲ್ಪ ಕಡಿಮೆಯಾಗಿದ್ದು, ರೈಲುಗಳನ್ನು ಪುನರಾರಂಭಿಸಲಾಗಿದೆ” ಎಂದು ಹಿರಿಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಮಳೆಯ ಕಾರಣದಿಂದ ಇಂದು ಮುಂಬೈ ವಿಮಾನ ನಿಲ್ದಾಣದ ಮಾರ್ಗದಲ್ಲಿ ಭಾರೀ ದಟ್ಟಣೆ ಮತ್ತು ನಿಧಾನಗತಿಯ ವಾಹನಗಳ ಸಂಚಾರ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ  ಪ್ರಯಾಣಿಕರು ತಮ್ಮ ಪ್ರಯಾಣಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...